ಚಿತ್ರದುರ್ಗ: ರಾಜ್ಯದಲ್ಲಿ ಮದ್ಯಪಾನ ಸಂಪೂರ್ಣ ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಚಿತ್ರದುರ್ಗದಿಂದ ಬೆಂಗಳೂರಿಗೆ ಪಾದಯಾತ್ರೆ ಹೊರಡಲಾಗಿದೆ. 

ಮಹಿಳೆಯರಿಗೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್‌ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಏಕಾಂಗಿಯಾಗಿ ಧರಣಿ ನಡೆಸುವ ಮೂಲಕ ಬೆಂಬಲ ಸೂಚಿಸಿದರು. 

ಪಾದಯಾತ್ರೆ ಮೂಲಕ ಬೆಂಗಳೂರಿಗೆ ಹೊರಟಿರುವ 2 ಸಾವಿರ ಮಹಿಳೆಯರ ಕಷ್ಟಗಳನ್ನು ಅರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕರ್ನಾಟಕದಲ್ಲಿ ಸಂಪೂರ್ಣವಾಗಿ ಮದ್ಯಪಾನ ನಿಷೇಧಿಸಬೇಕೆಂದು ಒತ್ತಾಯಿಸಿದರು.