ಬಳ್ಳಾರಿ: ಕ್ವಾರಂಟೈನ್‌ನಲ್ಲಿದ್ದ ಮಹಿಳೆ ಸಾವು, ಕಾರಣ..?
ಬಳ್ಳಾರಿ ನಗರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಮಹಿಳೆ ಸಾವು| ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಮಹಿಳೆ|, ಗಂಟಲುದ್ರವ ತೆಗೆದು ವೈದ್ಯಕೀಯ ಪರೀಕ್ಷೆಗೆ ಕಳಿಸಿಕೊಡಲಾಗಿತ್ತು| ಸತತ ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಳಾಗಿ ಮೃತಪಟ್ಟ ಮಹಿಳೆ|
ಬಳ್ಳಾರಿ(ಮೇ.17): ನಗರದಲ್ಲಿ ಕ್ವಾರಂಟೈನ್‌ನಲ್ಲಿದ್ದ 37 ವರ್ಷದ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಮಹಿಳೆ ಇಲ್ಲಿನ ವಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಪ್ರತಿ ವರ್ಷದಂತೆ ಈ ಬಾರಿಯೂ ಆಂಧ್ರಪ್ರದೇಶಕ್ಕೆ ವಲಸೆ ಹೋಗಿದ್ದಳು. ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಈ ಮಹಿಳೆ ಮರಳಿ ಜಿಲ್ಲೆಗೆ ಆಗಮಿಸುತ್ತಿದ್ದಂತೆಯೇ ಕ್ವಾರಂಟೈನ್ ಮಾಡಲಾಗಿತ್ತಲ್ಲದೆ, ಗಂಟಲುದ್ರವ ತೆಗೆದು ವೈದ್ಯಕೀಯ ಪರೀಕ್ಷೆಗೆ ಕಳಿಸಿಕೊಡಲಾಗಿತ್ತು. ಏತನ್ಮಧ್ಯೆ ಸತತ ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಳಾಗಿ ಮೃತಪಟ್ಟಿದ್ದಾಳೆ.
ಕರ್ತವ್ಯ ನಿರ್ವಹಿಸುತ್ತಲೇ ಪ್ರಾಣಬಿಟ್ಟ ಕೊರೋನಾ ವಾರಿಯರ್ ಭೀಮಕ್ಕ..!
ಮೃತ ಮಹಿಳೆಯ ಗಂಟಲುದ್ರವ ಪರೀಕ್ಷೆ ವರದಿ ಬಂದಿಲ್ಲ. ಅನಾರೋಗ್ಯ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಗಂಟಲುದ್ರವ ಪರೀಕ್ಷೆ ವರದಿ ಬಳಿಕ ಈ ಮಹಿಳೆಗೆ ಸೋಂಕು ಹರಡಿತ್ತೇ? ಅಥವಾ ಇಲ್ಲವೇ? ಎಂಬುದು ಗೊತ್ತಾಗಲಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.