ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ದುಡಿಯುತ್ತೇನೆ : ಕೃಷ್ಣ

ಕಾಂಗ್ರೆಸ್‌ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ದುಡಿಯುತ್ತೇನೆ ಎಂದು ಕಾಂಗ್ರೆಸ್‌ ಮುಖಂಡ ಕೃಷ್ಣಕುಮಾರ್‌ ಸಾಗರ್‌ ಹೇಳಿದರು.

Will work to bring Congress to power: Krishna snr

 ಮೈಸೂರು :  ಕಾಂಗ್ರೆಸ್‌ ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ದುಡಿಯುತ್ತೇನೆ ಎಂದು ಕಾಂಗ್ರೆಸ್‌ ಮುಖಂಡ ಕೃಷ್ಣಕುಮಾರ್‌ ಸಾಗರ್‌ ಹೇಳಿದರು.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್‌ ಅವರಿಂದ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹುದ್ದೆಯ ಆದೇಶ ಪತ್ರವನ್ನು ಸ್ವೀಕರಿಸಿ ಅವರು ಮಾತನಾಡಿದರು.

ನಮ್ಮ ನಾಯಕರಾದ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ. ನಾನು ಸಹ ಚಾಮುಂಡೇಶ್ವರಿ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದೆ. ಸಿದ್ದರಾಮಯ್ಯ ಅವರು ಸಿದ್ದೇಗೌಡರಿಗೆ ಟಿಕೆಟ್‌ ಕೊಡುತ್ತೇವೆ ಅವರನ್ನು ಗೆಲ್ಲಿಸಿಕೊಂಡು ಬನ್ನಿರಿ ಎಂದು ಆದೇಶ ನೀಡಿದ್ದಾರೆ. ಅವರ ಆದೇಶದಂತೆ ಸಿದ್ದೇಗೌಡರನ್ನು ಗೆಲ್ಲಿಸಿ ರಾಜ್ಯದಲ್ಲಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ ಎಂದರು.

ಉಮಾಶಂಕರ್‌, ಶಿವಕುಮಾರ್‌, ರಾಜೇಂದ್ರಪ್ರಸಾದ್‌, ಶಿವಕುಮಾರ್‌, ರವಿಕುಮಾರ್‌, ಚೆನ್ನಾಜಮ್ಮ ಹಾಗೂ ಕಾಂಗ್ರೆಸ್‌ ಮುಖಂಡರು ಇದ್ದರು.

ಜೆಡಿಎಸ್‌ ಬಗ್ಗೆ ಲಘುವಾಗಿ ಮಾತನಾಡುವುದು ಬೇಕಾಗಿಲ್ಲ

ಬೆಂಗಳೂರು (ಮಾ.31): ಜೆಡಿಎಸ್‌ ಬಗ್ಗೆ ಲಘುವಾಗಿ ಮಾತನಾಡುವುದು ಬೇಕಾಗಿಲ್ಲ, ತಾಕತ್ತಿದ್ದರೆ ಕಾಂಗ್ರೆಸ್‌ ಬಿಟ್ಟು ಬೇರೆ ಪಕ್ಷ ಕಟ್ಟಿಎರಡು ಸೀಟು ತರಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಗುರುವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಕುರಿತು ಸಿದ್ದರಾಮಯ್ಯ ಹೇಳಿಕೆಯು ವಿಶ್ವದ ಎಂಟನೇ ಅದ್ಭುತ. ಜೆಡಿಎಸ್‌ನಲ್ಲಿ ಯಾರು ಪಾಳೆಗಾರಿಕೆ ಮಾಡಿದರು ಎಂಬುದು ಗೊತ್ತಿದೆ. ಅವರು ನಮ್ಮ ಪಕ್ಷದಲ್ಲಿದ್ದಾಗ ನಾವು ಸ್ಟೇಜ್‌ ಹಾಕಬೇಕಿತ್ತು, ಜನ ಸೇರಿಸಬೇಕಿತ್ತು. 

