ಮುಂದಿನ ವಾರ ಕಾಂಗ್ರೆಸ್‌ ಸೇರುವೆ: ಶಾಸಕ ಶ್ರೀನಿವಾಸ್‌

ಕಾಡುಗೊಲ್ಲ ಸಮುದಾಯದ ಎಸ್‌ಟಿ ಮೀಸಲಾತಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ತಿಳಿಸಿದರು.

Will join Congress next week: MLA Srinivas snr

 ಗುಬ್ಬಿ :  ಕಾಡುಗೊಲ್ಲ ಸಮುದಾಯದ ಎಸ್‌ಟಿ ಮೀಸಲಾತಿಗೆ ನನ್ನ ಸಂಪೂರ್ಣ ಸಹಕಾರವಿದೆ ಎಂದು ಶಾಸಕ ಎಸ್‌.ಆರ್‌.ಶ್ರೀನಿವಾಸ್‌ ತಿಳಿಸಿದರು.

ತಾಲೂಕಿನ ಹಾಗಲವಾಡಿ ಹೋಬಳಿಯ ಜುಂಜಪ್ಪನಹಟ್ಟಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಿಸಿ ರಸ್ತೆಗೆ ಗುದ್ದಲಿ ಪೂಜೆ ಸಲ್ಲಿಸಿ ಮಾತನಾಡಿದರು.

ಜಲಜೀವನ್‌ ಮಿಷನ್‌ ಕಳಪೆ ಕಾಮಗಾರಿ ನನ್ನ ಗಮನದಲ್ಲೂ ಇದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಗುಣಮಟ್ಟದ ಕಾಮಗಾರಿ ಮಾಡಲು ತಿಳಿಸುತ್ತೇನೆ. ಪ್ರತಿ ಗ್ರಾಮಕ್ಕೂ ಹೊಸ ಪೈಪ್‌ಲೈನ್‌ ಮಾಡಿ ಕಾಮಗಾರಿ ಮಾಡಲು ಸೂಚಿಸುತ್ತೇನೆ. ಪ್ರತಿ ಮನೆಮನೆಗೆ ನಲ್ಲಿ ಸಂಪರ್ಕ ಕಾಮಗಾರಿ ತಾಲೂಕಿನಲ್ಲಿ ಬಹುತೇಕ ಆಗಿದ್ದು, ಉಳಿದ ಎಲ್ಲ ಕಾಮಗಾರಿಗಳನ್ನು ಕೂಡಲೇ ಮಾಡಿಸುತ್ತೇನೆ. ಮುಂದಿನ ವಾರ ಕಾಂಗ್ರೆಸ್‌ ಪಕ್ಷಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಸಮ್ಮುಖದಲ್ಲಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಅನಿಲ್‌ಕುಮಾರ, ಉಮೇಶ್‌, ಯರಣ್ಣ, ಮುದ್ದಣ, ಓಂಕಾರ್‌, ಕಿಟ್ಟಪ್ಪ, ಮಹೇಶ್‌, ಈಶಣ್ಣ, ಸಿದ್ದರಾಜು, ವೇಣುಗೋಪಾಲ್‌, ಹೇಮಂತ್‌ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆ

ಬೆಂಗಳೂರು(ಮಾ.19):  ವಿಧಾನಸಭೆಯ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಸಂಪೂರ್ಣ ಸಿದ್ಧತೆಗಳನ್ನು ಈಗಾಲೇ ಕೈಗೊಂಡಿದ್ದು, ಬಹುತೇಕ ಇದೇ ತಿಂಗಳ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಮೇ 2ನೇ ವಾರ ಚುನಾವಣೆ ನಡೆವ ನಿರೀಕ್ಷೆಯಿದೆ.

ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ರಾಜ್ಯ ಮುಖ್ಯಚುನಾವಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ಅಲ್ಲದೇ, ಇತ್ತೀಚೆಗಷ್ಟೇ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ರಾಜ್ಯಕ್ಕೆ ಆಗಮಿಸಿ ಮೂರು ದಿನಗಳ ಸಿದ್ಧತೆಗಳ ಕುರಿತು ಸಂಪೂರ್ಣವಾಗಿ ಪರಿಶೀಲನೆ ನಡೆಸಿದೆ. ದೆಹಲಿಯಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಿ ದಿನಾಂಕವನ್ನು ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದ್ದು, ಇದೇ ತಿಂಗಳ ಕೊನೆಯ ವಾರದಲ್ಲಿ ಅಥವಾ ಏಪ್ರಿಲ್‌ನ ಮೊದಲ ವಾರದಲ್ಲಿ ಅಧಿಕೃತವಾಗಿ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ ಎಂದು ಮೂಲಗಳು ಹೇಳಿವೆ.

ಯುಗಾದಿ ಹಬ್ಬದಂದೇ 126 ಅಭ್ಯರ್ಥಿಗಳ ಕಾಂಗ್ರೆಸ್‌ ಪಟ್ಟಿ ಪ್ರಕಟ?: ಸಂಖ್ಯಾಶಾಸ್ತ್ರ ಆಧರಿಸಿ ಘೋಷಣೆ?

ಪ್ರಸಕ್ತ ಸರ್ಕಾರದ ಕಾರ್ಯಾವಧಿ ಮೇ 24ಕ್ಕೆ ಮುಕ್ತಾಯವಾಗುವ ಕಾರಣ 2018ರ ವೇಳಾಪಟ್ಟಿಯಂತೆಯೇ ಈ ಬಾರಿಯೂ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಳೆದ ಬಾರಿ ಮೇ 12ರಂದು ಮತದಾನ ನಡೆದಿದ್ದು, ಈ ಬಾರಿಯೂ ಮೇ ಎರಡನೇ ವಾರದಲ್ಲಿ ಮತದಾನ ನಡೆಸುವ ನಿರೀಕ್ಷೆ ಇದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು ಅಂದಾಜಿಸಿದೆ. ಈ ಲೆಕ್ಕಾಚಾರದಲ್ಲಿಯೇ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಏಪ್ರಿಲ್‌ ತಿಂಗಳ ಎರಡನೇ ವಾರದಲ್ಲಿ ಅಧಿಸೂಚನೆ ಹೊರಡಿಸಿ ಏಪ್ರಿಲ್‌ ತಿಂಗಳಾಂತ್ಯ ಅಥವಾ ಮೇ ಮೊದಲ ವಾರದ ವೇಳೆಗೆ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲು ಆಯೋಗವು ಚಿಂತನೆ ನಡೆಸಿದೆ ಎನ್ನಲಾಗಿದೆ.

ಈಗಾಗಲೇ ಪಿಯುಸಿ ಪರೀಕ್ಷೆಯು ಆರಂಭಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.31ರಿಂದ ಏ.15ರವರೆಗೆ ನಡೆಯಲಿದೆ. ಶಾಲಾ-ಕಾಲೇಜುಗಳ ಪರೀಕ್ಷೆಗಳು ಮುಕ್ತಾಯಗೊಳ್ಳುವುದರಿಂದ ಚುನಾವಣೆ ನಡೆಸಲು ಯಾವುದೇ ಸಮಸ್ಯೆಯಾಗುವುದಿಲ್ಲ. ಶಿಕ್ಷಕರು, ಉಪನ್ಯಾಸಕರನ್ನು ಸಹ ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳುವುದಕ್ಕೂ ಯಾವುದೇ ಅಡ್ಡಿಗಳಿರುವುದಿಲ್ಲ ಎಂಬುದು ಆಯೋಗದ ಅಧಿಕಾರಿಗಳ ಲೆಕ್ಕಾಚಾರವಾಗಿದೆ.

Latest Videos
Follow Us:
Download App:
  • android
  • ios