ಬಿಜೆಪಿ ಸರ್ಕಾರ ಏಕೆ ಮೇಲ್ಮನವಿ ಸಲ್ಲಿಸಿಲ್ಲ?: ಧ್ರುವನಾರಾಯಣ್ ಪ್ರಶ್ನೆ
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಯಾಕೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಪ್ರಶ್ನಿಸಿದರು.
ಶಿವಮೊಗ್ಗ (ನ.27): ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಯಾಕೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಪ್ರಶ್ನಿಸಿದರು. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ಬಿಜೆಪಿ ಸರ್ಕಾರ ಯಾವ ಕ್ರಮವೂ ಕೈಗೊಳ್ಳಿಲ್ಲ. ಸರ್ಕಾರ ವೈಪಲ್ಯದಿಂದ ಪರಿಸರವಾದಿಯೊಬ್ಬರ ಅರ್ಜಿಗೆ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರ ಈತನಕ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿಲ್ಲ ಎಂದು ಆರೋಪಿಸಿದರು.
ಕಾಗೋಡು ತಿಮ್ಮಪ್ಪ ಸಚಿವರಾಗಿದ್ದಾಗ ಹಕ್ಕುಪತ್ರ ಕೊಡಿಸಿದ್ದರು. ಆದರೆ, ಆ ಹಕ್ಕುಪತ್ರವನ್ನು ಬಿಜೆಪಿ ಸರ್ಕಾರದವರು ತಿರಸ್ಕರಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಯಾರಿಗೂ ಹಕ್ಕುಪತ್ರ ಕೊಡಿಸಲಿಲ್ಲ. ಈಗ ಶರಾವತಿ ಸಂತ್ರಸ್ಥರು ನೆಲೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದರು. ಕಬಿನಿ ಜಲಾಶಯ ನಿರ್ಮಾಣವಾದಾಗ 35 ಸಾವಿರ ಜನ ಸಂತ್ರಸ್ತರಾದರು. ಅವರಿಗೆ ಪರಿಹಾರ ನೀಡಿ, ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಮಾದರಿ ಗ್ರಾಮಗಳನ್ನು ನಿರ್ಮಿಸಲಾಗಿದೆ. ಆದರೆ, ಇಲ್ಲಿ ಹಕ್ಕುಪತ್ರವನ್ನೇ ಕೊಡಲು ಸಾಧ್ಯವಾಗಿಲ್ಲ. ಬಿಜೆಪಿ ಸರ್ಕಾರಕ್ಕೆ ರೈತರ ಬಗ್ಗೆ ಮಾತನಾಡಲು ಹಕ್ಕು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿ ಸರ್ಕಾರ: ಆರ್.ಧ್ರುವನಾರಾಯಣ್ ಆರೋಪ
ಎಲ್ಲ ರಂಗಗಳಲ್ಲೂ ಸರ್ಕಾರ ವಿಫಲ: ಚಿಲುಮೆ ಎನ್ನುವ ಸಂಸ್ಥೆಗೆ ಮತದಾರರ ಪಟ್ಟಿಪರಿಷ್ಕರಣೆಗೆ ಅವಕಾಶ ನೀಡಿದ್ದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಮತದಾರರ ಹೆಸರನ್ನು ತೆಗೆಯಲಾಗಿದೆ ಎಂದು. ಕಾಂಗ್ರೆಸ್ ಪರ ಮತದಾರರ ಹೆಸರನ್ನು ತೆಗೆದು, ಬಿಜೆಪಿ ಮತದಾರರ ಹೆಸರನ್ನು ಸೇರಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ ಎಂದರು.
ಕೇಂದ್ರ ಚುನಾವಣಾ ಸಮಿತಿಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ದೂರು ನೀಡಿದ ಪರಿಣಾಮ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ಅಮಾನತು ಮಾಡಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರ ನೇರವಾಗಿ ಭಾಗಿಯಾಗಿದೆ. ಆದರೆ, ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದರೆ ಆಡಳಿತದ ವೈಫಲ್ಯ ಯಾವ ರೀತಿ ಇದೆ. ಎಂಬುದನ್ನು ತಿಳಿಯಬಹುದು. ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಲು ನಿಜವಾದ ಮತದಾರರ ಹಕ್ಕನ್ನು ಕಸಿಯುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ. ಎಲ್ಲ ರಂಗಗಳಲ್ಲೂ ಸರ್ಕಾರ ವಿಫಲವಾಗಿದೆ ಎಂದರು.
ಐಕ್ಯತೆ ಮೂಡಿಸಲು ಭಾರತ್ ಜೋಡೋ ಪಾದಯಾತ್ರೆ: ಆರ್.ಧ್ರುವನಾರಾಯಣ
ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ, ಪ್ರಮುಖರಾದ ಜಿ.ಡಿ. ಮಂಜುನಾಥ್ ಮತ್ತಿರರು ಇದ್ದರು.