ಬುರ್ಕಾ ಧರಿಸಿ ಮಹಿಳೆಯೋರ್ವಳು ಇಂತಹ ಖತರ್ನಾಕ್ ಕೆಲಸ ಮಾಡುತ್ತಿದ್ದಳು. ಇದೀಗ ಆಕೆ ಪೊಲೀಸರ ಅತಿಥಿಯಾಗಿದ್ದಾಳೆ.
ಬೆಂಗಳೂರು (ಡಿ.15): ಬುರ್ಕಾ ಧರಿಸಿ ಚಿನ್ನ ಕದಿಯುತ್ತಿದ್ದ ಮಹಿಳೆಯನ್ನು ಅರೆಸ್ಟ್ ಮಾಡಲಾಗಿದೆ.
ಮಾಲೀಕರ ಗಮನ ಬೇರೆಡೆ ಸೆಳೆದು ಅಂಗಡಿಯಲ್ಲಿ ಚಿನ್ನ ಎಗರಿಸುತ್ತಿದ್ದ ಕಳ್ಳಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಪರ್ವಿನ್ (28 ) ಎಂಬಾಕೆಯನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯಿಂದ 2.5 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಗ್ರಾಹಕರಂತೆ ಬುರ್ಕಾ ಧರಿಸಿ ಚಿನ್ನದ ಅಂಗಡಿಗೆ ಎಂಟ್ರಿ ಕೊಡುತ್ತಿದ್ದ ಚಾಲಾಕಿ ಚಿನ್ನ ಖರೀದಿಸುವಂತೆ ನಾಟಕ ಮಾಡಿ ಕದಿಯುತ್ತಿದ್ದಳು.
ಚೀಟಿ ಹೆಸರಿನಲ್ಲಿ 5 ಕೋಟಿ ರೂ. ಪಂಗನಾಮ ಹಾಕಿದ್ದ ಬೆಂಗಳೂರಿನ ದಂಪತಿ!
ಮಾಲೀಕನ ಗಮನ ಬೇರೆಡೆ ಸೆಳೆದು ಚಿನ್ನದ ಸರ ಎಗರಿಸುತ್ತಿದ್ದಳು. ಬಳಿಕ ಅಲ್ಲಿಂದ ಎಸ್ಕೇಪ್ ಆಗುತ್ತಿದ್ದಳು. ಈಕೆಯ ಕೃತ್ಯ ಬಯಲಾಗುತ್ತಿದ್ದಂತೆ ಆಕೆಯನ್ನು ಅರೆಸ್ಟ್ ಮಾಡಲಾಗಿದೆ.
