ಕುಣಿಗಲ್ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆಲ್ಲಿಸಿ: ಡಿಕೆಶಿ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತನೀಡಿ, ತಾಲೂಕಿನ ಅಭಿವೃದ್ಧಿಗೆ ಅವಕಾಶ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತಯಾಚಿಸಿದರು.
ಕುಣಿಗಲ್ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತನೀಡಿ, ತಾಲೂಕಿನ ಅಭಿವೃದ್ಧಿಗೆ ಅವಕಾಶ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತಯಾಚಿಸಿದರು.
ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಪ್ರಜಾಧ್ವನಿ ಯಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಪ್ರತಿ ಕುಟುಂಬದ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರುಪಾಯಿ, ಇನ್ನೂರು ಯುನಿಟ್ ಉಚಿತ ವಿದ್ಯುತ್ ಹಾಗೂ ಕುಟುಂಬದ ಪ್ರತಿ ಸದಸ್ಯನಿಗೆ ಹತ್ತು ಕೆ.ಜಿ ಉಚಿತ ಅಕ್ಕಿ, ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಮೂರು ಸಾವಿರ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನೀಡುತ್ತೇವೆ ಎಂದು ಭರವಸೆ ನೀಡಿದರು.
ಭ್ರಷ್ಟಾಚಾರ ರಹಿತ ಆಡಳಿತ ನಮ್ಮ ಗುರಿಯಾಗಿದೆ. ಇಂದಿನ ಬಿಜೆಪಿ ಸರ್ಕಾರದಲ್ಲಿ 40% ಭ್ರಷ್ಟಾಚಾರ, ಪಿಎಸ್‌ಐ ಹಗರಣ, ಪೆಟ್ರೊಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಸೇರಿದಂತೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಬಿಜೆಪಿ ಸರ್ಕಾರದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ, ಜನಸಾಮಾನ್ಯರ ಬದುಕು ಬೀದಿಗೆ ಬಿದ್ದಿದೆ ಎಂದು ಕಿಡಿಕಾರಿದರು.
ನಾನು ಜಲ ಸಂಪನ್ಮೂಲ ಸಚಿವನಾಗಿದ್ದ ಅವಧಿಯಲ್ಲಿ ಕುಣಿಗಲ್ ತಾಲೂಕಿನ ನೀರಾವರಿ ಯೋಜನೆಗೆಂದು 614 ಕೋಟಿ ಹಣ ಬಿಡುಗಡೆಯಾಗಿ ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇT್ಟತ್ವದ ಬಿಜೆಪಿ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಯೋಜನೆಯನ್ನು ರದ್ದುಗೊಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯೋಜನೆಗೆ ಮತ್ತೆ ಚಾಲನೆ ನೀಡಲಾಗುವುದು ಎಂದರು.
ಕಾಂಗ್ರೆಸ್ ಮುಖಂಡ ಎಸ್.ವಿ.ಬಿ.ಸುರೇಶ್ ಡಿ.ಕೆ.ಶಿವಕುಮಾರ್‌ಗೆ ಬೆಳ್ಳಿಯ ಗದೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಮಂಜುಳ ಶೇಷಗಿರಿ ಬೆಂಬಲಿಗರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಪಟ್ಟಣದಲ್ಲಿ ಬೃಹತ್ ಬೈಕ್ ರಾರಯಲಿಯನ್ನು ಹಮ್ಮಿಕೊಂಡು ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ಗೆ ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಚಿವೆ ಉಮಾಶ್ರೀ, ಶಾಸಕ ಡಾ.ರಂಗನಾಥ್, ಮಾಜಿ ಶಾಸಕ ಎಚ್.ನಿಂಗಪ್ಪ, ಜಿ.ಪಂ ಮಾಜಿ ಸದಸ್ಯೆ ಅನುಸೂಯಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ ಹಲವು ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕುಮಾರಸ್ವಾಮಿಗೆ ಪಾಠ ಕಲಿಸ್ತೀನಿ
ಬೆಂಗಳೂರು (ಮಾ.19): ನಾಗಮಂಗಲದ ಇಬ್ಬರು ಅಭ್ಯರ್ಥಿಗಳನ್ನು ಸೋಲಿಸುವ ಅವಕಾಶ ಇರುವುದು ನನ್ನೊಬ್ಬನಿಗೆ ಮಾತ್ರ. ಮಂಡ್ಯದಲ್ಲಿ ಇನ್ನುಮುಂದೆ ಮೂರನೇ ಆಟ ಶುರುವಾಗುತ್ತದೆ. ಜೆಡಿಎಸ್‌ನಲ್ಲಿ ನನ್ನನ್ನು ಬಳಸಿಕೊಂಡ ದೇವೇಗೌಡರ ಮತ್ತು ಕುಮಾರಸ್ವಾಮಿ ನನ್ನ ಬೆನ್ನಿಗೆ ಚೂರಿ ಹಾಕಿದವರಿಗೆ ಪಾಠ ಕಲಿಸುವುದಾಗಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಹೇಳಿದ್ದಾರೆ.
