ಮಂಗಳೂರು(ಜು.29): ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಗೆ ಕೊಲೆ ಬೆದರಿಕೆ ಪ್ರಕರಣ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅಕ್ರಮ ಗೋಸಾಗಾಟ: ದ.ಕ ನಿರ್ಗಮನ ಡಿಸಿ ಸಿಂಧು ರೂಪೇಶ್‌ಗೆ ಕೊಲೆ ಬೆದರಿಕೆ..!

ಮೂಡುಬಿದಿರೆ ಪೊಲೀಸರು ತೆಂಕಮಿಜಾರು ನಿವಾಸಿ ರಂಜಿತ್‌ನನ್ನು ಬಂಧಿಸಿದ್ದಾರೆ. ಗೋಸಾಗಾಟದ ವೇಳೆ ಕಾನೂನು ಕೈಗೆತ್ತಿಕೊಳ್ಳದಂತೆ ಡಿಸಿ ಎಚ್ಚರಿಕೆ ನೀಡಿದ ಬಳಿಕ ರಾಮಸೇನಾ ಅಭಿಮಾನಿ ವಾಟ್ಸಪ್ ಗ್ರೂಪ್ ನಲ್ಲಿ ಕೊಲೆ ಬೆದರಿಕೆ ಹಾಕಿದ್ದ.

'ಫಸ್ಟ್ ಮೊಲೆನ್ ಕರ್ತ್ ಕೆರೊಡು' ಎಂದು ತುಳುವಿನಲ್ಲಿ ಬೆದರಿಕೆ ಹಾಕಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. 'ಮೊದಲು ಇವಳನ್ನು ಕಡಿದು ಕೊಲ್ಲಬೇಕು' ಎಂದು ವಾಟ್ಸಪ್ ಗ್ರೂಪ್ ನಲ್ಲಿ ರಂಜಿತ್ ಬೆದರಿಕೆ ಹಾಕಿದ್ದ.