Wildlife: ಉಳೆಪಾಡಿ ಮಿತ್ತಬೆಟ್ಟು ಬಳಿ ಉರುಳಿಗೆ ಸಿಲುಕಿ ಚಿರತೆ ಸಾವು!

ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

wildlife leopard dies hit by roll near kinnigola ulepadi mittabetta rav

ಮೂಲ್ಕಿ (ಜೂ.7) ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳೆಪಾಡಿ ಮಿತ್ತಬೆಟ್ಟು ಬಳಿ ಉರುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಕಾಡುಪ್ರಾಣಿಗಳ ಹಾವಳಿ ತಡೆಯಲಾರದೆ ಸ್ಥಳೀಯರು ಉಳೆಪಾಡಿ ಮಿತ್ತಬೆಟ್ಟು ಬಳಿ ಗುಡ್ಡದಲ್ಲಿ ಉರುಳು ಇಟ್ಟಿದ್ದರು. ಈ ಉರುಳಿಗೆ ಚಿರತೆ ಸೋಮವಾರ ರಾತ್ರಿ ಬಿದ್ದಿದೆ. ಮಂಗಳವಾರ ಸ್ಥಳೀಯ ಮನೆಯವರು ಗುಡ್ಡೆಯಲ್ಲಿ ನಾಯಿ ಬೊಗಳುವ ಶಬ್ದ ಕೇಳಿ ಭಯಭೀತರಾಗಿ ಸ್ಥಳಕ್ಕೆ ಧಾವಿಸಿದಾಗ ಉರುಳಿಗೆ ಚಿರತೆ ಬಿದ್ದು ಒದ್ದಾಡುತ್ತಿರುವುದು ಕಂಡು ಬಂದಿದೆ. ಕೂಡಲೇ ಐಕಳ ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್‌ ಶೆಟ್ಟಿಮತ್ತು ಸ್ಥಳೀಯರು ಅರಣ್ಯ ಇಲಾಖೆ ಅ​ಧಿಕಾರಿಗಳಿಗೆ ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿ​ಕಾರಿಗಳು ಸ್ಥಳಕ್ಕೆ ಬರುವಷ್ಟರಲ್ಲಿ ಚಿರತೆ ಉರುಳಿಗೆ ಸಿಕ್ಕಿಒದ್ದಾಡಿ ಪ್ರಾಣ ಬಿಟ್ಟಿದೆ ಎನ್ನಲಾಗಿದೆ.

ಐಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉಳೆಪಾಡಿ ಪರಿಸರದಲ್ಲಿ ಕಳೆದ ಕೆಲವು ತಿಂಗಳಿನಿಂದ ಚಿರತೆಯ ಕಾಟ ವಿಪರೀತವಾಗಿದ್ದು ಸ್ಥಳೀಯರು ಭಯಬೀತರಾಗಿದ್ದರು. ಕಳೆದ ಕೆಲವು ತಿಂಗಳಿನಿಂದ ಸ್ಥಳೀಯರ ಅನೇಕ ಸಾಕು ನಾಯಿಗಳು ಚಿರತೆಗೆ ಆಹಾರವಾಗಿತ್ತು.

ಮೀನುಗಾರರು, ಸಮುದ್ರ ತೀರಕ್ಕೆ ತೆರಳದೇ ಇರಲು ಸೂಚನೆ; ಹವಾಮಾನ ಇಲಾಖೆ ಮುನ್ಸೂಚನೆ...

ಐಕಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದಿವಾಕರ ಚೌಟ, ಮೂಡಬಿದಿರೆ ವಲಯ ಅರಣ್ಯಾಧಿ​ಕಾರಿ ಹೇಮಗಿರಿ ಅಂಗಡಿ, ಎಸಿಎಫ್‌ ಸತೀಶ್‌, ಕಿನ್ನಿಗೋಳಿ ಬೀಟ್‌ ಫಾರೆಸ್ಟರ್‌ ರಾಜು ಎಲ್‌.h.æ, ಡಿಆರ್‌ಎಫ್‌ ನಾಗೇಶ್‌ ಬಿಲ್ಲವ, ಬೀಟ್‌ ಫಾರೆಸ್ಟರ್‌ ಸಂತೋಷ್‌ ಮತ್ತಿತರರು ಭೇಟಿ ನೀಡಿದ್ದು ಚಿರತೆಯ ಕಳೇಬರವನ್ನು ಮಹಜರು ಮಾಡಿ ವ್ಯೆದ್ಯಕೀಯ ಪರೀಕ್ಷೆ ನಡೆಸಿದರು.

ಕಾಡಾನೆ ದಾಳಿ: ಮಹಿಳೆಗೆ ಗಂಭೀರ ಗಾಯ

ವಿರಾಜಪೇಟೆ ಅಮ್ಮತ್ತಿ ಒಂಟಿ ಅಂಗಡಿ ಬಳಿಯ ಕಣ್ಣಂಗಾಲದಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗ್ರಾಮದ ಅಯ್ಯಪ್ಪ ಅವರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಜಾನಕಿ (44) ಎಂಬವರ ಮೇಲೆ ಕಾಡಾನೆ ದಾಳಿ ನಡೆಸಿದೆ. ಕಾಲಿಗೆ ಗಂಭೀರ ಗಾಯವಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಅಮ್ಮತ್ತಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಆಸ್ಪತ್ರೆಗೆ ಕಾಂಗ್ರೆಸ್‌ ರಾಜ್ಯ ವಕ್ತಾರ ಸಂಕೇತ್‌ ಪೂವಯ್ಯ, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದರು.

Latest Videos
Follow Us:
Download App:
  • android
  • ios