ನೇತ್ರಾವತಿ ಸೇತುವೆಯಲ್ಲಿ ಮತ್ತೊಂದು ಆತ್ಮಹತ್ಯೆ: ಮಕ್ಕಳೊಂದಿಗೆ ನದಿಗೆ ಹಾರಿದ ಮಹಿಳೆ

ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಮತ್ತೊಂದು ಆತ್ಮಹತ್ಯೆ ಘಟನೆ ನಡೆದಿದೆ. ಪತಿ ಸಾವಿನಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕವಿತಾ ಮಂಡಣ್ಣ ರವರನ್ನು ಗೂಡಿನಬಳಿ ಸಮೀಪ ಸ್ಥಳೀಯ ಈಜುಗಾರರು ರಕ್ಷಿಸಿದ್ದು , ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

woman commits suicide in netravathi bridge in mangalore

ಮಂಗಳೂರು(ಸೆ.29): ಪತಿ ಸಾವಿನಿಂದ ಮನನೊಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳ ಜೊತೆ ನದಿಗೆ ಹಾರಿದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಪಾಣೆಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮೈಸೂರು ಸರಸ್ವತಿ ಪುರಂ ನಿವಾಸಿಗಳಾದ ಕವಿತಾಮಂಡಣ್ಣ(55), ಮಕ್ಕಳಾದ ಕೌಶಿಕ್ ಮಂಡಣ್ಣ(29) ಹಾಗೂ ಕಲ್ಪಿತಾ ಮಂಡಣ್ಣ(22) ನದಿಗೆ ಹಾರಿದವರು. ಈ ಮೂವರ ಪೈಕಿ ಕವಿತಾ ಮಂಡಣ್ಣ ರವರನ್ನು ಗೂಡಿನಬಳಿ ಸಮೀಪ ಸ್ಥಳೀಯ ಈಜುಗಾರರು ರಕ್ಷಿಸಿದ್ದು , ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ನೀರುಪಾಲಾಗಿದ್ದು ಅವರಿಗಾಗಿ ಹುಡುಕಾಟ ಮುಂದುವರಿದಿದೆ.ಇವರು ಮೂಲತಃ ಕೊಡಗು ಜಿಲ್ಲೆಯ ವಿರಾಜಪೇಟೆ ಕಡಂಗಳ ಬಳ್ಳಚಂಡ ಕುಟುಂಬದವರು.

ಇನ್ಮುಂದೆ ಕರಾವಳಿಯ ಎಲ್ಲ ರೈಲುಗಳಿಗೂ ಸಿಸಿ ಕ್ಯಾಮೆರಾ ಕಣ್ಗಾವಲು!

ಘಟನೆ ವಿವರ: ಕವಿತಾ ಮಂಡಣ್ಣ ರವರ ಪತಿ ಕಿಶನ್ ರವರು ಕಳೆದ ಕೆಲದಿನಗಳ ಹಿಂದೆ ವ್ಯವಹಾರದ ನಿಮಿತ್ತ ಮನೆಯಿಂದ ಹೋದವರು ವಾಪಾಸು ಬಂದಿರಲಿಲ್ಲ.ಅವರಿಗಾಗಿ ಮನೆ ಮಂದಿ ತೀವ್ರ ಹುಡುಕಾಟ ನಡೆಸಿದ್ದರು.ಈ ನಡುವೆ ಶನಿವಾರ 11ಗಂಟೆಯ ವೇಳೆಗೆ ಪತಿ  ಕಿಶನ್ ರವರು ಶವವಾಗಿ ಮೈಸೂರು ಸಮೀಪ ಪತ್ತೆಯಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ಹೇಳಲಾಗಿತ್ತು.
ಸಂಜೆ 5 ಗಂಟೆಯ ವೇಳೆಗೆ ಶವವನ್ನು ಇವರ ಮನೆಗೆ ತರಲಾಗಿದ್ದು, ಶವಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.

ಸಿದ್ಧಾರ್ಥ್‌ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ನೇತ್ರಾವತಿ ಸೇತುವೆಗೆ ರಕ್ಷಣಾ ಗೋಡೆ..?

