ನಾವು ಯಾವುದೇ ಒಂದು ಜಾತಿ ಧರ್ಮ ಹಾಗೂ ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯಕ್ಕೂ ಸ್ಪಂದಿಸಿ ಕೆಲಸ ಮಾಡಿದ್ದೇವೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. 

ಹಾರೋಹಳ್ಳಿ (ಡಿ.04): ನಾವು ಯಾವುದೇ ಒಂದು ಜಾತಿ ಧರ್ಮ ಹಾಗೂ ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯಕ್ಕೂ ಸ್ಪಂದಿಸಿ ಕೆಲಸ ಮಾಡಿದ್ದೇವೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಮರಳವಾಡಿ ಹೋಬಳಿ ಚಾಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿದ ನಂತರ ಎಂ.ಮಣಿಯಾಂಬಾಳ್‌ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಮೊದಲ ಬಾರಿಗೆ ಮುಖ್ಯಮಂತ್ರಿಯಾದ ವೇಳೆ ದಲಿತ ಸಮುದಾಯದ ಹೆಣ್ಣು ಮಗಳನ್ನು ಮೂರು ದಿನ ಅನುಗ್ರಹದಲ್ಲಿ ಯಾವ ರೀತಿ ಸ್ಪಂದಿಸಬೇಕು ಎಂಬುದನ್ನು ಇಡೀ ರಾಜ್ಯಕ್ಕೆ ತೋರಿಸಿರುವ ವ್ಯಕ್ತಿತ್ವ ಅವರದು ಎಂದರು.

ಕುಮಾರಣ್ಣ ನೇತೃತ್ವದಲ್ಲಿ ಪಂಚರತ್ನ ಯಾತ್ರೆ ಈಗಾಗಲೇ ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಗಿಸಿ ತುಮಕೂರು ಜಿಲ್ಲೆಯಲ್ಲಿ ಸಾಗುತ್ತಿದೆ. ನಾನು ಕೂಡ ಭಾಗವಹಿಸಿದ್ದೇನೆ. ಒಳ್ಳೆಯ ಜನಸ್ಪಂದನೆ ಸಿಗುತ್ತಿದೆ ಎಂದು ತಿಳಿಸಿದರು. ಸ್ವಾತಂತ್ರ್ಯ ಬಂದು 75 ವರ್ಷಗಳಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ಇವತ್ತಿನ ವರೆಗೂ ಸರ್ಕಾರಿ ಶಾಲೆ, ಆಸ್ಪತ್ರೆಗಳಲ್ಲಿ ಹೊಸ ವ್ಯವಸ್ಥೆ ಬದಲಾವಣೆಯಾಗಿಲ್ಲ. ರೈತರಿಗೆ ಕಾರ್ಯಕ್ರಮ ಕೊಡುತ್ತಿಲ್ಲ. ಯುವಕರಿಗೆ ಉದ್ಯೋಗ ಸೃಷ್ಠಿ ಮಾಡುತ್ತಿಲ್ಲ. ಸ್ತ್ರೀಶಕ್ತಿ ಸಾಲ ಮನ್ನಾ ಮಾಡುತ್ತಿಲ್ಲ ಎಂದರು.

Ramanagara: ಪಂಚ​ರತ್ನ ಯೋಜನೆ ಅನು​ಷ್ಠಾನದ ಗುರಿ: ನಿಖಿಲ್‌ ಕುಮಾ​ರ​ಸ್ವಾಮಿ

ನಾಡಿನ ಬಡವರು, ರೈತರ ಉದ್ಧಾರಕ್ಕಾಗಿ ಕುಮಾರಸ್ವಾಮಿ ಯವರು ಮುಖ್ಯಮಂತ್ರಿಯಾಗಿ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುತ್ತೇವೆ ಎಂದು ಕೊಟ್ಟಆಶ್ವಾಸನೆಯಂತೆ ಚಾಚು ತಪ್ಪದೇ ಉಳಿಸಿಕೊಂಡರು. ಅಧಿಕಾರಕ್ಕೆ ಬಂದ 14 ತಿಂಗಳಲ್ಲಿ ರೈತರ ಸಾಲ ಮನ್ನಾ ಮಾಡಿ ತೋರಿಸಿ ಕೊಟ್ಟಿದ್ದಾರೆ ಎಂದರು. ನಮ್ಮ ಬಗ್ಗೆ ವಿರೋಧ ಪಕ್ಷದವರು ಮಾತನಾಡುವ ಟೀಕೆಗೆ ತಲೆಕೆಡಿಸಿಕೊಳ್ಳುವುದು ಬೇಡ. ಒಂದು ಕಡೆ ಕಾಂಗ್ರೆಸ್‌ ಭಾರತ್‌ ಜೋಡೋ ಯಾತ್ರೆ, ಬಿಜೆಪಿ ಯವರ ಸಂಕಲ್ಪ ಯಾತ್ರೆ ಯಾವ ಪುರುಷರ್ಥಕ್ಕೆ ಮಾಡುತ್ತಾರೋ ಏನು ಸಂದೇಶ ಕೊಡುತ್ತಾರೋ ತಿಳಿಯುತ್ತಿಲ್ಲ. ಆದರೆ, ರಾಜ್ಯಕ್ಕೆ ಒಳ್ಳೆಯದು ಆಗಬೇಕಾದರೆ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯ ಎಂದು ಹೇಳಿದರು.

ಕೆಂಪೇ​ಗೌ​ಡರಿಗೆ 'ಪ್ರತಿಮೆ' ಗೌರವ ಸಮರ್ಪಣೆ: ಸಚಿವ ಅಶ್ವತ್ಥ್‌ ನಾರಾಯಣ

ಚಾಕನಹಳ್ಳಿ ಪಂಚಾಯಿತಿಗೆ ಎರಡು ಮೂರು ಸಲ ಬರಬೇಕೆಂದುಕೊಂಡಿದೆ. ಆದರೆ, ಬರಲು ಆಗಿರಲಿಲ್ಲ. ಇಂದು ಹಲವು ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳ ಆಲಿಸಿದ್ದು ಅವುಗಳಿಗೆ ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಇದೇ ವೇಳೆ ನಿಖಿಲ್‌ ಕುಮಾರಸ್ವಾಮಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್‌ ಉಪಾಧ್ಯಕ್ಷ ರಾಮಕೃಷ್ಣ , ಸುನೇತ್ರ ಶಿವರುದ್ರಯ್ಯ, ಬಸವೇಗೌಡ , ಪ್ರದೀಪ್‌, ರಾಜು, ಸಿದ್ಧರಾಜು ಹಲವರು ಹಾಜರಿದ್ದರು.