Asianet Suvarna News Asianet Suvarna News

MLC Election ನಾನು ಟಿಕೆಟ್‌ ಕೇಳಲ್ಲ : ರಮೇಶ್ ಜಾರಕಿಹೊಳಿ

  •  ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಅವರನ್ನು ಈ ಬಾರಿ ಮೊದಲ ಸುತ್ತಿನಲ್ಲೇ ಆಯ್ಕೆ ಮಾಡಬೇಕು
  • ಇನ್ನೊಂದು ಸ್ಥಾನವನ್ನು ಸಹೋದರ ಲಖನ್‌ ಜಾರಕಿಹೊಳಿಗೆ ನೀಡುವಂತೆ ನಾನು ಬೇಡುವುದಿಲ್ಲ
we Dont ask ticket for lakhan jarkiholi says ramesh jarkiholi snr
Author
Bengaluru, First Published Nov 20, 2021, 6:52 AM IST
  • Facebook
  • Twitter
  • Whatsapp

ಗೋಕಾಕ (ನ.20): ವಿಧಾನ ಪರಿಷತ್‌ ಚುನಾವಣೆಯಲ್ಲಿ (MLC Election) ಕ್ಷೇತ್ರದಿಂದ ಬಿಜೆಪಿ (BJP) ಅಭ್ಯರ್ಥಿ ಮಹಾಂತೇಶ ಕವಟಗಿ ಮಠ (Mahantesh kawatagimutt) ಅವರನ್ನು ಈ ಬಾರಿ ಮೊದಲ ಸುತ್ತಿನಲ್ಲೇ ಆಯ್ಕೆ ಮಾಡಬೇಕು. ಪಕ್ಷದ ತೀರ್ಮಾನದಂತೆ ಒಂದೇ ಸ್ಥಾನಕ್ಕೆ ಬಿಜೆಪಿ (BJP) ಸ್ಪರ್ಧಿಸುತ್ತಿದೆ. ಇನ್ನೊಂದು ಸ್ಥಾನವನ್ನು ಸಹೋದರ ಲಖನ್‌ ಜಾರಕಿಹೊಳಿಗೆ (Lakhan Jarkiholi) ನೀಡುವಂತೆ ನಾನು ಬೇಡುವುದಿಲ್ಲ ಎಂದು ಶಾಸಕ ರಮೇಶ ಜಾರಕಿಹೊಳಿ (Ramesh Jarkiholi ಹೇಳಿದರು.

ಶುಕ್ರವಾರ ಗೋಕಾ​ಕ ನಗರದ ಹೊರವಲಯದಲ್ಲಿ ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬಿಜೆಪಿ (BJP) ಕಾರ್ಯಕರ್ತರ ಬೃಹ​ತ್‌ ಸಮಾವೇಶ ಉದ್ಘಾಟಿಸಿದ ಅವರು, ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿ ಮಠ ಅವರನ್ನು ಗೆಲ್ಲಿಸುವುದು ಹಾಗೂ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವುದು ನಮ್ಮ ಮೊದಲ ಉದ್ದೇಶವಾಗಿದೆ ಎಂದರು. 

 ವರಿಷ್ಠರೊಂದಿಗೆ ಚರ್ಚಿಸಿ ಎರಡನೇ ಪ್ರಾಶಸ್ತ್ಯದ ಮತವನ್ನು ಯಾರಿಗೆ ಚಲಾಯಿಸಬೇಕು ಎಂದು ನಿರ್ಧರಿಸಲಾಗುವುದು ಎಂದರು.

ಜಿದ್ದಾ ಜಿದ್ದಿ :   ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ  (MLC Election)ರಂಗೇರಿದ್ದು, ಕಾಂಗ್ರೆಸ್(Congress), ಬಿಜೆಪಿ9BJP) ಹಾಗೂ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಆದ್ರೆ,  ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳ ಘೋಷಣೆಗೂ ಮುನ್ನವೇ ಬೆಳಗಾವಿಯಲ್ಲಿ (Belagavi) ಭರ್ಜರಿ ಪ್ರಚಾರ ಶುರುವಾಗಿದೆ

ಹೌದು....ಕಾಂಗ್ರೆಸ್‌ನಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (Laxmi Hebbalkar) ಹಾಗೂ ಬಿಜೆಪಿಯಿಂದ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರಚಾರ ಶುರು ಮಾಡಿಕೊಂಡಿದ್ದಾರೆ. 

