ಯಾದಗಿರಿ: ಪೊಲೀಸರನ್ನ ಕಂಡು ಏಪ್ರಾನ್ ಧರಿಸಿದ ಮಹಿಳೆ..!
* ಕೋವಿಡ್ ನಿಯಮಗಳ ಉಲ್ಲಂಘನೆ
* ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದೇನೆ, ಕೆಲಸಕ್ಕೆ ಹೋಗುತ್ತೇನೆಂದು ಹೇಳಲು ಯತ್ನಿಸಿದ ಮಹಿಳೆ
* ವಿಚಾರಣೆ ನಡೆಸಿದ ಬಳಿಕ ಬುದ್ಧಿಮಾತು ಹೇಳಿ ಕಳುಹಿಸಿದ ಪೊಲೀಸರು
ಯಾದಗಿರಿ(ಮೇ.31): ಕಲಬುರಗಿ ಜಿಲ್ಲೆಯ ಚಿತ್ತಾಪುರದಿಂದ ಯಾದಗಿರಿ ತಾಲೂಕಿನ ಮೈಲಾರಲಿಂಗೇಶ್ವರ ದರ್ಶನ ಪಡೆಯಲು ತೆರಳುತ್ತಿದ್ದರೆನ್ನಾಲಾದ ವೇಳೆ, ಕೋವಿಡ್ ನಿಯಮಗಳ ಉಲ್ಲಂಘಿಸಿದ ಆರೋಪದ ಮೇಲೆ ಪೊಲೀಸರ ಕೈಗೆ ನವದಂಪತಿ ಸಿಕ್ಕಿಬಿದ್ದಿದ್ದಾರೆ.
ವಿಚಾರಣೆ ವೇಳೆ ನವ ವಿವಾಹಿತೆ, ತಾನು ಯಾದಗಿರಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದೇನೆ, ಕೆಲಸಕ್ಕೆ ಹೋಗುತ್ತೇನೆಂದು ಹೇಳಲು ಯತ್ನಿಸಿದರು.
ಯಾದಗಿರಿ: ಮದುವೆಗೆ ತೆರಳುತ್ತಿದ್ದ ವಾಹನ ಜಪ್ತಿ, ಎದ್ನೋ ಬಿದ್ನೋ ಅಂತ ಓಡಿ ಹೋದ ಬೀಗರು..!
ಕಾರಿನಲ್ಲಿದ್ದ ಏಪ್ರಾನ್ ಧರಿಸಿ ಪೊಲೀಸರಿಗೆ ಮನವರಿಕೆ ಮಾಡಲು ಯತ್ನಿಸಿದರು. ಬಳಿಕ ವಿಚಾರಣೆ ನಡೆಸಿದ ಪೊಲೀಸರು ಬುದ್ಧಿಮಾತು ಹೇಳಿ ಕಳುಹಿಸಿದರು ಎಂದು ತಿಳಿದುಬಂದಿದೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona