ಕರ್ನಾಟಕ ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಯ ಮಾಧ್ಯಮದವರಿಗೆ ಕಾರ್ಯಾಗಾರ
ಮತದಾನಕ್ಕೆ 48 ಗಂಟೆ ಮೊದಲು ಚುನಾವಣಾ ಜಾಹೀರಾತು ಪ್ರಕಟಿಸಲು ಪ್ರಾಮಾಣೀಕರಣ ಕಡ್ಡಾಯ ವಾಗಿದೆ. ಸಾಮಾಜಿಕ ಜಾಲತಾಣಗಳ ಬಗ್ಗೆ 24 ಗಂಟೆಗಳ ಕಾಲ ನಿಗಾ ಇರಿಸಲಾಗುತ್ತದೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
ಉಡುಪಿ(ಏ.06): ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳು ಮತ ಗಳಿಕೆ ಹಾಗೂ ರಾಜಕೀಯ ಅಸ್ತ್ರ ಆಗಬಾರದು. ಮತದಾನಕ್ಕೆ 48 ಗಂಟೆ ಮೊದಲು ಚುನಾವಣಾ ಜಾಹೀರಾತು ಪ್ರಕಟಿಸಲು ಪ್ರಾಮಾಣೀಕರಣ ಕಡ್ಡಾಯ ವಾಗಿದೆ. ಸಾಮಾಜಿಕ ಜಾಲತಾಣಗಳ ಬಗ್ಗೆ 24 ಗಂಟೆಗಳ ಕಾಲ ನಿಗಾ ಇರಿಸಲಾಗುತ್ತದೆ. ಪಕ್ಷ ಅಭ್ಯರ್ಥಿ ಮತ್ತು ಚುನಾವಣೆಯ ಮೇಲೆ ಪರಿಣಾಮ ಬೀರುವ ಅಂಶಗಳನ್ನು ಕುರಿತು ಪರಿಶೀಲನೆ ಮಾಡಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತದ ಮಾಧ್ಯಮ ಪ್ರಾಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿ ಉಡುಪಿ ಜಿಲ್ಲೆಯ ಮಾಧ್ಯಮದವರಿಗೆ ಗುರುವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.
ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ವಿಶ್ವ ಆರೋಗ್ಯ ದಿನಾಚರಣೆ
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚೀಂದ್ರ ಮಾತನಾಡಿ, ಚುನಾವಣೆಯಲ್ಲಿ ಅಕ್ರಮ ತಡೆಯುವ ನಿಟ್ಟಿನಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಕೆಲವು ಕಡೆ ದಿಢೀರ್ ಕಾರ್ಯಾಚರಣೆಗಳನ್ನು ಮಾಡ ಲಾಗುತ್ತಿದೆ. ಏಕಕಾಲದಲ್ಲಿ ಜಿಲ್ಲೆಯಾದ್ಯಂತ ಇರುವ ಗೋಡಾನ್, ಕಟ್ಟಡಗಳಿಗೆ ದಾಳಿ ನಡೆಸಿ ದೊಡ್ಡ ಪ್ರಮಾಣದಲ್ಲಿ ವಸ್ತುಗಳನ್ನು ಸಂಗ್ರಹಿಸಲಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಈವರೆಗೆ ದಾಖಲಾತಿ ಇಲ್ಲದ 48.50ಲಕ್ಷ ರೂ. ನಗದು ಹಣ ವನ್ನು ವಶಪಡಿಸಲಾಗಿದೆ. ಅಬಕಾರಿ ಇಲಾಖೆಯೊಂದಿಗೆ ಸೇರಿ 6000ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಸಾಗಾಟ ಮಾಡುತಿದ್ದ ಅಕ್ಕಿಯನ್ನು ಕೂಡ ವಶಪಡಿಸಿಕೊಂಡಿದ್ದೇವೆ. ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.
ಉಡುಪಿ: ನಿಯಮ ಉಲ್ಲಂಘಿಸುವ ಪ್ರಿಂಟಿಂಗ್ ಪ್ರೆಸ್ ವಿರುದ್ಧ ಕಠಿಣ ಕ್ರಮ, ಡಿಸಿ ಕೂರ್ಮಾರಾವ್
ಅದೇ ರೀತಿ ಪೊಲೀಸ್ ಇಲಾಖೆ ಮೂಲಕ ಎಸ್ಪಿ ಕಚೇರಿಯಲ್ಲಿ ಸ್ಥಾಪಿಸಿರುವ ಸೆಲ್ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬರುವ ವಿಚಾರಗಳ ಬಗ್ಗೆ ನಿಗಾ ಇರಿಸ ಲಾಗಿದೆ. ಅನುಮತಿ ಪಡೆದರೂ ಸಾಮಾಜಿಕ ಜಾಲತಾಣಗಳಲ್ಲಿ ಏನು ಬೇಕಾ ದರೂ ಬರೆಯುವಂತಿಲ್ಲ. ಅದಕ್ಕೆ ಅದರದ್ದೆ ಆದ ಕಾನೂನು ಚೌಕಟ್ಟುಗಳಿವೆ ಮತ್ತು ಚುನಾವಣಾ ಆಯೋಗದ ನಿಯಮಗಳಿವೆ. ಜಾತಿ, ಧರ್ಮ, ಸಮುದಾಯ, ಭಾಷೆ ಆಧಾರದಲ್ಲಿ ಮತಗಳನ್ನು ಕೇಳಲು ಅವಕಾಶ ಇಲ್ಲ ಎಂದು ಅವರು ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಅಶೋಕ್ ಕಾಮತ್ ಮಾದರಿ ನೀತಿ ಸಂಹಿತೆ ಕುರಿತು ಮಾಹಿತಿ ನೀಡಿದರು. ವೇದಿಕೆಯಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ವಂದಿಸಿದರು.