ಡಾ.ರಾಜೇಶ್‌ಗೌಡರನ್ನೇ ಮತ್ತೆ ಗೆಲ್ಲಿಸಿ: ಚಿದಾನಂದ್ ಎಂ.ಗೌಡ
ರಾಜ್ಯಾದ್ಯಂತ ನಡೆದ ಹಲವು ಸಮೀಕ್ಷೆಗಳಲ್ಲಿ ಹಾಗೂ ಬಿಜೆಪಿ ಆಂತರಿಕ ಸಮೀಕ್ಷೆಗಳಲ್ಲಿ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟಬಹುಮತದಿಂದ ಸರ್ಕಾರ ರಚಿಸಲಿದೆ. ಆದ್ದರಿಂದ ಮತದಾರರು ಡಾ.ಸಿ.ಎಂ. ರಾಜೇಶ್ ಗೌಡ ಅವರನ್ನು ಗೆಲ್ಲಿಸಿ, ಶಿರಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಶಿರಾ : ರಾಜ್ಯಾದ್ಯಂತ ನಡೆದ ಹಲವು ಸಮೀಕ್ಷೆಗಳಲ್ಲಿ ಹಾಗೂ ಬಿಜೆಪಿ ಆಂತರಿಕ ಸಮೀಕ್ಷೆಗಳಲ್ಲಿ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ಪಷ್ಟಬಹುಮತದಿಂದ ಸರ್ಕಾರ ರಚಿಸಲಿದೆ. ಆದ್ದರಿಂದ ಮತದಾರರು ಡಾ.ಸಿ.ಎಂ. ರಾಜೇಶ್ ಗೌಡ ಅವರನ್ನು ಗೆಲ್ಲಿಸಿ, ಶಿರಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಅವರು ನಗರದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ದೇಶದಲ್ಲಿ ಪ್ರಧಾನಿ ಮೋದಿಯವರ ಹಾಗೂ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮೋದಿಯವರ ರಾಜ್ಯಾದ್ಯಂತ ಹಲವು ಕಡೆ ರೋಡ್ ಶೋ ನಡೆಸಿ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸವನ್ನು ಹಿಮ್ಮಡಿಗೊಳಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಸಂಪೂರ್ಣ ಬಹುಮತದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಶಿರಾ ಕ್ಷೇತ್ರವೂ ಅಭಿವೃದ್ಧಿಯಾಗಲಿದೆ. ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಅಭ್ಯರ್ಥಿಗಳು ಅನುಕಂಪದ ಆಧಾರದಲ್ಲಿ ಮತ ಕೇಳುವುದು ಸರಿಯಲ್ಲ. ಮಾಜಿ ಮಂತ್ರಿಗಳು ನನ್ನ ಕೊನೆ ಚುನಾವಣೆ ಎಂದರೆ, ಜೆಡಿಎಸ್ ಅಭ್ಯರ್ಥಿ ನಾನು ಬಡವ ಎಂದು ಮತ ಕೇಳುತ್ತಿದ್ದಾರೆ. ಆದರೆ ಬಿಜೆಪಿ ಅಭಿವೃದ್ಧಿಯ ಆಧಾರದಲ್ಲಿ ಮತ ಕೇಳುತ್ತಿದೆ. ಆದ್ದರಿಂದ ಮತದಾರರು ಅನುಕಂಪದ ಆಧಾರದ ಮೇಲೆ ಮತ ನೀಡಬೇಡಿ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಸಶಕ್ತವಾಗಿದ್ದು, ಅಭಿವೃದ್ಧಿ ಕಾರ್ಯ ಮಾಡುತ್ತೇವೆ. ಉಪಚುನಾವಣೆಯಲ್ಲಿ ಕೊಟ್ಟಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಮುಂದೆಯೂ ತಾಲೂಕನ್ನು ಜಿಲ್ಲಾ ಕೇಂದ್ರದ ಮಟ್ಟಕ್ಕೆ ಅಭಿವೃದ್ಧಿ ಮಾಡಿ ಜಿಲ್ಲಾ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು.
ಬಿಜೆಪಿ ಪಕ್ಷ ಶಿರಾ ಕ್ಷೇತ್ರಕ್ಕೆ ವಿಶೇಷ ಪ್ರಾತಿನಿಧ್ಯ ನೀಡಿದೆ. ಶಿರಾ ತಾಲೂಕಿನ ಹುಲಿಕುಂಟೆ ಹೋಬಳಿಯ ನನಗೆ ಹಾಗೂ ಡಾ.ಸಿ.ಎಂ.ರಾಜೇಶ್ ಗೌಡ ಅವರಿಗೆ ಟಿಕೇಟ್ ನೀಡಿದೆ. ಬಿ.ಕೆ.ಮಂಜುನಾಥ್ ಅವರಿಗೆ ತೆಂಗು ನಿಗಮ, ಜೆಡಿಎಸ್‌ಗೆ ಹೋಗಿರುವ ಎಸ್.ಆರ್.ಗೌಡ ಅವರಿಗೆ ರೇಷ್ಮೆ ನಿಗಮ ಹಾಗೂ ಪ್ರಸ್ತುತ ಚಂಗಾವರ ಮಾರಣ್ಣ ಅವರಿಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿದೆ. ಮದಲೂರು ಕೆರೆಗೆ ಮೂರು ಬಾರಿ ಹೇಮಾವತಿ ನೀರು ಹರಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಿದೆ. ಅಪ್ಪರ್ ಭದ್ರ ಯೋಜನೆಗೆ 1000 ಕೋಟಿ ಅನುದಾನ ನೀಡಿದೆ. ಆದ್ದರಿಂದ ಮತದಾರರು ಯೋಚಿಸಿ ಮತ ನೀಡಿ ಬಿಜೆಪಿ ಪಕ್ಷವು ಶಿರಾ ತಾಲೂಕಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಿದ್ದು ಮತ್ತೊಮ್ಮೆ ಡಾ.ಸಿ.ಎಂ.ರಾಜೇಶ್ ಗೌಡ ಅವರನ್ನು ಗೆಲ್ಲಿಸಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಿರಾ ವಿಧಾನಸಭಾ ಚುನಾವಣಾ ಉಸ್ತುವಾರಿ ಹನುಮಂತೇಗೌಡ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ರಂಗಸ್ವಾಮಿ, ನಗರ ಅಧ್ಯಕ್ಷ ವಿಜಯರಾಜ್, ಮಾಜಿ ಗ್ರಾ.ಪಂ. ಅಧ್ಯಕ್ಷ ಈರಣ್ಣಪಟೇಲ್, ಶಿರಾ ಯೋಜನಾ ಪ್ರಾಧಿಕಾರದ ಸದಸ್ಯ ನರಸಿಂಹಮೂರ್ತಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಓಂಕಾರ್, ಗ್ರಾ.ಪಂ. ಸದಸ್ಯ ಶಿವಲಿಂಗಯ್ಯ, ಕುಮಾರ್, ರವಿ, ನೇರಲಗುಡ್ಡ ಶಿವಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.