Asianet Suvarna News Asianet Suvarna News

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ: ಸಚಿವ ಮಧು ಬಂಗಾರಪ್ಪ ಸೂಚನೆ

ಜಿಲ್ಲೆಯ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಸರ್ವ ರೀತಿಯ ಕ್ರಮ ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳ ಕಲಿಕಾ ಕ್ರಮ ಹಾಗೂ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು.

Work hard to improve SSLC results Says Minister Madhu Bangarappa gvd
Author
First Published Sep 26, 2024, 10:32 PM IST | Last Updated Sep 26, 2024, 10:31 PM IST

ಯಾದಗಿರಿ (ಸೆ.26): ಜಿಲ್ಲೆಯ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆಗೆ ಸರ್ವ ರೀತಿಯ ಕ್ರಮ ಕೈಗೊಳ್ಳಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲ ಶಾಲೆಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಮಕ್ಕಳ ಕಲಿಕಾ ಕ್ರಮ ಹಾಗೂ ಫಲಿತಾಂಶ ಸುಧಾರಣೆಗೆ ಮುಂದಾಗಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕಲಬುರಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. 

ಕಳೆದ ಸಾಲಿನಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಈ ಬಾರಿಯಲ್ಲಿ ಪುನಃ ದಾಖಲಾಗಲು ಶಿಕ್ಷಣಾಧಿಕಾರಿಗಳು ಹಾಗೂ ಮುಖ್ಯಗುರುಗಳು ಕಡ್ಡಾಯವಾಗಿ ಕ್ರಮ ವಹಿಸಬೇಕು.  ಕಳೆದ ಸಾಲಿಗಿಂತ ಈ ಬಾರಿ ಹೆಚ್ಚು ದಾಖಲಾಗಿ ಎಲ್‌ಕೆಜಿ, ಯುಕೆಜಿ ತರಗತಿಗಳು ನೋಂದಣಿಗೊಂಡಿರುವುದಕ್ಕೆ ಸಚಿವರು ಹರ್ಷ ವ್ಯಕ್ತಪಡಿಸಿದರು. ಇಲಾಖೆಯಲ್ಲಿ ಉಳಿಕೆ ಕಾಮಗಾರಿಗಳನ್ನು ಇನ್ನೊಂದು ತಿಂಗಳೊಳಗೆ ಪೂರ್ಣಗೊಳಿಸಬೇಕು ಹಾಗೂ ಪ್ರಾರಂಭಗೊಳ್ಳದ ಕಾಮಗಾರಿಗಳನ್ನು ಇನ್ನೂ 15 ದಿನದೊಳಗೆ ಪ್ರಾರಂಭಿಸದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು. 

ಬಿ.ವೈ.ರಾಘವೇಂದ್ರ ಜನರ ಭಾವನೆಗೆ ಸ್ಪಂದಿಸುವ ಸಂಸದ: ಸಚಿವ ವಿ.ಸೋಮಣ್ಣ ಶ್ಲಾಘನೆ

ಕೆಪಿಎಸ್ಸಿ ಶಾಲೆಗಳು ಹಾಗೂ ಆರ್‌ಎಂಎಸ್‌ಎ ಶಾಲೆಗಳಲ್ಲಿ ಮುಖ್ಯಗುರುಗಳ ಹುದ್ದೆ ನೀಡುವ ಬಗ್ಗೆ ಸರ್ಕಾರ ಪರಿಶೀಲಿಸಿ, ಹೊಸ ತಾಲೂಕುಗಳಲ್ಲಿ ಅನುದಾನಿತ ಶಾಲೆಗಳಿಗೆ ಹಾಗೂ ಸರ್ಕಾರಿ ಶಾಲೆಗಳಿಗೆ ವೇತನದಲ್ಲಿ ವಿಳಂಬ ಉಂಟಾಗುತ್ತಿದ್ದು ಅದನ್ನು ಸರಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಶಶಿಲ್‌ ಜಿ ನಮೋಶಿ ಶಿಕ್ಷಣ ಸಚಿವರಿಗೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ ತುನ್ನೂರ, ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ, ಜಿಪಂ ಸಿಇಒ ಲವೀಶ್ ಒರಡಿಯಾ, ಡಿಡಿಪಿಐ ಮಂಜುನಾಥ, ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಕನಕಪ್ಪ ಸೇರಿದಂತೆ ಕಲಬುರಗಿ ವಿಭಾಗದ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಬಿಜೆಪಿಯವರು ನಿಯತ್ತಾಗಿ ಇದ್ದಾರಾ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ ವಿಚಾರವಾಗಿ, ಸಿಎಂ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹಕ್ಕೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿಯವರು ಎಷ್ಟು ಜನರು ಬೇಲ್ (ಜಾಮೀನು) ಮೇಲೆ ಓಡಾಡುತ್ತಿದ್ದಾರೆ, ಪಾದಯಾತ್ರೆ ಮಾಡಿದ್ದ ಬಿಜೆಪಿಯವರು ನಿಯತ್ತಾಗಿ ಇದ್ದಾರಾ ಎಂದು ಪ್ರಶ್ನಿಸಿ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಯಾದಗಿರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡಬೇಕು ಎಂಬ ಕಾನೂನು ಇದೆಯೇ? ಆರೋಪಿ ಸ್ಥಾನದಲ್ಲಿರುವ ವಿಜಯೇಂದ್ರ ಮತ ಕೇಳಲಿಲ್ಲವೇ? 

ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆ?: ದಂತಗಳು ನಾಪತ್ತೆ

ಎಚ್‌.ಡಿ. ಕುಮಾರಸ್ವಾಮಿ ಬೇಲ್ ಮೇಲೆ ಓಡಾಡುತ್ತಿದ್ದಾರೆ, ವಿಜಯೇಂದ್ರ ಅವರ ಅಪ್ಪನನ್ನು (ಬಿಎಸ್ವೈ) ಜೈಲಿಗೆ ಹಾಕಿದ್ದು ಮರೆತು ಬಿಟ್ಟರಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಮಧು ಬಂಗಾರಪ್ಪ ಕಿಡಿ ಕಾರಿದರು. ಸಿಎಂ ಸಿದ್ದರಾಮಯ್ಯ ನಿರಪರಾಧಿಯಾಗಿ ಹೊರಗೆ ಬರುತ್ತಾರೆ, ನಮ್ಮ ಲೆಕ್ಕ ಕೇಳಬೇಕಾದರೆ ಅವರ ತಟ್ಟೆಯಲ್ಲಿ ಸತ್ತು ಬಿದ್ದ ಹೆಗ್ಗಣ ನಾರುತ್ತಿರುವುದನ್ನು ನೋಡಿಕೊಳ್ಳಲಿ ಎಂದರು. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ, ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ಪ್ರಜಾಪ್ರಭುತ್ವದಲ್ಲಿ ಸುಪ್ರೀಂ ಕೋರ್ಟ್‌ಗೆ ಹೋಗುವ ಅವಕಾಶವಿದೆ. ಗ್ಯಾರಂಟಿ ಫಲಾನುಭವಿಗಳು ಸಿದ್ದರಾಮಯ್ಯ ಜೊತೆ ಗ್ಯಾರಂಟಿಯಾಗಿ ಇದ್ದಾರೆ ಎಂದು ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios