ನಮ್ಮ ಸರ್ಕಾರದಲ್ಲಿ ಮನೆಗಳನ್ನು ಮಂಜೂರು ಮಾಡಿಕೊಡುತ್ತೇವೆ : ಡಾ. ಯತೀಂದ್ರ

ನಮ್ಮ ಸರ್ಕಾರದಲ್ಲಿ ಮತ್ತೆ ಮನೆಗಳನ್ನು ಮಂಜೂರು ಮಾಡಿಕೊಡುತ್ತೇವೆ ಎಂದು ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.

We allot houses in our government : Dr. Yatindra snr

  ನಂಜನಗೂಡು :  ನಮ್ಮ ಸರ್ಕಾರದಲ್ಲಿ ಮತ್ತೆ ಮನೆಗಳನ್ನು ಮಂಜೂರು ಮಾಡಿಕೊಡುತ್ತೇವೆ ಎಂದು ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣ ಕ್ಷೇತ್ರದ ಸರಗೂರು, ನಗರ್ಲೆ, ಬಸವನಪುರ, ಕಬ್ಬಲಗೆರೆಹುಂಡಿ, ಹನಿಯಂಬಳ್ಳಿ, ಗೋಣಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಎಲ್ಲ ಊರುಗಳಲ್ಲೂ ಬಡವರು ನಿವೇಶನವಿದೆ, ಮನೆ ಮಂಜೂರು ಮಾಡಿಕೊಡಿ ಎನ್ನುತ್ತಿದ್ದಾರೆ. 2013 ರಿಂದ 2018ರವರೆಗೆ ಇದ್ದ ಕಾಂಗ್ರೆಸ್ ಸರ್ಕಾರ ಮಂಜೂರು ಮಾಡಿದ್ದ ಮನೆಗಳ ಪಟ್ಟಿಯನ್ನು ಬಿಜೆಪಿ ಸರ್ಕಾರ ಲಾಕ್ ಮಾಡಿ ಒಂದು ಮನೆಯನ್ನು ಕೊಟ್ಟಿಲ್ಲ. ಇವರೆಲ್ಲ ಬಡವರ ವಿರೋಧಿಗಳು ಎಂದ ಅವರು, ನಮ್ಮ ಸರ್ಕಾರದಲ್ಲಿ ಮತ್ತೆ ಮನೆಗಳನ್ನು ಮಂಜೂರು ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.

ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ. ಬಸವರಾಜು, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್.ವಿಜಯ್, ಶಿವಸ್ವಾಮಿ, ಪ್ರದೀಪ್ ಕುಮಾರ್, ಇಒ ರಾಜೇಶ್ ಜೆರಾಲ್ಡ್, ಗ್ರಾಪಂ ಅಧ್ಯಕ್ಷೆ ಮಹಾದೇವಮ್ಮ, ಉಪಾಧ್ಯಕ್ಷೆ ಸಂಧ್ಯಾರಾಣಿ, ಡಿಒಎಸ್ಪಿ ಗೋವಿಂದರಾಜು, ಎಸ್ ಐ ಸುನಿಲ್ ಮುಖಂಡರಾದ ರಂಗಸ್ವಾಮಿ, ಪ್ರಮೋದ್ ಕುಮಾರ್, ಮನು ನರಸಿಂಹಮೂರ್ತಿ, ಅಲ್ತಾಫ್ ಪಾಷಾ, ಉಬೇದುಲ್ಲಾ ಖಾನ್, ನಂದೀಶ್, ಶಿವಕುಮಾರ್, ನಾರಾಯಣ, ಗುರುಪಾದ ಸ್ವಾಮಿ, ಇಸ್ಮಾಯಿಲ್, ಮೂಗಶೆಟ್ಟಿ, ಸಿಡಿಪಿಒ ಮಂಜುಳಾ, ಪಿಡಿಒ ಈಶಕುಮಾರ್ ಇದ್ದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಯಿಂದ ಬಡವರಿಗೆ ನೆಮ್ಮದಿ

ಮೈಸೂರು (ಡಿ.16): ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಬಡವರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ವರುಣ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ವರುಣ ಕ್ಷೇತ್ರದ ತಾಂಡವಪುರ ಗ್ರಾಪಂ ವ್ಯಾಪ್ತಿಯ ಹೆಬ್ಯಾ, ಅಡಕನಹಳ್ಳಿಹುಂಡಿ, ತಾಂಡವಪುರ, ಚಿಕ್ಕಯ್ಯನ ಛತ್ರ, ಬಂಚಳ್ಳಿ ಹುಂಡಿ ಗ್ರಾಮಗಳಿಗೆ ಭೇಟಿ ನೀಡಿ ಕಂದಾಯ ಅದಾಲತ್, ಪಿಂಚಣಿ ಅದಾಲತ್ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಹೆಬ್ಯಾ ಗ್ರಾಮದಲ್ಲಿ ಅವರು ಮಾತನಾಡಿದರು.

ನಿಮ್ಮೆಲ್ಲರ ಆರ್ಶೀವಾದದಿಂದ ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ. ನಿಮ್ಮ ಗ್ರಾಮಕ್ಕೆ ಸಿಸಿ ರಸ್ತೆ, ಬಸ್ ಬೇಕು, ಸ್ಮಶಾನ ಅಭಿವೃದ್ಧಿ, ಅಂಬೇಡ್ಕರ್ ಭವನ, ದೇವಸ್ಥಾನ, ಸೇತುವೆ ನಿರ್ಮಾಣ, ಯುಜಿಡಿ, ವಿದ್ಯುತ್ ಕಂಬ, ಪೌರಕಾರ್ಮಿಕರಿಗೆ ನಿವೇಶನ ಸೇರಿದಂತೆ 20 ಕಾಮಗಾರಿಗಳ ಪಟ್ಟಿ ನೀಡಿದ್ದೀರಿ. ನಿಮ್ಮ ಎಲ್ಲಾ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಈ ಅವಧಿಯಲ್ಲಿ ಮಾಡಿಕೊಡಲು ಪ್ರಯತ್ನಿಸುತ್ತೇನೆ ಎಂದರು. ಗೃಹಲಕ್ಷ್ಮಿ ಹಣ ನೋಂದಾಯಿಸಿಕೊಂಡಿರುವ ಪ್ರತಿಯೊಬ್ಬರಿಗೂ ಬರುತ್ತದೆ, ಮಹಿಳೆಯರು ಆತಂಕಪಡಬೇಕಾಗಿಲ್ಲ. 150 ಜನ ಪೌರಕಾರ್ಮಿಕರಿಗೆ ಎಲ್ಲೆಲ್ಲಿ ನಿವೇಶನಗಳಿವೆ ಗುರುತಿಸಿ, ಆಯಾ ಗ್ರಾಮಗಳಲ್ಲಿ ನಿವೇಶನ ಕೊಡಲು ಕ್ರಮ ಕೈಗೊಳ್ಳವುದಾಗಿ ಅವರು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಏನು ಪ್ರಧಾನಿಮಂತ್ರಿನಾ?: ಸಂಸದ ಮುನಿಸ್ವಾಮಿ

ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಗ್ರಾಪಂ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷ ಶಿವಣ್ಣ, ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಕೆ.ಎನ್. ವಿಜಯ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಪಿಡಿಒ ಪ್ರಕಾಶ್, ಗ್ರಾಪಂ ಸದಸ್ಯರಾದ ನಾಗವೇಣಿ, ರೇವಮ್ಮ, ಸುಧಾರಾಣಿ, ಭಾಗ್ಯ, ಇಒ ಜೆರಾಲ್ಡ್ ರಾಜೇಶ್, ಸಿಡಿಪಿಒ ಮಂಜುಳಾ, ಸರ್ಕಲ್ ಇನ್ಸ್ ಪೆಕ್ಟರ್ ಸುನಿಲ್ ಕುಮಾರ್, ಮುಖಂಡರಾದ ರಾಜು, ಬಾಕನಹುಂಡಿ ಶಿವು, ಹಿನಕಲ್ ಉದಯ್, ಎಪಿಎಂಸಿ ಮಾಜಿ ಸದಸ್ಯ ಬಸವರಾಜು ಇದ್ದರು.

ಕೂಸಿನ ಮನೆ ಉದ್ಘಾಟಿಸಿದ ಡಾ. ಯತೀಂದ್ರ ಸಿದ್ದರಾಮಯ್ಯ: ಗ್ರಾಮೀಣ ಪ್ರದೇಶದಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಅವರ ಮಕ್ಕಳ ಸುರಕ್ಷತೆ ಮತ್ತು ಪೋಷಣೆಗೆ ಕೂಸಿನ ಮನೆ ಅಗತ್ಯವಿದೆ ಎಂದು ಮಾಜಿ ಶಾಸಕ ಹಾಗೂ ಆಶ್ರಯ ಸಮಿತಿ ಅಧ್ಯಕ್ಷ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಂಜನಗೂಡು ತಾಲೂಕಿನ ತಾಂಡವಪುರ ಗ್ರಾಪಂ ಪಕ್ಕದ ಹಳೆಯ ಸರ್ಕಾರಿ ಶಾಲಾ ಕಟ್ಟಡದಲ್ಲಿ ವ್ಯವಸ್ಥಿತವಾಗಿ ಸಿದ್ಧಗೊಂಡಿರುವ ಕೂಸಿನ ಮನೆ ಉದ್ಘಾಟಿಸಿ ಅವರು ಮಾತನಾಡಿದರು.

Latest Videos
Follow Us:
Download App:
  • android
  • ios