ಚುನಾವಣೆಯಲ್ಲಿ ಜವಾಬ್ದಾರಿಯಿಂದ ಕೆಲಸ ಮಾಡಿ : ಜಿಲ್ಲಾಧಿಕಾರಿ

ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್‌ ಆಫೀಸರ್‌ಗಳ ಕೆಲಸ ಪ್ರಮುಖವಾಗಿದ್ದು, ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

Work responsibly in elections DC  snr

  ನಂಜನಗೂಡು : ಚುನಾವಣಾ ಪ್ರಕ್ರಿಯೆಯಲ್ಲಿ ಸೆಕ್ಟರ್‌ ಆಫೀಸರ್‌ಗಳ ಕೆಲಸ ಪ್ರಮುಖವಾಗಿದ್ದು, ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಅರಿತು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಸೂಚಿಸಿದರು.

ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಂಜನಗೂಡು ಕ್ಷೇತ್ರ ಮತ್ತು ವರುಣಾ ಕ್ಷೇತ್ರಗಳ ಫ್ಲೈಯಿಂಗ್‌ ಸ್ಕಾ$್ವಡ್‌ ಹಾಗೂ ಸ್ಟಾಟಿಸ್ಟಿಕ್‌ ಸರ್ವೇಲೆನ್ಸ್‌ ತಂಡದ ಸದಸ್ಯರು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಜವಾಬ್ದಾರಿಗಳ ಕುರಿತು ಮಾದರಿ ನೀತಿ ಸಂಹಿತೆ ಸಮಿತಿಯ ವತಿಯಿಂದ ನಂಜನಗೂಡಿನ ರಿಟರ್ನಿಂಗ್‌ ಆಫೀಸರ್‌ ಕಚೇರಿಯಲ್ಲಿ ನಡೆದ ತರಬೇತಿಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಸೆಕ್ಟರ್‌ ಅಧಿಕಾರಿಗಳು ಬೂತ್‌ ಲೆವೆಲ್‌ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಪರಿಹರಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮತ್ತು ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಏಪ್ರಿಲ್‌ 11 ರವರೆಗೆ ಅವಕಾಶವಿದ್ದು, ತಡ ಮಾಡದೆ ಬಂದ ಅರ್ಜಿಗಳನ್ನು ಸ್ವೀಕರಿಸಿ ಈ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಅವರು ತಿಳಿಸಿದರು.

ಮತದಾರರ ಪಟ್ಟಿಯಿಂದ ಹೆಸರುಗಳು ಕೈಬಿಟ್ಟು ಹೋಗದಂತೆ ಮತ್ತು ಮರಣ ಹೊಂದಿದವರ ಪಟ್ಟಿಯ ಬಗ್ಗೆ ಗಮನಹರಿಸಬೇಕು. 80 ವರ್ಷ ಮೇಲ್ಪಟ್ಟಿದ್ದು ಮತಗಟ್ಟೆಗೆ ಬಂದು ಮತ ಹಾಕಲು ಸಾಧ್ಯವಾಗದವರಿಗೆ 12ಡಿ ಮೂಲಕ ಮತದಾನ ಮಾಡಲು ಅವಕಾಶವಿದೆ. ಸಿ- ವಿಜಿಲ್‌ ಮೂಲಕ ದಾಖಲಾದ ದೂರುಗಳಿಗೆ ನೂರು ನಿಮಿಷಗಳಲ್ಲಿ ಪರಿಹಾರಕ್ಕೆ ನಮ್ಮ ಕೈಗೊಳ್ಳಲಾಗುವುದು. ವಲ್ನರಬಲ್‌ ಹಾಗೂ ಕ್ರಿಟಿಕಲ್‌ ಪೋಲಿಂಗ್‌ ಸ್ಟೇಷನ್‌ಗಳನ್ನು ಗುರುತಿಸಿದ್ದು, ಅವುಗಳ ಸರಿಯಾದ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸಬೇಕು ಎಂದು ಅವರು ಹೇಳಿದರು.