ಪರಿಷತ್‌ ಚುನಾವಣೆಗೆ 98000 ಮತದಾರರು : ಚುನಾವಣೆ ಆಯೋಗ

ಟಿಕೆಟ್ ಘೋಷಣೆಗೂ ಮೊದಲೇ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಪರವಾಗಿ ಪ್ರಚಾರ ಕೈಗೊಂಡಿದ್ರೆ, ಲಕ್ಷ್ಮೀ ಹೆಬ್ಬಾಳ್ಕರ್ ಚನ್ನರಾಜ ಹಟ್ಟಿಹೊಳಿ ಪರ ಬಿರುಸಿನ ಪ್ರಚಾರ ಮಾಡುತ್ತಿದ್ದರು.

ಅಭ್ಯರ್ಥಿಗಳ ಘೋಷಣೆಯೇ ಆಗಿಲ್ಲ
ಯೆಸ್‌ ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಬಿಜೆಪಿ ಹಾಗೂ ಕಾಂಗ್ರೆಸ್‌ನಿಂದ ಅಭ್ಯರ್ಥಿ ಘೋಷಣೆಯಾಗಿಲ್ಲ, ಆದ್ರೆ, ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ಆಗಲೇ ಅಭ್ಯರ್ಥಿಗಳ ಆಯ್ಕೆ ಮಾಡಿಕೊಂಡು ಅವರು ಪರವಾಗಿ ಪ್ರಚಾರದಲ್ಲಿ ತೊಡಗಿಕೊಂಡಿದ್ದರು.

ಬಿಜೆಪಿಯಿಂದ ಲಖನ್ ಜಾರಕಿಹೊಳಿ?
ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಟಿಕೆಟ್ ಘೋಷಣೆ ಮೊದಲೇ ಗೋಕಾಕ ಕ್ಷೇತ್ರದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಗ್ರಾಮಪಂಚಾಯಿತಿ ಸದಸ್ಯರನ್ನು ಭೇಟಿಯಾಗಿ ಲಖನ್ ಜಾರಕಿಹೊಳಿ ಪರ ಪ್ರಚಾರ ನಡೆಸಿದ್ದರು.

ಖಾನಾಪುರದ ಹೋಟೆಲ್ ನಲ್ಲಿ ಮಾಜಿ ಶಾಸಕ ಅರವಿಂದ ಪಾಟೀಲ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಮಹಾಂತೇಶ ಕವಟಗಿಮಠ ಅವರಿಗೆ ಒಂದು ಮತ, ಸಹೋದರ ಲಖನ್ ಗೆ ಒಂದು ಮತ ನೀಡುವಂತೆ ರಮೇಶ್ ಜಾರಕಿಹೊಳಿ ಮನವಿ ಮಾಡಿದ್ದಾರೆನ್ನಲಾಗಿದೆ.

ಎರಡು ದಿನಗಳ ಹಿಂದೆ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ದ್ವಿಸದಸ್ಯ ಕ್ಷೇತ್ರದಿಂದ ಸೋದರ ಲಖನ್ ಜಾರಕಿಹೊಳಿಗೆ ಬಿಜೆಪಿ ಎರಡನೇ ಅಭ್ಯರ್ಥಿಯಾಗಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಆದರೆ ಇದೀಗ ಮಹಂತೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಕಾಂಗ್ರೆಸ್‌ನಿಂದ ಚನ್ನರಾಜ ಹಟ್ಟಿಹೊಳಿ?
ಬೆಳಗಾವಿ ವಿಧಾನ ಪರಿಷತ್ ಚುನಾವಣೆಗೆ  ಕಾಂಗ್ರೆಸ್‌ನಿಂದ ಚನ್ನರಾಜ ಹಟ್ಟಿಹೊಳಿ ಅಭ್ಯರ್ಥಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಯಾಕಂದ್ರೆ ಈಗಾಗಲೇ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಚನ್ನರಾಜ ಹಟ್ಟಿಹೊಳಿ ಅವರೇ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಎಂದು ಹೇಳಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನ ಹಂಚಿಕೊಂಡಿದ್ದಾರೆ.

Follow Us:
Download App:
  • android
  • ios