ಬೆಂಗಳೂರು (ಅ.13):   ರಾಜ್ಯದಲ್ಲಿ ಇನ್ನೂ ಎರಡು ತಿಂಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರಿಂದ ರಾಜ್ಯದ ಹಲವೆಡೆ ಬಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. 

ಬೀದರ್, ಗುಲ್ಬರ್ಗ, ಬಿಜಾಪುರ, ಕೊಪ್ಪಳ, ಉಡುಪಿ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ಹಲವೆಡೆ ಇಂದು ಬಾರಿ ಮಳೆಯಾಗಲಿದೆ ಎಂದು ಹೇಳಿದೆ.  ಇನ್ನು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಎರಡು ದಿನಗಳ ಕಾಲ ಬಾರಿ ಮಳೆಯಾಗುವ ಸಾಧ್ಯತೆ ಇದೆ.  ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. 

ವರುಣನ ಅಬ್ಬರಕ್ಕೆ ನಡುಗಿದ ಬೆಂಗಳೂರು: ಹೈರಾಣಾದ ಜನತೆ

ಇನ್ನು ಬೆಂಗಳೂರಲ್ಲಿ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು. ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. 

ಸುವರ್ಣನ್ಯೂಸ್ ಗೆ ಹವಾಮಾನ ಇಲಾಖೆ ನಿರ್ದೇಶಕ ಬಸವನಗೌಡ.ಎಸ್.ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.