ಗಂಗಾವತಿ: ಪೊಲೀಸ್ ಠಾಣೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಯು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುವುದು ಎಂದು ತಿಳಿಸಿದ ಗಂಗಾವತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಡಿವೆಪ್ಪ

ಗಂಗಾವತಿ(ಆ.11): ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುವಕಯೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಸಂಜೆ ನಡೆದಿದೆ. ಹಣವಾಳ ಗ್ರಾಮದ ಸಿದ್ದು ಮಾಲೀಪಾಟೀಲ್ (25) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ನಗರದ ಪೊಲೀಸ್ ಠಾಣೆ ಸಮುಚ್ಚಯದಲ್ಲಿರುವ ಗ್ರಾಮೀಣ ಠಾಣೆಗೆ ಗುರುವಾರ ಸಂಜೆ ವೇಳೆಗೆ ಯುವಕ ಆಗಮಿಸಿದ್ದಾನೆ. ಠಾಣೆಯ ಒಳ ಪ್ರವೇಶಿಸುತ್ತಿದ್ದಂತೆಯೇ ತನ್ನ ಜೇಬಿನಲ್ಲಿದ್ದ ಬಾಟಲ್ ತೆರೆದು ಕುಡಿದಿದ್ದಾನೆ. ಅಷ್ಟರಲ್ಲೇ ಸ್ಥಳದಲ್ಲಿದ್ದ ಪೊಲೀಸರು ಇದನ್ನು ತಡೆದಿದ್ದಾರೆ. ಬಳಿಕ ಆತನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ಈತ ವಿಷ ಸೇವಿಸಿರುವ ವಿಷಯ ಗೊತ್ತಾಗಿದೆ.
ಸಲಿಂಗಿ ಎಂದು ಹೀಯಾಳಿಸ್ತಿದ್ದ ಸೀನಿಯರ್ಸ್: ಹಾಸ್ಟೆಲ್ ಬಾಲ್ಕನಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ
ಆದರೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ. ಆರೋಪಿಯು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುವುದು ಎಂದು ಗಂಗಾವತಿ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಅಡಿವೆಪ್ಪ ತಿಳಿಸಿದ್ದಾರೆ.