ಚಿಕ್ಕಮಗಳೂರು [ಡಿ.27]: ಮಹೀಲೆಗೆ ಡ್ರಾಪ್ ನೀಡುವ ನೆಪದಲ್ಲಿ ಆಕೆಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದ ಸಮೀಪ ಘಟನೆ ನಡೆದಿದ್ದು, ಮೆಣಸೆಯಿಂದ ಶೃಂಗೇರಿಗೆ ತೆರಳುವ ವೇಳೆ ಕೊರಡಕಲ್ಲು ಬಳಿ ತೆರಳುತ್ತಿದ್ದ ವೇಳೆ ಅಭಿ ಎಂಬಾತ ಮಹಿಳೆ ಮೇಲೆ ಅತ್ಯಾಚಾ ಎಸಗಿದ್ದಾನೆ. 

ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದವನಾದ ಅಭಿಯನ್ನು ಇದೀಗ ಪ್ರಕರಣ ಸಂಬಂಧ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಇತ್ತೀಚೆಗಷ್ಟೇ ಹೈದ್ರಾಬಾದಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದು, ಪ್ರಕರಣ ಸಂಬಂಧ ನಾಲ್ವರನ್ನು ಎನ್ ಕೌಂಟರ್ ಮಾಡಲಾಗಿತ್ತು. ಈ ದೇಶದಾದ್ಯಂತ ಸದ್ದು ಮಾಡಿದ್ದರೂ ಹೀನ ಕೃತ್ಯ ಹಲವೆಡೆ ಮುಂದುವರಿದಿದೆ. ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಆರೋಪಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ

ಡಿಸೆಂಬರ್ 27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