ಬೀದರ್[ಮಾ.08]: ಡೆತ್ ನೋಟ್ ಬರೆದಿಟ್ಟು ಪ್ರಾಧ್ಯಾಪಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಇಂದು[ಭಾನುವಾರ] ನಡೆದಿದೆ. ಪೂಜಾ ಸಂಗಪ್ಪ ಹುಲಸೂರೆ(26) ಎಂಬುವರೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾರೆ. 

ಇಂದು ಬೆಳಗಿನ ಜಾವ ಮನೆಯಿಂದ ಹೋಗಿದ್ದ ಪೂಜಾ ಪಟ್ಟಣದ ಕೋಟೆ ಆವರಣದಲ್ಲಿರುವ ಝರ‌ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೂಜಾ ಸಾಯುವ ಮುನ್ನ ಬರೆದಿಟ್ಟ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ನನ್ನ ಸಾವಿಗೆ ಯಾರು ಕಾರಣರಲ್ಲ, ನಾನು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳುತ್ತಿದ್ದೇನೆ ಎಂದು ಬರೆಯಲಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮೃತ ಪೂಜಾ ಭಾಲ್ಕಿ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪೂಜಾ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ನಗರ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳಾ ದಿನಾಚರಣೆಯೆಂದೇ ಪೂಜಾ ಸಾವನ್ನಪ್ಪಿರುವುದು ಮಾತ್ರ ವಿಪರ್ಯಾಸ.