ಧಾರವಾಡ (ಫೆ.04): ಜಿಪಂ ಸದ​ಸ್ಯ​ರಾಗಿದ್ದ ಯೋಗೀಶಗೌಡ ಗೌಡರ್‌ ಹತ್ಯೆ ಪ್ರಕರಣದಲ್ಲಿ ಆರೋ​ಪಿ​ಯಾ​ಗಿ​ರು​ವ ಸಂತೋಷ ಸವದತ್ತಿ ಎಂಬಾತ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಯತ್ನ ನಡೆಸಿದ್ದಾನೆ.

ಕುತ್ತಿಗೆಗೆ ಬ್ಲೇಡ್‌ನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಸಂದರ್ಭದಲ್ಲಿ ಕುಟುಂಬದ ಸದಸ್ಯರು ಕೂಡಲೇ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ. ಸಂತೋಷ ಆತ್ಮಹತ್ಯೆಗೆ ಯತ್ನ ನಡೆಸುತ್ತಿರುವುದು ಇದು ಎರಡನೇ ಬಾರಿ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆಗೆ ಸ್ಪಷ್ಟಕಾರಣ ತಿಳಿದು ಬಂದಿಲ್ಲ.

ಯೋಗೀಶ್ ಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮತ್ತೊಬ್ಬರ ಹತ್ಯೆಗೆ ವಿನಯ್‌ ಕುಲಕರ್ಣಿ ಸ್ಕೆಚ್‌? ... 

ಯೋಗೀಶಗೌಡ ಕೊಲೆ ಪ್ರಕರಣದಲ್ಲಿ 7ನೇ ಆರೋಪಿಯಾಗಿರುವ ಸಂತೋಷ ಹಲವು ಬಾರಿ ಸಿಬಿಐ ಅಧಿಕಾರಿಗಳ ವಿಚಾರಣೆ ಸಹ ಎದುರಿಸಿದ್ದನು. ಮೆಟ್ಟಿಲುಗಳಿಂದ ಕೆಳಗೆ ಬಿದ್ದ ಕಾರಣ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಆತನ ಕುಟುಂಬಸ್ಥರು ಮಾಧ್ಯಮಗಳಿಗೆ ತಿಳಿಸಿದ್ದು, ಈ ಕುರಿತು ಉಪ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.