Asianet Suvarna News Asianet Suvarna News

ಬೆಳಗಾವಿ ಚುನಾವಣಾ ಅಖಾಡಕ್ಕೆ ರಮೇಶ್ ಜಾರಕಿಹೊಳಿ ಪುತ್ರ..?

ರಮೇಶ್ ಜಾರಕಿಹೊಳಿ ಪುತ್ರ ಬೆಳಗಾವಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನುವ ಸುದ್ದಿ ಹಬ್ಬುತ್ತಿದೆ. ಈ ಬಗ್ಗೆ ಸ್ವತಃ ಅಮರ್ ನಾಥ್ ಸ್ಪಷ್ಟನೆ ನೀಡಿದ್ದಾರೆ

Wont contest Belagavi by election Amarnath Jarkiholi snr
Author
Bengaluru, First Published Oct 13, 2020, 7:26 AM IST
  • Facebook
  • Twitter
  • Whatsapp

ಬೆಳಗಾವಿ (ಅ.13): ಬೆಳಗಾವಿ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ನಾನಲ್ಲ. ಅಭ್ಯರ್ಥಿಯಾಗುವ ಮನಸ್ಸೂ ನನಗಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಪುತ್ರ ಅಮರನಾಥ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೇಂದ್ರ ಸಚಿವರಾಗಿದ್ದ ದಿ.ಸುರೇಶ ಅಂಗಡಿಯವರು 

ಸಾಕಷ್ಟುಜನೋಪಯೋಗಿ ಕಾರ್ಯ ಮಾಡಿದ್ದಾರೆ. ಅವುಗಳನ್ನು ಮುಂದುವರಿಸಿಕೊಂಡು ಹೋಗುವ ಸಲುವಾಗಿ ಈ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬಹುಮತದಿಂದ ಆಯ್ಕೆ ಮಾಡುವ ಜವಾಬ್ದಾರಿ ನನ್ನಂಥ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ನಾನು ವಯಸ್ಸಿನಲ್ಲಿ ತುಂಬಾ ಚಿಕ್ಕವನು.

ಬಗೆಹರಿಯದ ಟಿಕೆಟ್ ಕಗ್ಗಂಟು: ಮುನಿರತ್ನ ಪರ ಸುಧಾಕರ್ ಬ್ಯಾಟಿಂಗ್

ರಾಜಕೀಯವಾಗಿ ಬೆಳೆಯಲು ನನಗೆ ಬೇಕಾದಷ್ಟುಸಮಯವಿದೆ. ಅಂಗಡಿ ಕುಟುಂಬಕ್ಕೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಯಾವುದೇ ಕಾರಣಕ್ಕೂ ಅಭ್ಯರ್ಥಿ ಆಗುವ ಮನಸ್ಸಿಲ್ಲ ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಬಗ್ಗೆ ಟ್ರೋಲ್‌ ಆಗುತ್ತಿರುವ ವಿಷಯ ಗಮನಿಸಿದ್ದೇನೆ. ನನ್ನ ಸ್ನೇಹಿತರು, ಆಪ್ತರು ಮತ್ತು ಕಾರ್ಯಕರ್ತರ ಮನದಾಳವನ್ನೂ ಅರಿತಿದ್ದೇನೆ ಎಂದಿದ್ದಾರೆ.

Follow Us:
Download App:
  • android
  • ios