ಬೆಂಗಳೂರು (ನ.03): ಹಿಂಗಾರು ಪ್ರವೇಶಿಸಿರುವ ಪರಿಣಾಮ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ನ.5 ಮತ್ತು 6ರಂದು ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಂಭವವಿದ್ದು, ‘ಯಲ್ಲೋ’ ಎಚ್ಚರಿಕೆ ನೀಡಲಾಗಿದೆ. 

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ನ.5 ಮತ್ತು 6ರಂದು ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. 

ಆದರೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಲಕ್ಷಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶ : ಯಾವಾಗ, ಎಷ್ಟು ಮಳೆಯಾಗಲಿದೆ..?

ನ.2ಕ್ಕೆ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಯ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ 3 ಸೆಂ.ಮೀ, ಬಾಳೆಹೊನ್ನೂರು, ಕೊಟ್ಟಿಗೆಹಾರ ತಲಾ 2, ದಕ್ಷಿಣ ಕನ್ನಡದ ಧರ್ಮಸ್ಥಳ, ಕೊಡಗಿನ ಭಾಗಮಂಡಲ ಮತ್ತು ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ತಲಾ ಒಂದು ಸೆಂ.ಮೀ ಮಳೆ ಬಂದಿದೆ.