ವಿಜಯಪುರ: ಆಸ್ಪತ್ರೆ ಸೀಲ್‌ಡೌನ್, ಆ್ಯಂಬುಲೆನ್ಸ್‌ನಲ್ಲೇ ಹೆರಿಗೆ..!
108 ಆ್ಯಂಬುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ| ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನಲ್ಲಿ ನಡೆದ ಘಟನೆ| ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್‌ಡೌನ್| ಕಾಳಗಿಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆ|
ನಿಡಗುಂದಿ(ಜು.06): ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‌ಡೌನ್ ಆಗಿದ್ದರಿಂದ ಗರ್ಭಿಣಿಯೊಬ್ಬಳಿಗೆ 108 ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆಯಾದ ಘಟನೆ ವಿಜಯಪುರ ಜಿಲ್ಲೆಯ ನೀಡಗುಂದಿ ತಾಲೂಕಿನಲ್ಲಿ ಭಾನುವಾರ ನಡಿದಿದೆ.
ನಿಡಗುಂದಿ ತಾಲೂಕಿನ ಬೇನಾಳ ಆರ್.ಎಸ್ ಗ್ರಾಮದ ಸವಿತಾ ರಮೇಶ ತಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದು, ಇಬ್ಬರೂ ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿವಿ 7 ಮಂದಿಗೆ ಕೊರೋನಾ ಸೋಂಕು..!
ಸವಿತಾಗೆ ಹೆರಿಗೆ ಬೇನೆ ಆರಂಭಗೊಂಡಿದೆ. ಹೀಗಾಗಿ 108 ಆ್ಯಂಬುಲೆನ್ಸ್‌ನಲ್ಲಿ ನಿಡಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗುತ್ತಿತ್ತು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ಈ ಆಸ್ಪತ್ರೆಯನ್ನು ಶನಿವಾರವಷ್ಟೇ ಸೀಲ್‌ಡೌನ್ ಮಾಡಲಾಗಿತ್ತು. ಇದರಿಂದಾಗಿ ಕಾಳಗಿಯ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಆ್ಯಂಬುಲೆನ್ಸ್‌ನಲ್ಲಿಯೇ ಹೆರಿಗೆಯಾಗಿದೆ.