Asianet Suvarna News Asianet Suvarna News

8 ರವರೆಗೆ ಹಗುರ ಮಳೆ ಸಾಧ್ಯತೆ : ಕೃಷಿ ಹವಾಮಾನ ಕ್ಷೇತ್ರ ಮಾಹಿತಿ

ಜಿಲ್ಲೆಯಲ್ಲಿ ಏ. 8 ರವರೆಗೆ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆ ಬರುವ ಸಂಭವವಿದೆ ಎಂದು ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗ ತಿಳಿಸಿದೆ.

Weather Department Predicts Slight Rain In Mysuru snr
Author
First Published Apr 4, 2023, 7:33 AM IST

 ಮೈಸೂರು :  ಜಿಲ್ಲೆಯಲ್ಲಿ ಏ. 8 ರವರೆಗೆ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆ ಬರುವ ಸಂಭವವಿದೆ ಎಂದು ನಾಗನಹಳ್ಳಿಯ ಕೃಷಿ ಹವಾಮಾನ ಕ್ಷೇತ್ರ ವಿಭಾಗ ತಿಳಿಸಿದೆ.

ಗರಿಷ್ಟಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್‌ನಿಂದ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುವ ಸಾಧ್ಯತೆ ಇದೆ. ಬೆಳಗಿನ ಗಾಳಿಯ ತೇವಾಂಶ ಶೇ. 73 ರಿಂದ 75 ರವರೆಗೆ ಮತ್ತು ಮಧ್ಯಾಹ್ನದ ತೇವಾಂಶ ಶೇ. 45 ರಿಂದ 47 ರವರೆಗೆ ಮತ್ತು ಗಾಳಿಯು ಗಂಟೆಗೆ 1 ರಿಂದ 2 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಧೀರ್ಘಾವಧಿ ಹವಾಮಾನ ಮುನ್ಸೂಚನೆ ಪ್ರಕಾರ ಏ. 7 ರಿಂದ 13 ರವರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ತೆಂಗಿಗೆ ರುಗೋಸ್‌ ಬಳಿ ನೊಣ, ಶುಂಠಿಗೆ ಗಡ್ಡೆ ಕೊಳೆ ರೋಗ, ಮಾವಿಗೆ ಕಾಂಡ ಕೊರಕ, ಭತ್ತಕ್ಕೆ ಬೆಂಕಿ ರೋಗ, ಕುತ್ತಿಗೆರೋಗ ಕಂಡು ಬರುತ್ತದೆ. ಪಶು ಸಂಗೋಪನೆ ಮತ್ತು ಕಬ್ಬು- ತರಗು ನಿರ್ವಹಣೆಗೆ ಹೆಚ್ಚಿನ ಗಮನ ಹರಿಸುವಂತೆ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಹಿರಿಯ ಕ್ಷೇತ್ರ ಅಧೀಕ್ಷಕ ಡಾ.ಪಿ. ಪ್ರಕಾಶ್‌ ಅವರ ಮೊ. 94498 69914, ದೂ. 0821- 2591267, ಸಹ ಸಂಶೋಧಕ ಡಾ.ಜಿ.ವಿ. ಸುಮಂತಕುಮಾರ್‌ ಮೊ. 95353 45814 ಸಂಪರ್ಕಿಸಬಹುದು.

ಕರ್ನಾಟಕದಲ್ಲಿ ಇನ್ನು 4 ದಿನ ಗುಡುಗು ಮಳೆ

ಬೆಂಗಳೂರು(ಏ.02):  ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಸುರಿಯುವ ಸಾಧ್ಯತೆ ಇದೆ. ಮುಂದಿನ 48 ಗಂಟೆ ಬೆಂಗಳೂರಿನಲ್ಲಿ ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು ಸಂಜೆ ಅಥವಾ ರಾತ್ರಿ ವೇಳೆ ಹಗುರದಿಂದ ಕೂಡಿದ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರಿನಲ್ಲಿ ಏ.2ರಿಂದ ಏ.5ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಕರ್ನಾಟಕದಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಸರಾಸರಿ 2 ಡಿಗ್ರಿ ಉಷ್ಣಾಂಶ ಕಡಿಮೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ಕರಾವಳಿ ಕೆಲವೆಡೆ ಸರಾಸರಿ 3-4 ಕನಿಷ್ಠ ಉಷ್ಣಾಂಶ ಇಳಿಕೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

Follow Us:
Download App:
  • android
  • ios