ಹಾಸನ: ಬಹಿರ್ದೆಸೆಗೆ ತೆರಳಿದ್ದ ವೇಳೆ ಆನೆ ದಾಳಿ, ಮಹಿಳೆ ಸಾವು

ಬೆಳಗ್ಗೆ 7:30ರ ವೇಳೆ ಬಹಿರ್ದೆಸೆಗೆ ಮನೆ ಹಿಂಭಾಗದ ಕಾಫಿ ತೋಟಕ್ಕೆ ಹೋಗಿದ್ದರು. ಆಗ ಕಾಡಾನೆಯೊಂದು ಇವರ ಮೇಲೆ ದಾಳಿ ನಡೆಸಿ, ಹೊಟ್ಟೆಯ ಮೇಲ್ಭಾಗ ತುಳಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

Women Dies Due to Elephant Attack in Hassan grg

ಹಾಸನ(ಆ.19): ಸಕಲೇಶಪುರ ತಾಲೂಕಿನ ವಡೂರು ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಬಹಿರ್ದೆಸೆಗೆಂದು ಕಾಫಿ ತೋಟಕ್ಕೆ ತೆರಳಿದ್ದ ಮಹಿಳೆಯೊಬ್ಬಳು ಕಾಡಾನೆ ದಾಳಿಗೆ ಬಲಿಯಾಗಿದ್ದಾಳೆ. ಬೇಲೂರು ತಾಲೂಕಿನ ನಾರ್ವೆ ಗ್ರಾಮದ ಕವಿತಾ (35) ಮೃತ ದುರ್ದೈವಿ. ಇವರು ವಡೂರಿನಲ್ಲಿರುವ ತಮ್ಮ ಸಂಬಂಧಿ​ಕರ ಮನೆಗೆ ವಯಸ್ಸಾದ ತಾಯಿಯನ್ನು ನೋಡಲು ಬಂದಿದ್ದು, ಬೆಳಗ್ಗೆ 7:30ರ ವೇಳೆ ಬಹಿರ್ದೆಸೆಗೆ ಮನೆ ಹಿಂಭಾಗದ ಕಾಫಿ ತೋಟಕ್ಕೆ ಹೋಗಿದ್ದರು. ಆಗ ಕಾಡಾನೆಯೊಂದು ಇವರ ಮೇಲೆ ದಾಳಿ ನಡೆಸಿ, ಹೊಟ್ಟೆಯ ಮೇಲ್ಭಾಗ ತುಳಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಅ​ಧಿಕಾರಿಗಳು ಅವರ ಕುಟುಂಬಕ್ಕೆ 15 ಲಕ್ಷ ರು.ಗಳ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಕೆಲ ವರ್ಷಗಳ ಹಿಂದೆ ಇವರ ಪತಿ ಕೂಡ ಮೃತಪಟ್ಟಿದ್ದು, ಇವರಿಗೆ ಇಬ್ಬರು ಮಕ್ಕಳಿದ್ದಾರೆ.

ಕೋಡಿಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೃಷಿ ಸಚಿವ ಚಲುವರಾಯಸ್ವಾಮಿ ದಂಪತಿ

11 ಜನರ ಬಂಧನ

ಮಹಿಳೆ ಶವ ಇಟ್ಟು ಪ್ರತಿಭಟನೆ ಮಾಡೋ ಯತ್ನ ಮಾಡಿದ ಆರೋಪದಲ್ಲಿ 11 ಜನರನ್ನ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ವಡೂರು ಗ್ರಾಮದಲ್ಲಿ ಇಂದು ಮುಂಜಾನೆ ಕಾಡಾನೆ ದಾಳಿಗೆ ಕವಿತಾ ಬಲಿಯಾಗಿದ್ದರು. 

ಹಾಸನ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ವೇಳೆ ಕೆಲ ಕನ್ನಡಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದರು. ಮರಣೋತ್ತರ ಪರೀಕ್ಷೆ ತಡವಾಗಿದೆ ಎಂದು ಆರೋಪಿಸಿ ಶವಾಗಾರದ ಎದುರು ಹೋರಾಟಗಾರರು ಧರಣಿ ಮಾಡಿದ್ದರು. ಬಳಿಕ ಮಧ್ಯೆಪ್ರವೇಶ ಮಾಡಿದ ಪರಿಸ್ಥಿತಿ ತಿಳಿಗೊಳಿಸಿದ್ದರು.ಮರಣೋತ್ತರ ಪರೀಕ್ಷೆ ಬಳಿಕ ಶವ ಸಾಗಿಸೋ ವೇಳೆ ಮೃತದೇಹವನ್ನು ತಮಗೆ ಹಸ್ತಾಂತರ ಮಾಡಿ ಎಂದು ಅಂಬ್ಯುಲೆನ್ಸ್ ತಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ 11 ಜನರನ್ನ ಬಂಧಿಸಲಾಗಿದೆ. 

ಹೋರಾಟ ನಿರತ 11 ಜನರನ್ನು ಹಾಸನ ನಗರ ಪೊಲೀಸರು ಬಂಧಿಸಿದ್ದಾರೆ. ಮೃತದೇಹ ಇಟ್ಟು ಸಕಲೇಶಪುರದ ಅಂಬೇಡ್ಕರ್ ಪ್ರತಿಮೆ ಎದುರು ಧರಣಿ ಮಾಡೋ ಎಚ್ಚರಿಕೆ ನೀಡಿದ್ದ ಹೋರಾಟಗಾರರು. ಮರಣೋತ್ತರ ಪರೀಕ್ಷೆ ಬಳಿಕ ಹೋರಾಟ ಮಾಡಲು ಮುಂದಾದ ಆರೋಪದಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ. 

Latest Videos
Follow Us:
Download App:
  • android
  • ios