ತುಮಕೂರು : ಲೋಕಸಭೆ ಟಿಕೆಟ್ ಇವರು ಪಡೆಯುತ್ತಾರ?

ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧಿಸುತ್ತಾರಾ. ಹೌದೆನ್ನುತ್ತದೆ ತುಮಕೂರು ಹಾಲಿ ಸಂಸದ ಜಿ.ಎಸ್‌. ಬಸವರಾಜು ಅವರ ಭಾಷಣದ ಆಡಿಯೋ.

Will Somanna contest for Tumkur Lok Sabha  snr

  ತುಮಕೂರು :  ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಬಾಕಿ ಇರುವಾಗಲೇ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಸ್ಪರ್ಧಿಸುತ್ತಾರಾ. ಹೌದೆನ್ನುತ್ತದೆ ತುಮಕೂರು ಹಾಲಿ ಸಂಸದ ಜಿ.ಎಸ್‌. ಬಸವರಾಜು ಅವರ ಭಾಷಣದ ಆಡಿಯೋ.

ವೀರಶೈವ ಸಮಾಜದ ಕಾರ್ಯಕ್ರಮದಲ್ಲಿ ಸಂಸದ ಜಿ.ಎಸ್‌.ಬಸವರಾಜು ಅವರ ಮಾತು ಈಗ ವೈರಲ್‌ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಸೋಮಣ್ಣಗೆ ಸಾಥ್‌ ನೀಡುವಂತೆ ವೀರಶೈವ ಸಮಾಜಕ್ಕೆ ಸಂಸದ ಜಿ.ಎಸ್‌.ಬಸವರಾಜು ಕರೆ ಕೊಟ್ಟಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅವರು ತಮ್ಮ ಭಾಷಣದಲ್ಲಿ ಸೋಮಣ್ಣ ಅವರ ಬೆಂಬಲಕ್ಕೆ ನಿಲ್ಲಿ ಎಂದು ಕರೆ ಕೊಟ್ಟಿದ್ದು ಸಮಾಜ ಒಗ್ಗಟ್ಟಾಗಿದ್ದರೆ ಏನು ಬೇಕಾದರೂ ಸಾಧಿಸಬಹುದು ಎಂದಿದ್ದಾರೆ.

ನಿಮ್ಮಲ್ಲೇ ಕಿತ್ತಾಡಿದ್ರೆ, ನಿಮ್ಮನ್ನೇ ಒದ್ದು ಓಡಿಸುತ್ತಾರೆ. ಅದು ಕೂಡ ಸನ್ನಿತವಾಗಿದೆ ಎಂದಿರುವ ಬಸವರಾಜು ನನ್ನದಾಯ್ತು, ನನ್ನ ಸೀಟನ್ನಾ ಸೋಮಣ್ಣಗೆ ಕೊಡುತ್ತಾರೆ ಎಂದಿದ್ದಾರೆ. ನಾನು ಚುನಾವಣೆಯಲ್ಲಿ ನಿಲ್ಲಲ್ಲ, ನಾನು ದೆಹಲಿಗೆ ಹೋಗಿದ್ದಾಗ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿರುವ ಬಸವರಾಜು ಮುಂದೆ ಬರುವವರನ್ನು ಉಪಯೋಗಿಸಿಕೊಳ್ಳಿ, ಇಬ್ಬಗೆ ನೀತಿ ಮಾಡಿಕೊಳ್ಳಬೇಡಿ ಎಂದಿದ್ದಾರೆ. ಇವರ ಮೇಲೆ ಅವರನ್ನು ಅವರ ಮೇಲೆ ಇವರನ್ನು ಎತ್ತಿಕಟ್ಟಬೇಡಿ ಎಂದಿದ್ದಾರೆ.

ನಾನು ಲೋಕಸಭೆಗೆ 8 ಬಾರಿ ಸ್ಪರ್ಧಿಸಿದ್ದು 5 ಸಲ ಗೆದ್ದಿದ್ದೇನೆ, ಮೂರು ಸಲ ಸೋತಿದ್ದೇನೆ ಎಂದಿರುವ ಅವರು ನಮ್ಮವರೇ ನನ್ನ ಸೋಲಿಸಿದ್ದು ಎಂದಿದ್ದಾರೆ. ನಾನು ಸೋತರೂ, ಗೆದ್ದರೂ ಒಂದೇ ಕೆಲಸ ಮಾಡಿಸಿಕೊಂಡು ಬರುತ್ತಿದ್ದೆ ಎಂದಿದ್ದಾರೆ.

ಮತ್ತೊಬ್ಬ ಸಂಸದರ ಅಪಸ್ವರ

ಕೊಪ್ಪಳ(ಜೂ.08):  ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿಯ 13 ಮಂದಿ ಹಾಲಿ ಸಂಸದರಿಗೆ ಟಿಕೆಟ್‌ ಇಲ್ಲ ಎಂಬ ಮಾಧ್ಯಮ ವರದಿ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲಗಳ ಬಗ್ಗೆ ಸಂಸದ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. 

ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ತಕ್ಷಣವೇ ಮಧ್ಯಪ್ರವೇಶ ಮಾಡಿ, ಈ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಆಗ್ರಹಿಸಿದ್ದರು. ಅವರ ಬಳಿಕ, ಮತ್ತೊಬ್ಬ ಬಿಜೆಪಿ ಸಂಸದ ಸಂಗಣ್ಣ ಕರಡಿ ಕೂಡ ಅಪಸ್ವರ ವ್ಯಕ್ತಪಡಿಸಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಪ್ರಮುಖ ಕಾರಣವೇ ಟಿಕೆಟ್‌ ಹಂಚಿಕೆಯಲ್ಲಾದ ಗೊಂದಲ. ಹೀಗಾಗಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಾದರೂ 6 ತಿಂಗಳ ಮೊದಲೇ ಟಿಕೆಟ್‌ ಘೋಷಣೆ ಮಾಡಿ ಎಂದು ಆಗ್ರಹಿಸಿದ್ದಾರೆ.

ಸೂಲಿಬೆಲೆ ಜೈಲ್‌ಗೆ ಹಾಕ್ತೇವೆ ಅನ್ನೋಕೆ ಎಂಬಿ ಪಾಟೀಲ್ ಯಾರು? ಗೃಹಮಂತ್ರಿನಾ? ಸಂಸದ ಸಂಗಣ್ಣ ಕರಡಿ ವಾಗ್ದಾಳಿ

ನಗರದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಕೊಪ್ಪಳ ಸಂಸದ ಕರಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಪ್ರಮುಖ ಕಾರಣವೇ ಟಿಕೆಟ್‌ ಹಂಚಿಕೆಯಲ್ಲಾದ ಗೊಂದಲ. ನಾಮಪತ್ರ ಸಲ್ಲಿಕೆಯ ಕೊನೆಯ ದಿನದವರೆಗೂ ಕೆಲವರಿಗೆ ಟಿಕೆಟ್‌ ಇಲ್ಲ ಎನ್ನುವಂತಾಗಿತ್ತು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸೇರಿದಂತೆ ವಿವಿಧ ಕ್ಷೇತ್ರಗಳ ಟಿಕೆಟ್‌ ಹಂಚಿಕೆ ಕುರಿತು ಸಂಸದನಾದ ನನಗೇ ಏನೂ ಗೊತ್ತಿರಲಿಲ್ಲ. ನನ್ನ ಸೊಸೆಗೆ ಟಿಕೆಟ್‌ ಘೋಷಣೆ ಮಾಡಿದ ಮೇಲೆಯೇ ನನಗೂ ಗೊತ್ತಾಗಿದೆ. ಕ್ಷೇತ್ರದಲ್ಲಿ ಹಲವಾರು ಕಾರ್ಯಕರ್ತರು ಪಕ್ಷ ಸಂಘಟನೆ ಮಾಡಿದವರಿದ್ದರು. ಯಾರಾರ‍ಯರದೋ ಹೆಸರು ಮುನ್ನೆಲೆಯಲ್ಲಿ ಇತ್ತು. ಆ ಪೈಕಿ, ಮಹಾಂತೇಶ ಮೈನಳ್ಳಿ ಅವರಿಗೆ ಟಿಕೆಟ್‌ ಘೋಷಣೆ ಮಾಡಿದ್ದರೂ ನಾನು ಗೆಲ್ಲಿಸಿಕೊಂಡು ಬರುತ್ತಿದ್ದೆ. ಆದರೆ, ಕೊನೆ ಗಳಿಗೆಯಲ್ಲಿ ತೀರ್ಮಾನ ಮಾಡಿದ್ದರಿಂದ ತೀವ್ರ ಸಮಸ್ಯೆಯಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಲೂ ಲೋಕಸಭಾ ಚುನಾವಣೆಗೆ ವರ್ಷ ಇರುವಾಗಲೇ 13 ಸಂಸದರಿಗೆ ಟಿಕೆಟ್‌ ಕೈ ತಪ್ಪುತ್ತದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತು ಪಕ್ಷದ ಹೈಕಮಾಂಡ್‌ ಸ್ಪಷ್ಟನೆ ನೀಡಬೇಕು. ಇಂತಹ ಗೊಂದಲಗಳಿಂದ ಸಮಸ್ಯೆಯಾಗುತ್ತದೆ. ಹೀಗಾಗಿ, ಲೋಕಸಭಾ ಚುನಾವಣೆಯಲ್ಲಿ ಯಾರಿಗಾದರೂ ಟಿಕೆಟ್‌ ಕೊಡಿ. ಆದರೆ, 6 ತಿಂಗಳ ಮೊದಲೇ ಘೋಷಣೆ ಮಾಡಿ. ಇದರಿಂದ ಚುನಾವಣೆಗೆ ತಯಾರಿಯನ್ನಾದರೂ ಮಾಡಿಕೊಳ್ಳಲು ಅನುಕೂಲವಾಗುತ್ತದೆ. ನಾನು ನನಗೆ ಟಿಕೆಟ್‌ ಕೊಡಿ ಎಂದು ಕೇಳುವುದಿಲ್ಲ. ಆದರೆ, ಬೇಗನೇ ತೀರ್ಮಾನ ಮಾಡಬೇಕು ಮತ್ತು ಊಹಾಪೋಹಗಳಿಗೆ ತೆರೆ ಎಳೆಯಬೇಕು ಎಂದು ಪಕ್ಷದ ಮುಖಂಡರನ್ನು ಆಗ್ರಹಿಸಿದರು.

Latest Videos
Follow Us:
Download App:
  • android
  • ios