ಸೋಷಿಯಲ್ ಮೀಡಿಯಾದಲ್ಲಿ ಪರಿಚಯವಾದ ವ್ಯಕ್ತಿಯೋರ್ವ ಯುವತಿಗೆ ವಿವಾಹವಾಗುವುದಾಗಿ ವಂಚಿಸಿದ್ದಾನೆ. ಈಗ ಫೋನ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾನೆ
ಬೆಂಗಳೂರು (ನ.30): ಪ್ರೀತಿಸುವ ಸೋಗಿನಲ್ಲಿ ಮದುವೆಯಾಗುವುದಾಗಿ ನಂಬಿಸಿ ಯುವತಿಯಿಂದ ಎರಡು ಲಕ್ಷ ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಂಚನೆಗೊಳಗಾದ ಎ.ನಾರಾಯಣಪುರ ನಿವಾಸಿ ಯುವತಿ ನೀಡಿದ ದೂರಿನ ಮೇರೆಗೆ ಪಾಂಡಿಚೇರಿ ಮೂಲದ ಕಾರ್ತಿಕ್ ಎಂಬಾತನ ವಿರುದ್ಧ ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಯುವತಿಗೆ ಇನ್‌ಸ್ಟಾಗ್ರಾಮ್‌ನಲ್ಲಿ 2017ರಲ್ಲಿ ಕಾರ್ತಿಕ್ ಎಂಬಾತ ಪರಿಚಯವಾಗಿದ್ದ. ಇಬ್ಬರು ಪರಸ್ಪರ ಫೋನ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. 2018ರಲ್ಲಿ ಶಾಪಿಂಗ್ ಮಾಲ್‌ವೊಂದರಲ್ಲಿ ಇಬ್ಬರು ಮುಖತಃ ಭೇಟಿಯಾಗಿದ್ದರು. ತಾನು ಯೂನಿಟ್ ಇನ್ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ಬಾಣಸವಾಡಿಯಲ್ಲಿ ಕಚೇರಿ ಇದೆ ಎಂದು ಹೇಳಿದ್ದ.
'ಕೆನ್ನೆಗೆ ಬಾರಿಸುತ್ತೇನೆ' ಮಾಸ್ಕ್ ಹಾಕೊಳ್ಳಿ ಎಂದಿದ್ದಕ್ಕೆ ನಿವೃತ್ತ ಮಹಿಳಾ ಅಧಿಕಾರಿ ದರ್ಪ ...
ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಮೂರು ತಿಂಗಳಿಗೊಮ್ಮೆ ಕಾರ್ತಿಕ್ ಬೆಂಗಳೂರಿಗೆ ಬಂದು ಭೇಟಿಯಾಗಿ ಹೋಗುತ್ತಿದ್ದ. ಈ ಅವಧಿಯಲ್ಲಿಯೇ ಹಂತ-ಹಂತವಾಗಿ 2 ಲಕ್ಷ ನಗದು ಹಾಗೂ 6 ಗ್ರಾಂ. ಚಿನ್ನದ ಉಂಗುರು ಪಡೆದುಕೊಂಡಿದ್ದ.
ನಂತರ ನಮ್ಮ ಮದುವೆಗೆ ಪೋಷಕರು ಒಪ್ಪುತ್ತಿಲ್ಲ. ಹೀಗಾಗಿ ನಿನ್ನನ್ನು ಮದುವೆಯಾಗುವುದಿಲ್ಲ ಎಂದು ಸಬೂಬು ಹೇಳಿದ್ದ. ಅಲ್ಲದೆ, ಪ್ರೀತಿಸಿರುವ ವಿಚಾರವನ್ನೇ ಇಟ್ಟುಕೊಂಡು ಎಲ್ಲಿಗಾದರೂ ಹೋದರೆ, ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ. ಖಾಸಗಿ ಫೋಟೋಗಳನ್ನು ಜಾಲತಾಣದಲ್ಲಿ ಅಪ್‌ಲೋಡ್ ಮಾಡುವುದಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ. ಇತ್ತೀಚೆಗೆ ಫೋನ್ ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರೋಪಿಸಿ ಸಂತ್ರಸ್ತ ಯುವತಿ ದೂರಿನಲ್ಲಿ ವಿವರಿಸಿದ್ದಾಳೆ. ಪ್ರಕರಣ ದಾಖಲಿಸಿಕೊಂಡು ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Nov 30, 2020, 9:29 AM IST