ಮತಗಟ್ಟೆಯಲ್ಲಿ ಕುಡಿಯುವ ನೀರು, ಶೌಚಾಲಯ, ವಿದ್ಯುತ್‌, ರಾರ‍ಯಂಪ್‌ ಫ್ಯಾನ್‌ ಒಳಗೊಂಡಂತೆ ಕನಿಷ್ಠ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು. ಇವಿಎಂ ಮತ್ತು ವಿವಿಪ್ಯಾಟ್‌ಗಳ ನಿರ್ವಹಣೆಯಲ್ಲಿ ಅಥವಾ ಇವುಗಳ ಬಳಕೆಯಲ್ಲಿ ಸಮಸ್ಯೆಯಾದರೆ ರಿಪ್ಲೇಸ್‌ ಮಾಡಿಕೊಡಲಾಗುವುದು. ಎಫ್‌ಎಸ್‌ಟಿ ಮತ್ತು ಎಸ್‌ಎಸ್‌ಟಿ ತಂಡದವರಿಗೆ ವಾಹನ ಪೂರೈಕೆ ಮಾಡಲು ಆರ್‌ಓ ಹಾಗೂ ಎಆರ್‌ಓಗಳಿಗೆ ಸೂಚಿಸಿದರು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ಪ್ರಾಚ್ಯವಸ್ತು ಸಂಗ್ರಹಾಲಯದ ಆಯುಕ್ತ ದೇವರಾಜ್‌ ಮೊದಲಾದವರು ಇದ್ದರು.

ನಗದು ವ್ಯವಹಾರದ ಮೇಲೆ ನಿಗಾ ವಹಿಸಿ

 ಮೈಸೂರು :  ನಗದು ವ್ಯವಹಾರದ ಮೇಲೆ ನಿಗಾ ವಹಿಸಿ​ ಎಂದು ನೀತಿ ಸಂಹಿತೆ ನೋಡಲ್‌ ಅಧಿಕಾರಿಯಾದ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಪಂ ಸಭಾಂಗಣದಲ್ಲಿ ನಡೆದ ಬ್ಯಾಂಕ್‌ ವಹಿವಾಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಲೀಡ್‌ ಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ನಗದು ವ್ಯವಹಾರದ ಮೇಲೆ ನಿಗಾ ಇಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೇಳಿದರು.

ಎಸ್‌ಎಜಿ ಅಕೌಂಟ್‌ಗಳಿಗೆ ಸಾಲ ಮಂಜೂರು ಮಾಡುವ ಸಂಬಂಧ ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ ಕೇಳಿರುವ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಬಂದ ನಂತರ ಸಾಲ ಮಂಜೂರು ಮಾಡಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.

ಸ್ವೀಪ್‌ ಕಾರ್ಯಕ್ರಮದ ಅಂಗವಾಗಿ ವೋಟರ್‌ ರಿಜಿಸ್ಪ್ರೇಷನ್‌ ಅಪ್ಲಿಕೇಶನ್‌ ಕುರಿತು ಬ್ಯಾಂಕ್‌ ಮ್ಯಾನೇಜರ್‌ಗಳಿಗೆ ಮಾಹಿತಿ ನೀಡಿದರು.

ಪ್ರತೀ ಕ್ಷೇತ್ರಕ್ಕೆ ಮೂರು ಹೆಸರು ಕಳಿಸಲು ಸೂಚನೆ

ಬೆಂಗಳೂರು(ಏ.05): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕಡ್ಡಾಯವಾಗಿ ಮೂವರು ಆಕಾಂಕ್ಷಿಗಳ ಅಥವಾ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುವಂತೆ ಬಿಜೆಪಿ ಹೈಕಮಾಂಡ್‌ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದ ರೆಸಾರ್ಚ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಬುಧವಾರ ಇನ್ನುಳಿದ 122 ವಿಧಾನಸಭಾ ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ.

ಬುಧವಾರ ರಾತ್ರಿ ಅಥವಾ ಗುರುವಾರ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯು ಬಿಜೆಪಿ ಹೈಕಮಾಂಡ್‌ಗೆ ತಲುಪಲಿದೆ. ಬಳಿಕ ಶನಿವಾರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಆಖೈರುಗೊಳಿಸಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.

Latest Videos
Follow Us:
Download App:
  • android
  • ios