Asianet Suvarna News Asianet Suvarna News

ರಾಜ್ಯದಲ್ಲಿ 10 ಜಿಲ್ಲೆಗಳಿಗೆ ಎದುರಾಗಲಿದೆ ಭೀಕರ ಪ್ರವಾಹ ಸ್ಥಿತಿ: ಎಲ್ಲೆಲ್ಲಿ..?

ರಾಜ್ಯದಲ್ಲಿ ಈಗಾಗಲೇ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. 10 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. 

Weather Department Issued red Alert to 10 Districts snr
Author
Bengaluru, First Published Oct 15, 2020, 7:24 AM IST | Last Updated Oct 15, 2020, 7:30 AM IST

ಬೆಂಗಳೂರು (ಅ.15) :  ರಾಜ್ಯದಲ್ಲಿ ಮುಂಗಾರಿನ ಆರ್ಭಟ ಉತ್ತರ ಒಳನಾಡಿನ ಜೊತೆಗೆ ಕರಾವಳಿ ಭಾಗಕ್ಕೂ ಆವರಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಜಿಲ್ಲೆಗೆ ‘ರೆಡ್‌ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಗುಡುಗು ಸಹಿತ ಅತ್ಯಂತ ಹೆಚ್ಚು ಮಳೆ ಸುರಿಯುವುದರಿಂದ ಅ.15ರಂದು ಕರಾವಳಿ ಜಿಲ್ಲೆಗಳು ಹಾಗೂ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’. ಅತಿ ಹೆಚ್ಚು ಮಳೆ ಸುರಿಯುವ ಸಂಭವ ಇರುವುದರಿಂದ ಧಾರವಾಡ, ಗದಗ, ಕಲಬುರ್ಗಿ ಸೇರಿದಂತೆ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗೆ ‘ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ.

ವರುಣನ ಅಬ್ಬರಕ್ಕೆ ನಡುಗಿದ ಬೆಂಗಳೂರು: ಹೈರಾಣಾದ ಜನತೆ ..

ಅತಿ ಹೆಚ್ಚು ಮಳೆ ಸಾಧ್ಯತೆ ಕಾರಣಕ್ಕೆ ಅ.16ರಂದು ಕೇವಲ ಕರಾವಳಿ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಪ್ರತಿ ಗಂಟೆಗೆ ಅಂದಾಜು 55 ಕಿ.ಮೀ ವೇಗದಲ್ಲಿ ಬೀಸುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಬುಧವಾರ ಗರಿಷ್ಠ 29.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಮತ್ತು ಶಿರಾಲಿಯಲ್ಲಿ ಹಾಗೂ ಕನಿಷ್ಠ 19.2 ಡಿಗ್ರಿ ಸೆಲ್ಸಿಯಸ್‌ ಬೀದರ್‌ನಲ್ಲಿ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೊಲ್ಲೂ​ರಿ​ನಲ್ಲಿ 24 ಸೆಂ.ಮೀ ಮಳೆ

ಅ.14ರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಅತ್ಯಂತ ಹೆಚ್ಚು 24 ಸೆಂ.ಮೀ. ಮಳೆ ಸುರಿದಿದೆ. ದಕ್ಷಿಣ ಕನ್ನಡದ ಮುಲ್ಕಿ ಮತ್ತು ಉಡುಪಿಯ ಕೋಟಾ ತಲಾ 17 ಸೆಂ.ಮೀ, ಬೀದರ್‌ ಜಿಲ್ಲೆಯ ಬಸವಕಲ್ಯಾಣ 15, ಆಗುಂಬೆ 14, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಉಡುಪಿಯ ಕಾರ್ಕಳ ಮತ್ತು ಬ್ರಹ್ಮಾವರ, ಬೀದರ್‌ ಜಿಲ್ಲೆಯ ಹುಮನಾಬಾದ್‌, ಕಲಬುರ್ಗಿ 13, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಪುತ್ತೂರು, ಬೆಳ್ತಂಗಡಿ, ವಿಟ್ಲ, ಉಡುಪಿಯ ಕುಂದಾಪುರದಲ್ಲಿ ತಲಾ 12, ಕಲಬುರ್ಗಿ ಜಿಲ್ಲೆಯ ಕಜೂರಿ 11, ಉತ್ತರ ಕನ್ನಡದ ಭಟ್ಕಳದಲ್ಲಿ 10 ಸೆಂ.ಮೀ ಮಳೆ ದಾಖಲಾಗಿದೆ.

Latest Videos
Follow Us:
Download App:
  • android
  • ios