ಬೆಂಗಳೂರು (ಆ.01): ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸೆ.2 ರಿಂದ 4ರವರೆಗೆ ಗುಡುಗು ಸಹಿತ ವ್ಯಾಪಕ ಮಳೆ ಬೀಳುವ ಹಿನ್ನೆಲೆಯಲ್ಲಿ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

 ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. 

ಆಗಸ್ಟ್‌ ತಿಂಗಳಲ್ಲಿ ಸುರಿದಿದ್ದು 44 ವರ್ಷಗಳ ದಾಖಲೆ ಮಳೆ!...

ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮಳೆ ಬೀಳುವ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ ಗರಿಷ್ಠ 31 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಬೈಗೆ ಮತ್ತೊಂದು ಕಂಟಕ, ಹವಾಮಾನ ಇಲಾಖೆ ಕೊಟ್ಟ ವಾರ್ನಿಂಗ್ ಇದು!...

ಕಳೆದ ಕೆಲ ದಿನಗಳ ಹಿಂದೆ ಭಾರಿ ಪ್ರಮಾಣದಲ್ಲಿ ರಾಜ್ಯದಲ್ಲಿ ಮಳೆಯಾಗಿತ್ತು. ಆದರೆ ಬಳಿಕ ಮಳೆಯೂ ಸಂಪೂರ್ಣವಾಗಿ ನಿಂತಿದ್ದು, ರೈತ ಸಮುದಾಯ ಆತಂಕಕ್ಕೆ ಒಳಗಾಗುವಂತೆ ಮಾಡಿತ್ತು. ಇದೀಗ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.