ಜನನಿಬಿಡ ಪ್ರದೇಶದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಅಂಕುಶ್ ಕೂಗಿದ್ದಾನೆ. ಈ ವೇಳೆ ಸ್ಥಳೀಯರು ಉಗ್ರ ಇರಬಹುದು ಅಂತ ಗಾಬರಿಗೊಂಡಿದ್ದರು. 

ಬೆಂಗಳೂರು(ಮಾ.30): ಜನನಿಬಿಡ ಪ್ರದೇಶದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ. ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಲೇಔಟ್‌ ಎರಡನೇ ಹಂತ 7ನೇ ಮೇನ್ ಬಳಿ ನಿನ್ನೆ(ಬುಧವಾರ) ಬೆಳಿಗ್ಗೆ ಘಟನೆ ನಡೆದಿದೆ.

ಅಂಕುಶ್ (24) ವರ್ಷ ಪಾಕಿಸ್ತಾನ್ ಜಿಂದಾಬಾದ್ ಅಂತ ಕೂಗಿದ ಯುವಕನಾಗಿದ್ದಾನೆ. ಜನನಿಬಿಡ ಪ್ರದೇಶದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂತ ಅಂಕುಶ್ ಕೂಗಿದ್ದಾನೆ. ಈ ವೇಳೆ ಸ್ಥಳೀಯರು ಉಗ್ರ ಇರಬಹುದು ಅಂತ ಗಾಬರಿಗೊಂಡಿದ್ದರು. ಹೀಗಾಗಿ ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಪಾಕಿಸ್ತಾನ ಜಿಂದಾಬಾದ್‌ ಪೋಸ್ಟ್‌: ಆರೋಪಿ ಮೇಲಿನ ಕ್ರಿಮಿನಲ್‌ ಕೇಸ್‌ ರದ್ದು ಮಾಡಿದ ಹೈಕೋರ್ಟ್‌

ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಮೈಕೋ ಲೇ ಔಟ್ ಪೊಲೀಸರು ಯುವಕನನ್ನ ವಶಕ್ಕೆ ಪಡೆದಿದ್ದರು. ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದ ವಿಚಾರಣೆ ನಡೆಸಿದಾಗ ಈತ ಮಾನಸಿಕ ಅಸ್ವಸ್ಥ ಅನ್ನೋದು ಗೊತ್ತಾಗಿದೆ. 
ಬೆಳಿಗ್ಗೆಯಿಂದ ರಾತ್ರಿವರೆಗೂ ಅಂಕುಶ್‌ನನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ. ನಂತರ ಮನೆಯವರಿಗೆ ಮಾಹಿತಿ ನೀಡಿದ್ದು ಇತ್ತೀಚೆಗೆ ಅಂಕುಶ್‌ ಮೆಂಟಲಿ ಡಿಸ್ಟರ್ಬ್ ಆಗಿದ್ದ ಅಂತ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಇದುವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.