ಇವರು ಬಂದು ಕಾಲು ಮೇಲೆ ಕಾಲು ಹಾಕಿಕೊಂಡು ಕೂರುತ್ತಿದ್ದರು. ಅವರನ್ನು ವೇದಿಕೆಯೇರಿಸಿ ನಾವು ರಸ್ತೆಯಲ್ಲಿ ನಿಲ್ಲುತ್ತಿದ್ದೆವು. ಸಿದ್ದರಾಮಯ್ಯ ಪಾಳೆಗಾರಿಕೆ ಮಾಡುತ್ತಾ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಹೆದರಿಸಿಕೊಂಡು ಇದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು. ಬ್ಯಾನರ್‌ನಲ್ಲಿ ಫೋಟೋ ಇಲ್ಲದಿದ್ದರೆ ಸಭೆಗೆ ಬರುವುದಿಲ್ಲ ಎನ್ನುತ್ತಿದ್ದರು. 2006ರಲ್ಲಿ ಪಕ್ಷ ತೊರೆದು ಮೈಸೂರು ಭಾಗದಲ್ಲಿ ಶಾಸಕರನ್ನು ಹೈಜಾಕ್‌ ಮಾಡಿದರು. ನಂತರ ಎಷ್ಟುಗೆಲ್ಲಿಸಿಕೊಂಡರು? ಅವರು ಗೆದ್ದಿದ್ದು ಕೇವಲ 200 ಮತಗಳಿಂದ. 

ಸಾಮಾಜಿಕ ಜಾಲತಾಣದ ಹಿಂದಿನ ಶಕ್ತಿಯೇ ಸ್ತ್ರೀ: ಸಂಸದ ತೇಜಸ್ವಿ ಸೂರ್ಯ

ಜೆಡಿಎಸ್‌ ಅವರನ್ನು ಬೆಳೆಸದಿದ್ದರೆ ಕಾಂಗ್ರೆಸ್‌ನವರು ಎಲ್ಲಿ ಕರೆಯುತ್ತಿದ್ದರು? ಸಿದ್ದರಾಮಯ್ಯ ಅವರನ್ನು ಮೂಸಿಯೂ ನೋಡುತ್ತಿರಲಿಲ್ಲ. ಪಕ್ಷವನ್ನು ಮುಗಿಸಲು ಹೊರಟಾಗ ನಾವು ಮಧ್ಯ ಪ್ರವೇಶಿಸಿದೆವು. ಇದೇ ಸಿದ್ದರಾಮಯ್ಯ ಹಿಂದೆ ಇಕ್ಬಾಲ್‌ ಅನ್ಸಾರಿ ಅವರನ್ನು ಸಚಿವರನ್ನಾಗಿ ಮಾಡಬೇಡಿ ಎಂದು ಗಲಾಟೆ ಮಾಡಿದ್ದರು. ಸಭೆಯಿಂದ ಟವೆಲ್‌ ಕೊಡವಿಕೊಂಡು ಎದ್ದು ಹೋಗಿದ್ದರು. ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿದ್ದೇ ಹೆಚ್ಚು, ಯಾಕೆ ಸಚಿವರನ್ನಾಗಿ ಮಾಡುತ್ತೀರಿ ಎಂದು ಗಲಾಟೆ ಮಾಡಿದ್ದರು. ಅಂತಹ ವ್ಯಕ್ತಿ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ ಎಂದು ಹರಿಹಾಯ್ದರು.

ಎಚ್ಡಿಕೆ ಮತ್ತೊಮ್ಮೆ ಸಿಎಂ ಖಚಿತ: 2023ರಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ ಮತ್ತಷ್ಟುಯೋಜನೆ ಅನುಷ್ಠಾನಗೊಳಿಸಲಾಗುವುದು. ನಾನು ಮತ್ತೆ ಶಾಸಕನಾಗಿ ಆಯ್ಕೆಯಾಗಲು ಕ್ಷೇತ್ರದ ಜನತೆ ಸಹಕಾರ ನೀಡಬೇಕೆಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು. ತಾಲೂಕಿನ ಡಿಂಕಾ ಗ್ರಾಮದಲ್ಲಿ ನಡೆದ ಚಿನಕುರಳಿ ಜಿಪಂ ಕ್ಷೇತ್ರ ವ್ಯಾಪ್ತಿಯ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಶಾಸಕ, ಸಚಿವನಾಗಿ ಕ್ಷೇತ್ರದಲ್ಲಿ ಹಲವಾರು ಜನಪರ ಯೋಜನೆ ಅನುಷ್ಠಾನಗೊಳಸಿದ್ದೇವೆ. ಇನ್ನೂ ಹಲವರು ಯೋಜನೆ ಪೂರ್ಣಗೊಳ್ಳಬೇಕಾಗಿದೆ ಎಂದರು.

ಈ ಸಲ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ: ಜಗದೀಶ್‌ ಶೆಟ್ಟರ್‌ ಅಭಿಮತ

Latest Videos
Follow Us:
Download App:
  • android
  • ios