ಮಳವಳ್ಳಿ (ಸೆ.18): ಪಿಎಲ್‌ಡಿ ಬ್ಯಾಂಕ್‌ನಲ್ಲಿ ಅಧಿಕಾರ ಹಿಡಿದಂತೆ ಮುಂದಿನ ದಿನಗಳಲ್ಲಿ ನಡೆಯಲಿರುವ ಟಿಎಪಿಎಂಸಿ ಚುನಾವಣೆಯಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಮರೆತು ಕಾರ್ಯಕರ್ತರು ಜೆಡಿಎಸ್‌ ಪಕ್ಷಕ್ಕಾಗಿ ದುಡಿಯುವಂತೆ ಶಾಸಕ ಡಾ.ಕೆ.ಅನ್ನದಾನಿ ಮನವಿ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪುರಸಭೆ ಸದಸ್ಯರು ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್‌)ಗೆ ನೂತನ ನಿರ್ದೇಶಕರಾಗಿ ಆಯ್ಕೆಯಾಗಿರುವ ಮನ್‌ ಮುಲ್‌ ನಿರ್ದೇಶಕ ವಡ್ಡರಹಳ್ಳಿ ವಿ.ಎಂ. ವಿಶ್ವನಾಥ್‌ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜೆಡಿಎಸ್‌ ಮುಖಂಡ ಸಚಿವ ನಾಗೇಶ್ ಬಣಕ್ಕೆ ಸೆರ್ಪಡೆ ...

ಮುಂದಿನ ದಿನಗಳಲ್ಲಿ ಪಕ್ಷವನ್ನು ಮತ್ತಷ್ಟುಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಪಕ್ಷದ ಆಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು. ಚುನಾವಣೆಯಲ್ಲಿ ಅವಕಾಶ ವಂಚಿತ ಆದವರಿಗೆ ಎಪಿಎಂಸಿ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಯಲ್ಲಿ ಆದ್ಯತೆ ನೀಡಲಾಗುವುದು. ತಾಲೂಕಿನ ಹೆಮ್ಮೆಯ ಮಗ ವಿ.ಎಂ.ವಿಶ್ವನಾಥ್‌ ಅವರು ಕೆಎಂಎಫ್‌ ನಿರ್ದೇಶಕರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದರು.

ನೂತನ ಕೆಎಂಎಫ್‌ ನಿರ್ದೇಶಕ ವಿ.ಎಂ.ವಿಶ್ವನಾಥ್‌ ಮಾತನಾಡಿ, ರಾಜ್ಯದಲ್ಲಿ ಕೋವಿಡ್‌ನಿಂದ ಒಕ್ಕೂಟದಲ್ಲಿ ಸಾಕಷ್ಟುನಷ್ಟದಲ್ಲಿದೆ. ಉತ್ಪಾದನೆಯಾದ ವಸ್ತುಗಳು ಮಾರಾಟವಾಗುತ್ತಿಲ್ಲ. ಮದುವೆ ಹಾಗೂ ಇನ್ನಿತರ ಸಭೆ-ಸಮಾರಂಭಗಳು ನಡೆಯದೆ ಕಾರಣ ಒಕ್ಕೂಟ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಪರಿಸ್ಥಿತಿ ಸುಧಾರಣೆಯಾಗುವವರೆಗೆ ಜನರು ಸಹಕರಿಸುವಂತೆ ಮನವಿ ಮಾಡಿದರು.