Asianet Suvarna News Asianet Suvarna News

ಜನರೇ ಸರಿಯಾದ ಉತ್ತರ ನೀಡ್ತಾರೆ : ಯತೀಂದ್ರ ಸಿದ್ದರಾಮಯ್ಯ ಆಕ್ರೋಶ

ಮುಂದಿನ ದಿನಗಳಲ್ಲಿ ಜನರೇ ಸರಿಯಾದ ಉತ್ತರ ಕೊಡಲಿದ್ದಾರೆ ಎಂದು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Yatindra siddaramaiah Slams BJP snr
Author
Bengaluru, First Published Oct 6, 2020, 11:34 AM IST
  • Facebook
  • Twitter
  • Whatsapp

ತಾಂಡವಪುರ (ಅ.06): ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬಿಜೆಪಿ ಸರ್ಕಾರಗಳು ಅಧಿಕಾರ ದುರುಪಯೋಗ ಮಾಡಿಕೊಂಡು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ದನಿಯನ್ನು ಧಮನ ಮಾಡಲು ಹೊರಟಿದ್ದಾರೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಟೀಕಿಸಿದ್ದಾರೆ. 

ಸಿಬಿಐ ದಾಳಿ: ಸಿಎಂ ಯಡಿಯೂರಪ್ಪ ವಿರುದ್ಧ ಗುಡುಗಿದ ಡಿಕೆ ಶಿವಕುಮಾರ್
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರದ ಭ್ರಷ್ಟಾಚಾರವನ್ನು ಪ್ರಶ್ನೆ ಮಾಡುವ ಪ್ರಜೆಗಳಿರಬಹುದು ಹಾಗೂ ಮಾಧ್ಯಮವಿರಬಹುದು.

 ಅಂತಹವರ ಧ್ವನಿಯನ್ನು ದಮನ ಮಾಡುವ ಮೂಲಕ ಪ್ರಜಾಪ್ರಭುತ್ವದಲ್ಲಿ ಯಾರೂ ಕೂಡ ಬಿಜೆಪಿ ವಿರುದ್ದ ಮಾತನಾಡಬಾರದೆಂದು ಪ್ರಜೆಗಳ ವಿರುದ್ದ ಇಲ್ಲ ಸಲ್ಲದ ಕೇಸುಗಳನ್ನು ಹಾಕುವ ಮೂಲಕ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಧ್ವನಿಯನ್ನು ಧಮನ ಮಾಡುತ್ತಿದ್ದು, ಇದಕ್ಕೆ ಮುಂದಿನ ದಿನಗಳಲ್ಲಿ ದೇಶದ ಜನರೇ ಬಿಜೆಪಿ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

Follow Us:
Download App:
  • android
  • ios