ಮೈಸೂರು (ಮಾ.13): ಮೈಸೂರಿನಾದ್ಯಂತ ಪ್ರವಾಸಿ ತಾಣದಲ್ಲಿ ಪಾರ್ಕಿಂಗ್‌ಗೆ ಒನ್‌ ಟಿಕೆಟ್‌ ಸಿಸ್ಟಮ್‌ ಜಾರಿಗೆ ತರಲು ಚಿಂತಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್‌ ತಿಳಿಸಿದ್ದಾರೆ.

 ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ರಾಜ್ಯದ ಪ್ರವಾಸಿಗರು ರಾಜ್ಯಕ್ಕೆ ಬರಲು ವಾಹನಗಳಿಗೆ ಹೆಚ್ಚು ತೆರಿಗೆ ವಿಧಿಸುತ್ತಿರುವುದ್ದರಿಂದ ಹೆಚ್ಚು ಪ್ರವಾಸಿಗರು ಬರುತ್ತಿಲ್ಲ. ಇದರಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ನಷ್ಟವಾಗುತ್ತಿತ್ತು. ಇದೀಗ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಏಕ ರೂಪ ತೆರಿಗೆ ವ್ಯವಸ್ಥೆ ಜಾರಿಗೊಳಿಸುತ್ತಿದ್ದು, ಇದು ಮುಂದಿನ ತಿಂಗಳು ಜಾರಿಗೆ ಬರಲಿದೆ. ಇದು ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೈಸೂರಿನಲ್ಲಿ 21 ಅಡಿ ಎತ್ತರದ ತೆಂಗಿನಕಾಯಿಯ ಬೃಹತ್ ಶಿವಲಿಂಗ ..

ಮೈಸೂರನ್ನು ಉತ್ತಮ ಹೆಲಿ ಟೂರಿಸಂ ಪ್ರವಾಸಿ ತಾಣವನ್ನಾಗಿ ಮಾಡುವ ಗುರಿ ಇದೆ. ಹಾಗೆಯೇ, ಮೈಸೂರನ್ನು ಟೂರಿಸಂ ಸಕ್ರ್ಯೂಟ್‌ ಮಾಡುವ ನಿಟ್ಟಿನಲ್ಲಿ ಯೋಜನೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಇದೇ ವೇಳೆ ಕೆಆರ್‌ಎಸ್‌ನಲ್ಲಿ ಡಿಸ್ನಿಲ್ಯಾಂಡ್‌ ಮಾದರಿಯಲ್ಲಿ ಅಭಿವೃದ್ಧಿ ಯೋಜನೆ, ಮೈಸೂರಿನ ಚಾಮುಂಡಿಬೆಟ್ಟಕ್ಕೆ ರೋಪ್‌ ವೇ ಯೋಜನೆ ತರಲು ಬದ್ಧವಾಗಿರುವುದಾಗಿ ತಿಳಿಸಿದರು.