ಬಿಸಿಲಿನ ತಾಪಕ್ಕೆ ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಮಹಿಳೆ ಬಲಿ; ಜೀವ ರಕ್ಷಣಾ ಸಲಹೆ ನೀಡಿದ ಹವಾಮಾನ ಇಲಾಖೆ
ಯಾದಗಿರಿಯಲ್ಲಿ ಉದ್ಯೋಗ ಖಾತ್ರಿ ಕೆಲಸಕ್ಕೆ ತೆರಳಿದ ಮಹಿಳೆ ಬಿಸಿಲಿನ ತಾಪ ತಾಳಲಾರದೇ ಕೂಲಿ ಮಾಡುವ ಕೆಲಸದ ಸ್ಥಳದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಇನ್ನು ಹವಾಮಾನ ಇಲಾಖೆಯಿಂದ ಜೀವ ಸಂರಕ್ಷಕ ಸಲಹೆಗಳನ್ನು ನೀಡಿದೆ.
ಯಾದಗಿರಿ (ಏ.29): ರಾಜ್ಯದಲ್ಲಿ ಕಳೆದೊಂದು ವಾರದಿಂದ ತಾಪಮಾನದಲ್ಲಿ ಭಾರಿ ಹೆಚ್ಚಳವಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಶೇ.40 ರಿಂದ ಶೇ.44 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇನ್ನು ಉಷ್ಣದ ಅಲೆಯಿಂದ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಈಗಾಗಲೇ ರಾಜ್ಯ ಹವಾಮಾನ ಇಲಾಖೆಯಿಂದ ಬಿಸಿಲಿನ ಪ್ರಮಾಣ ಹೆಚ್ಚಿರಲಿದ್ದು, ಉಷ್ಣ ಅಲೆಗಳು ಬೀಸಲಿವೆ ಎಂದು ಎಚ್ಚರಿಕೆ ನೀಡಲಾಗಿತ್ತು. ಇದಕ್ಕಾಗಿ ಕೆಲವು ಸುರಕ್ಷತಾ ಸಲಹೆಗಳನ್ನು ಕೂಡ ಕೊಡಲಾಗಿತ್ತು. ಆದರೆ, ಯಾದಗಿರಿಯಲ್ಲಿ ಭಾರಿ ಬಿಸಿಲಿನ ತಾಪಮಾನ ಹಾಗೂ ಬಿಸಿಯಾದ ಉಷ್ಣ ಅಲೆಯಿಂದಾಗಿ ಕೃಷಿ ಕಾರ್ಮಿಕ ಮಹಿಳೆಗೆ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕುರಕುಂದಿ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಮೃತರನ್ನು ಹಣಮಂತಿ (60) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು, ಕನಕಪುರ ಸಂಗಮದಲ್ಲಿ ಈಜಲು ತೆರಳಿದಾಗ ದುರ್ಘಟನೆ
ಮೃತ ಹಣಮಂತಿ ಅವರು ಉದ್ಯೋಗ ಖಾತ್ರಿ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಮಧ್ಯಾಹ್ನ ಬಿಸಿಲಿನ ಪ್ರಮಾಣ ಹೆಚ್ಚಳವಾಗುತ್ತಿತ್ತು. ಆದರೆ, ಬೆಳಗ್ಗೆ ವೇಳೆಯೇ ಊಟವನ್ನೂ ಮಾಡದೇ ಕೂಲಿ ಕೆಲಸಕ್ಕೆ ಮಹಿಳೆ ಆಗಮಿಸಿದ್ದು, ಬಿಸಿಲನ್ನೂ ಲೆಕ್ಕಿಸದೇ ಕೆಲಸ ಮಾಡುತ್ತಿದ್ದಳು. ಈ ವೇಳೆ ಕೂಲಿ ಕೆಲಸ ಮಾಡುತ್ತಿರುವಾಗಲೇ ಮಹಿಳೆ ಹಣಮಂತಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಅವರಿಗೆ ನೀರನ್ನು ಕುಡಿಸಿ ಬದುಕಿಸಲು ಯತ್ನಿಸಿದರೂ ಅವರು ಬದುಕಲೇ ಇಲ್ಲ. ಇನ್ನು ಆಸ್ಪತ್ರೆಗೆ ಸೇರಿಸುವ ಮುನ್ನವೇ ಕಾರ್ಮಿಕ ಮಹಿಳೆ ಹಣಮಂತಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಮಹಿಳೆ ಹಣಮಂತಿ ಅವರ ಮೃತದೇಹ ಯಾದಗಿರಿ ಯಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಡಗೇರಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೇಸಿಗೆ ಬಿಸಿಲು ಹಾಗೂ ಉಷ್ಣ ಹವೆಯಿಂದ ತಪ್ಪಿಸಿಕೊಳ್ಳಲು ಹವಾಮಾನ ಇಲಾಖೆ ನೀಡಿದ ಸಲಹೆಗಳು:
- ವಿಶೇಷವಾಗಿ ಮಧ್ಯಾಹ್ನ 12.00 ರಿಂದ 3.00 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ.