ನಂತರದ ಬೆಳವಣಿಗೆಯಲ್ಲಿ ಮಾನಸಿಕವಾಗಿ ನೊಂದು ಕವಿತಾ ಮಂಡಣ್ಣ ಮತ್ತು ಮಕ್ಕಳು ಆತ್ಮಹತ್ಯೆ ತೀರ್ಮಾನ ಕೈಗೊಂಡಿದ್ದಾರೆಂದು ಹೇಳಲಾಗಿದೆ. ಸಂಜೆಯ ವೇಳೆಗೆ ತನ್ನ ಸಹೋದರನಿಗೆ ಕರೆ‌ಮಾಡಿದ ಮಂಡಣ್ಣ, ಪತಿಯ ಸಾವಿನ ವಿಚಾರ ತಿಳಿಸಿ, ನಾವಿನ್ನು ಬದುಕುವುದಿಲ್ಲ ಎಂದು ಹೇಳಿ ಫೋನ್ ಸ್ವಿಚ್ ಆಫ್ ಮಾಡಿಕೊಂಡು, ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ.
ಪಾಣೆಮಂಗಳೂರಿನಲ್ಲೇನಾಯಿತು.

ನೇತ್ರಾವತಿ ನದಿಗೆ ಬಿದ್ದು 10 ಕಿಮೀ ಬಳಿಕ ಸಿಕ್ಕ ವೃದ್ಧೆ!

ತಡರಾತ್ರಿ 10.50 ರ ಸುಮಾರಿಗೆ ಈಕೋ ವಾಹನದಲ್ಲಿ ಬಂದ ಮೂವರು ವಾಹನದಿಂದ ಇಳಿದು ಸೇತುವೆಯ ಪಕ್ಕ ನಡೆದುಕೊಂಡು ಹೋಗುತ್ತಿದ್ದರು. ಇವರನ್ನು ಕಂಡ ಸ್ಥಳೀಯರು ವಾಕಿಂಗ್ ಎಂದು ಭಾವಿಸಿದ್ದರು. ಕೆಲ‌ಕ್ಷಣದಲ್ಲಿಯೇ, ಸಾಕು‌ನಾಯಿ ಸಹಿತ ಮೂವರೂ ನದಿಗೆ ಹಾರಿದ್ದಾರೆ. ತಕ್ಷಣ ರಿಕ್ಷಾಚಾಲಕರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಗರ ಠಾಣಾಧಿಕಾರಿ ಚಂದ್ರಶೇಖರ್ ಮತ್ತವರ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ರಕ್ಷಣಾ ಕಾರ್ಯ ನಡೆಸಿದರು.

ಈ‌ ಮಹಿಳೆಯನ್ನು ಸ್ಥಳೀಯ ಈಜುಗಾರರು ರಕ್ಷಿಸಿದ್ದು,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸಾಕು ನಾಯಿ ಯನ್ನೂ ರಕ್ಷಿಸಲಾಗಿದೆ, ಆದರೆ ಅದು ತಪ್ಪಿಸಿಕೊಂಡು ಹೋಗಿದೆ ಎಂದು ತಿಳಿದುಬಂದಿದೆ.

ನಮ್‌ ಕಡೆ ಮಾತ್ ಕೇಳಿದ್ರೆ ಎದೆ ಹೊಡ್ಕೋತೀರಿ: ಉಡುಪಿಯಲ್ಲಿ ಶ್ರೀರಾಮುಲು ಹಾಸ್ಯ ಚಟಾಕಿ

ಘಟನೆ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ  ಇನ್ನಷ್ಟೇ ಪ್ರಕರಣ ದಾಖಲಾಗಿದ್ದು, ಮೃತರ ಸಂಬಂಧಿಗಳಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವೃತ್ತನಿರೀಕ್ಷಕ ಟಿ.ಡಿ.ನಾಗರಾಜ್ ಮಾರ್ಗದರ್ಶನದಲ್ಲಿ, ನಗರ ಠಾಣಾಧಿಕಾರಿ ಚಂದ್ರಶೇಖರ್ ತನಿಖೆ ನಡೆಸುತ್ತಿದ್ದಾರೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

Latest Videos
Follow Us:
Download App:
  • android
  • ios