'ಸಂತೋಷ ಸಾವಿಗೂ ಡಿಕೆಶಿ, ಹೆಬ್ಬಾಳ್ಕರ್‌ಗೂ ಏನು ಸಂಬಂಧ?'
* ಮಾನಹಾನಿ ಕೇಸ್ ಹಾಕಿದರೆ ಜೈಲಿಗೆ ಹೋಗ್ತಾರೆ
* ಬಿಜೆಪಿ ನಾಯಕರು ಹೀಗೆಲ್ಲಾ ಹಗುರವಾಗಿ ಮಾತನಾಡಬಾರದು
* ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ
ಕೊಪ್ಪಳ(ಏ.16): ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ಅವರ ಹೆಸರನ್ನು ಸಂತೋಷ ಪಾಟೀಲ್(Santosh Patil) ಅವರು ಬರೆದಿಟ್ಟು ಆತ್ಮಹತ್ಯೆ(Suicide) ಮಾಡಿಕೊಂಡಿರುವಾಗ ವಿನಾಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೆಸರನ್ನು ಎಳೆದು ತರುವುದು ಸರಿಯಲ್ಲ. ಕೇಸ್‌ಗೂ- ಅವರಿಗೂ ಏನು ಸಂಬಂಧ? ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ(Basavaraj Rayareddy) ಅವರು ಖಾರವಾಗಿ ಪ್ರಶ್ನಿಸಿದರು.
ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ನಗರದಲ್ಲಿ ಕಾಂಗ್ರೆಸ್(Congress) ಹಮ್ಮಿಕೊಂಡಿದ್ದ ಪ್ರತಿಭಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದಾರೆ. ಹೀಗೆಲ್ಲಾ ಹಗುರವಾಗಿ ಮಾತನಾಡುವುದು ಮತ್ತು ಆರೋಪ ಮಾಡುವುದು ಸರಿಯಲ್ಲ ಎಂದು ಕಿವಿಮಾತು ಹೇಳಿದರು.
ಸಂತೋಷ್ ಆತ್ಮಹತ್ಯೆ ಪ್ರಕರಣ ಹೆಬ್ಬಾಳ್ಕರ್ ತಲೆಗೆ ಸುತ್ತಿಕೊಳ್ಳಬಹುದು: ಹೊಸ ಬಾಂಬ್ ಸಿಡಿಸಿದ ಅಶ್ವತ್ಥ್
ಸಂತೋಷ ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆತ ವಿಎಚ್‌ಪಿ ಕಾರ್ಯಕರ್ತ, ಹಿಂದುತ್ವ ಪ್ರತಿಪಾದಕ. ಆತನ ಕುಟುಂಬದ ಬಗ್ಗೆಯೂ ನನಗೆ ವೈಯಕ್ತಿಕ ಪರಿಚಯ ಇದೆ. ಆತ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದರೂ ಹಣ ಬಾರದಿರುವುದರಿಂದ ಮತ್ತು ಪರ್ಸೇಂಟೇಜ್ ವ್ಯವಸ್ಥೆಗೆ ರೋಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದನ್ನು ಹಲವಾರು ಬಾರಿ ಆತನೆ ಹೇಳಿಕೊಂಡಿದ್ದ ದಾಖಲೆಯೂ ಇದೆ ಎಂದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಇನ್ನೊಬ್ಬರ ಕುರಿತು ಕೀಳು ಹೇಳಿಕೆ ನೀಡುವ ಮೊದಲು ತಾವೇನು ಅನ್ನುವುದನ್ನು ತಿಳಿದುಕೊಳ್ಳಬೇಕು. ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಅವರು ರಾಜಕೀಯಕ್ಕೆ ಅಸಮರ್ಥ ಎಂದರು.
ಬಿಜೆಪಿ ನಾಯಕರು ಆಧಾರರಹಿತವಾಗಿ ಮಾತನಾಡುತ್ತಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ(DK Shivakumar) ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್(Lakshmi Hebbalkar) ಅವರು ಮಾನಹಾನಿ(Defamtion) ಕೇಸ್ ಹಾಕಿದರೆ ಇವರೆಲ್ಲಾ ಜೈಲಿಗೆ ಹೋಗ್ತಾರೆ. ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ತೋರುತ್ತಿದೆ. ಅವರಿಗೆ ಪ್ರಾಮಾಣಿಕತೆಯ ಬಗ್ಗೆ ಕಾಳಜಿ ಇದ್ದರೆ ರಾಜ್ಯ ಸರ್ಕಾರವನ್ನು(Government of Karnataka) ವಜಾ ಮಾಡಬೇಕಾಗಿತ್ತು ಎಂದರು.