ಬೆಂಗಳೂರು (ಅ.26): ರಾಜ್ಯದಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇನ್ನೂ ಕೆಲ ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಈಗಾಗಲೇ ಉತ್ತರ ಕರ್ನಾಟಕ ಸೇರಿ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿದು ಅವಾಂತರ ಸೃಷ್ಟಿ ಮಾಡಿದೆ. ಇದರ ಬೆನ್ನಲ್ಲೇ ಮತ್ತೊಮ್ಮೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಇಳಿದ ಭೀಮೆಯ ಅಬ್ಬರ; ನಿರಾಳರಾಗುತ್ತಿರುವ ಸಂತ್ರಸ್ತರಿಗೆ ಮತ್ತೆ ಆತಂಕ ಶುರು..

ಅಕ್ಟೋಬರ್ 26 ರಿಂದ 30 ರವರೆಗೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾರಿ‌ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 

ಈಗಾಗಲೇ ಬೆಂಗಳೂರು ನಗರದಲ್ಲಿಯೂ ಕೂಡ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು, ಅಕ್ಟೋಬರ್ 26 ಹಾಗೂ 27 ರಂದು ಕೆಲವು ಕಡೆ ಹೆಚ್ಚು ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಹೇಳಿದ್ದಾರೆ.