ಬೆಂಗಳೂರಿನ ನಾಯಂಡನಹಳ್ಳಿಯ ನಂದಿ ಲಿಂಕ್ ಗ್ರೌಂಡ್ ನಲ್ಲಿ ನಡೆದ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬೆಂಗಳೂರು ನಿವಾಸಿಗಳ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದರು. ನಾಗಮಂಗಲ ಕ್ಷೇತ್ರದಲ್ಲಿ ನನಗೆ ನನ್ನದೇ ಆದಂತಹ ಮತಗಳು ಇವೆ. ಇನ್ನೂ 2-3 ದಿನಗಳಲ್ಲಿ ಬಿಜೆಪಿ ನಾನು ನನ್ನ ಮಗ ಬಿಜೆಪಿ ಸೇರುತ್ತೇವೆ. ಈಗಾಘಲೇ ನಾನು ಪಕ್ಷದ ಎಲ್ಲ ನಾಯಕರ ಜೊತೆಗೆ ಚರ್ಚೆ ಮಾಡಿದ್ದೇನೆ. ನನಗೆ ಒಂದು ರಾಷ್ಟ್ರೀಯ ಪಕ್ಷದ ಶಕ್ತಿ ಬೇಕಾಗಿತ್ತು. ಮಂಡ್ಯದಲ್ಲಿ ಬಿಜೆಪಿಯ ಶಕ್ತಿ ಸ್ವಲ್ಪ ಕಡಿಮೆ ಇತ್ತು. ಆದರೆ ರಾಷ್ಟ್ರೀಯ ನಾಯಕರು ಅಲ್ಲಿ ಪಕ್ಷ ಕಟ್ಟುವ ಇಚ್ಚೆ ಪಟ್ಟಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಮುಟ್ಟಿ ನೋಡಿಕೊಳ್ಳಬೇಕು. ಮಂಡ್ಯದಲ್ಲಿ ಇನ್ಮುಂದೆ ಮೂರನೇ ಆಟ ಶುರುವಾಗುತ್ತದೆ. ಮಂಡ್ಯದಲ್ಲಿ 7ಕ್ಕೆ 7 ಸೀಟು ಗೆಲ್ಲಿಸಲು ಪಣ ತೊಡುತ್ತೇವೆ ಎಂದು ಹೇಳಿದರು.
ಮಗನಿಗಾಗಿ ನನ್ನನ್ನು ಬಲಿಕೊಟ್ಟು ಗೌಡರನ್ನೂ ಬಲಿ ಕೊಟ್ಟಎಚ್‌ಡಿಕೆ : ಎಲ್‌ಆರ್‌ಎಸ್
ದೇವೇಗೌಡರಿಗೆ ಮೋದಿ ಮೇಲೆ ಗೌರವವಿದೆ: ಮಂಡ್ಯದ ಸ್ವಾಭಿಮಾನ ಅಮಿತ್ ಶಾ ಕಾಲು ಕೆಳಗೆ ಹೋಗಿದೆ ಎಂದು ಕುಮಾರಸ್ವಾಮಿ ಹೇಳುತ್ತಾರೆ. ಆದರೆ, ಅಮಿತ್ ಶಾ ಜೊತೆಗೆ ಕುಮಾರಸ್ವಾಮಿ ಹೋದಾಗ ಅವರಿಗೆ ಪಾದ ನೆನಪು ಆಗಲಿಲ್ಲವೇ.? ನರೇಂದ್ರ ಮೋದಿಯವರು ದೇವೇಗೌಡರನ್ನು ಗೌರವಯುತವಾಗಿ ಕಂಡಿದ್ದಾರೆ. ದೇವೇಗೌಡರು ಕೂಡ ನರೇಂದ್ರ ಮೋದಿ, ಅಮಿತ್ ಶಾ ಮೇಲೆ ಪ್ರೀತಿ ಇಟ್ಟುಕೊಂಡಿದ್ದಾರೆ. ನಿಮ್ಮ ಕಾಲಿಗೆ ಬಿದ್ದಿದ್ದಾರೆ ಅಂದರೆ ಅದು ಲೆಕ್ಕಕ್ಕೆ ಇಲ್ವಾ? ಕುಮಾರಸ್ವಾಮಿ ತೆಗೆದುಕೊಳ್ಳುವ ಯಾವುದೇ ನಿರ್ಧಾರದಲ್ಲೂ ಮಂಡ್ಯ ಜನರು ಜೊತೆಗಿರ್ತಾರೆ ಎಂಬುದನ್ನು ನಂಬಿಕೆ ಬಿಡಬೇಕು ಎಂದು ವಾಗ್ದಾಳಿ ನಡೆಸಿದರು.