Asianet Suvarna News Asianet Suvarna News

ಕೆಆರ್‌ಎಸ್‌ ಅಣೆಕಟ್ಟೆ ಒಳಹರಿವಿನಲ್ಲಿ ಹೆಚ್ಚಳ

  • ಕೊಡಗಿನಲ್ಲಿ ಸುರಿಯುತ್ತಿರುವ ನಿರಂತರ ಮಳೆ
  •  ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ಒಳಹರಿವಿನಲ್ಲಿ ಏರಿಕೆ
  • ಜಲಾಶಯದ ನೀರಿನ ಮಟ್ಟದಲ್ಲೂ 1 ಅಡಿಯಷ್ಟು ಹೆಚ್ಚಳ
water level Rises in KRS Dam snr
Author
Bengaluru, First Published Jun 17, 2021, 9:00 AM IST

ಮಂಡ್ಯ (ಜೂ.17): ಕೊಡಗಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಜಿಲ್ಲೆಯ ಜೀವನಾಡಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ಒಳಹರಿವಿನಲ್ಲೂ ಏರಿಕೆಯಾಗಿದೆ. ಜಲಾಶಯದ ನೀರಿನ ಮಟ್ಟದಲ್ಲೂ 1 ಅಡಿಯಷ್ಟು ಹೆಚ್ಚಳವಾಗಿದೆ.

ಪ್ರಸ್ತುತ ಜಲಾಶಯದ ನೀರಿನ ಮಟ್ಟ83.50 ಅಡಿ ಇದ್ದು, ಅಣೆಕಟ್ಟೆಗೆ 6379 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಅಣೆಕಟ್ಟೆಯಿಂದ 356 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಜಲಾಶಯದಲ್ಲಿ ಒಟ್ಟು 12.416 ಟಿಎಂಸಿ ಅಡಿಯಷ್ಟುನೀರು ಸಂಗ್ರಹವಾಗಿದೆ.

ಕೆಆರ್‌ಎಸ್‌ ಬಿರುಕು ಬಿಟ್ಟಿರುವ ವಿಷಯ ಸತ್ಯ : ಸುಮಲತಾ ..

ಕಳೆದ ವರ್ಷ ಇದೇ ಅವಧಿಯಲ್ಲಿ ಅಣೆಕಟ್ಟೆಯಲ್ಲಿ 92.69 ಅಡಿ ನೀರಿತ್ತು. ಅಂದು ಜಲಾಶಯಕ್ಕೆ 1284 ಕ್ಯುಸೆಕ್‌ ಒಳಹರಿವಿದ್ದರೆ, 1035 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿತ್ತು. ಅಂದು ಅಣೆಕಟ್ಟೆಯಲ್ಲಿ 17.605 ಟಿಎಂಸಿ ಅಡಿ ನೀರು ಸಂಗ್ರಹವಾಗಿತ್ತು.

ಮಂಗಳವಾರ ಸಂಜೆಯವರೆಗೂ ಜಲಾಶಯದ ಒಳಹರಿವಿನಲ್ಲಿ ಏರಿಕೆಯಾಗಿರಲಿಲ್ಲ. ಕೇವಲ 1218 ಕ್ಯುಸೆಕ್‌ ನೀರು ಮಾತ್ರ ದಾಖಲಾಗಿತ್ತು. ರಾತ್ರಿ ವೇಳೆಗೆ ಒಳಹರಿವಿನಲ್ಲಿ ಏರಿಕೆ ಕಂಡುಬಂದಿತ್ತು. 6379 ಕ್ಯುಸೆಕ್‌ ಒಳಹರಿವಿನೊಂದಿಗೆ ಬೆಳಗಾಗುವುದರೊಳಗೆ ಜಲಾಶಯದ ನೀರಿನ ಮಟ್ಟ82.44 ಅಡಿಯಿಂದ 83.50 ಅಡಿಗೆ ಏರಿಕೆಯಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಜಲಾಶಯದಲ್ಲಿ 9 ಅಡಿಗಳಷ್ಟುಕಡಿಮೆ ನೀರು ಸಂಗ್ರಹವಾಗಿದೆ.

ಕೆ ಆರ್ ಎಸ್‌ನಲ್ಲಿ ಡಿಸ್ನಿಲ್ಯಾಂಡ್ ನಿರ್ಮಾಣ: ಭಾರೀ ವಿರೋಧ ...

ಕಾವೇರಿ ಉಗಮ ಸ್ಥಾನ ಕೊಡಗಿನಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಇದರ ಪರಿಣಾಮ ಕೆಆರ್‌ಎಸ್‌ ಅಣೆಕಟ್ಟೆಗೆ ಹರಿದುಬರುತ್ತಿರುವ ಒಳಹರಿವಿನಲ್ಲೂ ಏರಿಕೆ ಕಂಡುಬಂದಿದೆ. ಅಣೆಕಟ್ಟೆಗೆ ನೀರು ಹರಿದುಬರುತ್ತಿರುವುದು ರೈತರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.

ಜಿಲ್ಲೆಯಲ್ಲೂ ಮುಂಗಾರು ಕಾರ್ಮೋಡಗಳು ಆವರಿಸಿ ಆಗಾಗ ಮಳೆ ಸುರಿಸುತ್ತಿರುವುದರಿಂದ ರೈತರು ಭೂಮಿಯನ್ನು ಹದಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗೆ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಅಗತ್ಯವಿರುವಷ್ಟುದಾಸ್ತಾನು ಮಾಡಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಉತ್ತಮ ಮಳೆಯಾಗಬಹುದೆಂಬ ನಿರೀಕ್ಷೆಯೊಂದಿಗೆ ಕೃಷಿ ಚಟುವಟಿಕೆಗೆ ಚುರುಕು ನೀಡಿದ್ದಾರೆ.

Follow Us:
Download App:
  • android
  • ios