- ಹೆಚ್ಚಾಗಿ ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಿರಿ.
- ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರವಿರುವ ಹತ್ತಿ ಬಟ್ಟೆಗಳನ್ನು ಧರಿಸಿ.
- ಬಿಸಿಲಿನಲ್ಲಿ ಹೋಗುವಾಗ ರಕ್ಷಣಾತ್ಮಕ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲ್‌ಗಳನ್ನು ಬಳಸಿ.
- ಹೊರಗಿನ ತಾಪಮಾನ ಹೆಚ್ಚಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸಿ.
- ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು ತಪ್ಪಿಸಿ.
- ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸಿ.
- ಹೆಚ್ಚಿನ ಪ್ರೋಟೀನ್ ಆಹಾರವನ್ನು ತಪ್ಪಿಸಿ ಮತ್ತು ಹಳೆಯ ಆಹಾರವನ್ನು ಸೇವಿಸಬೇಡಿ.
- ನೀವು ಹೊರಗೆ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.
- ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬೇಡಿ
- ನಿಮಗೆ ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ, ತಕ್ಷಣ ವೈದ್ಯರನ್ನು ಭೇಟಿ ಮಾಡಿ.
- ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ತೋರಣಿ (ಅಕ್ಕಿ ನೀರು), ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ ದೇಹವನ್ನು ಮರು- ಜಲೀಕರಣ ಮಾಡಲು ಸಹಾಯ ಮಾಡುತ್ತದೆ.
- ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
- ನಿಮ್ಮ ಮನೆಯನ್ನು ತಂಪಾಗಿ ಇರಿಸಿ, ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸಿ ಮತ್ತು ರಾತ್ರಿಯಲ್ಲಿ ಕಿಟಕಿಗಳನ್ನು ತೆರೆಯಿರಿ.
- ಫ್ಯಾನ್, ಒದ್ದೆ ಬಟ್ಟೆಗಳನ್ನು ಬಳಸಿ ಮತ್ತು ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡಿ.
ನಮ್ಮ ಹೆಚ್.ಡಿ.ರೇವಣ್ಣ ಸಾಹೇಬ್ರು ದೇವರಂತೋರು, ಕಂಪ್ಲೇಂಟ್ ಕೊಟ್ಟಿರೋ ನನ್ ಸೊಸೆ ನಡತೆಯೇ ಸರಿಯಿಲ್ಲ
ರೈತರು/ಕೃಷಿ ಕಾರ್ಮಿಕರು : ನೀವು ಹೊಲದಲ್ಲಿ ಕೆಲಸ ಮಾಡುತ್ತಿದ್ದರೆ, ಟೋಪಿ ಅಥವಾ ಛತ್ರಿ ಬಳಸಿ ಮತ್ತು ನಿಮ್ಮ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಿ.