Asianet Suvarna News Asianet Suvarna News

ಭವ್ಯ ಭಾರತ ವಿಶ್ವ ಗುರು ಆಗಲು ಯುವಜನರೇ ಕಾರಣ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಯುವಜನರು ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದು, ಯುವ ಸಮುದಾಯದಿಂದಲೇ ಭಾರತ ವಿಶ್ವ ಗುರುವಾಗಲು ಕಾರಣವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. 

Youth is the Reason India has become world guru Says Minister Laxmi Hebbalakar gvd
Author
First Published Jan 4, 2024, 5:42 PM IST

ಧಾರವಾಡ (ಜ.04): ಯುವಜನರು ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದು, ಯುವ ಸಮುದಾಯದಿಂದಲೇ ಭಾರತ ವಿಶ್ವ ಗುರುವಾಗಲು ಕಾರಣವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಂಗವಿಕಲರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಇಲ್ಲಿಯ ಕರ್ನಾಟಕ ಕಾಲೇಜಿನ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ಕಲಾ ಕಾಲೇಜಿನ ಪ್ರವಾಸೋದ್ಯಮ ಅಧ್ಯಯನ ವಿಭಾಗ ಹಾಗೂ ಕೇಂದ್ರ ಪವಾಸೋದ್ಯಮ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಮೂರು ದಿನಗಳ ʻಸಾಂಸ್ಕೃತಿಕ ಉತ್ಸವ- ಸಾರ್ಥವಾಹ-2024 ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ. ಸ್ವಾವಲಂಬನೆಯತ್ತ ರಾಷ್ಟ್ರದ ಪ್ರಯಾಣ ಮುಂದುವರಿದಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಹಾಗೂ ದೇಶವನ್ನು ವಿಶ್ವದ ಅತ್ಯುತ್ತಮ ಸ್ಥಾನದಲ್ಲಿ ಇರಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು. ಭಾರತ ವಿಶಿಷ್ಟ ಸಂಸ್ಕೃತಿಗಳಿಂದ ತುಂಬಿದ ವೈವಿಧ್ಯಮಯ ದೇಶವಾಗಿದೆ ಮತ್ತು ವಿವಿಧತೆಯಲ್ಲಿ ಏಕತೆ ಈ ರಾಷ್ಟ್ರದ ಶಕ್ತಿಯಾಗಿ ಉಳಿದಿದೆ. ಸೋಲು ಗೆಲುವು ಎಲ್ಲವೂ ಸಾಮಾನ್ಯ, ಸೋಲೇ ಗೆಲುವಿನ ಮೆಟ್ಟಿಲು ಎನ್ನುತ್ತಾರೆ. ಆದರೆ, ಕೆಲವೊಬ್ಬರ ಜೀವನದಲ್ಲಿ ಕೇವಲ ಸೋಲನ್ನು ಮಾತ್ರವೇ ಕಾಣುತ್ತಿರುತ್ತಾರೆ. 

ಕಾಂಗ್ರೆಸ್‌ ಸರ್ಕಾರಕ್ಕೆ 5ನೇ ಗ್ಯಾರಂಟಿಯೇ ಪ್ರಮುಖ ಅಸ್ತ್ರ: ಸಚಿವ ಮಧು ಬಂಗಾರಪ್ಪ

ಆಗ ಸೋತೆ ಎಂದು ಕೊರಗುವುದು, ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರ ಬದಲು, ಗೆಲುವು ನಿಮ್ಮದಾಗಿಸಿಕೊಳ್ಳುವುದು ಹೇಗೆ, ನೀವು ಎಡವಿದ್ದೆಲ್ಲಿ ಎಂಬುದರ ಬಗ್ಗೆ ಆಲೋಚಿಸಬೇಕು. ಆತ್ಮವಿಶ್ವಾಸ, ಛಲ ನಿಮ್ಮಲ್ಲಿದ್ದರೆ ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ತೋರಿಸಬಹುದು ಎಂದರು. ಇದೇ ವೇಳೆ ಸಚಿವರು, ಕರ್ನಾಟಕ ಕಲಾ ಮಹಾವಿದ್ಯಾಲಯದ ಚಿತ್ತಾರ ಕಲಾ ಬಳಗ ಏರ್ಪಡಿಸಿದ್ದ ಮೂರು ದಿನಗಳ ಚಿತ್ರ ಕಲಾ ಪ್ರದರ್ಶನವನ್ನು ಉದ್ಘಾಟಿಸಿ, ಕಲಾ ಕೃತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. 

ನಿರ್ದೇಶಕ ಡಾ.ಯಶವಂತ ಸರದೇಶಪಾಂಡೆ ಮಾತನಾಡಿದರು. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಬಿ. ಗುಡಸಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಲಾ ಕಾಲೇಜಿನ ಪ್ರಭಾರ ಪ್ರಾಚಾರ್ಯ ಡಾ. ಮಂಜುಳಾ ಚಲವಾದಿ, ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ. ಸಾಳುಂಕೆ, ಪ್ರವಾಸೋದ್ಯಮ ವಿಭಾಗದ ಸಂಯೋಜಕ ಡಾ. ಕೆ. ಜಗದೀಶ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ. ವೀರೇಂದ್ರ ಯಾದವ, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಎಸ್.ರಾಜಶೇಖರ ಇದ್ದರು.

ಜಯಲಕ್ಷ್ಮಿ ವಿಲಾಸ ಅರಮನೆ ಮ್ಯಾನ್ಷನ್‌ನ ಪುನರುಜ್ಜೀವನಕ್ಕೆ ಕಡೆಗೂ ಕೂಡಿ ಬಂತು ಕಾಲ!

ಇಂದು ಹೆಣ್ಣು ಮಕ್ಕಳು ಶಿಕ್ಷಣ ಪಡೆದು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಅಕ್ಷರ ಬೆಳಕು ನೀಡಿದ ಸಾವಿತ್ರಬಾಯಿ ಫುಲೆ ಅವರ ಹೋರಾಟದಿಂದ ಸಾಧ್ಯವಾಗಿದೆ. ಅದರೂ ಇಂದಿಗೂ ಸಮಾಜದಲ್ಲಿ ಜಾತಿ ಅಸಮಾನತೆ, ಅಸ್ಪೃಶ್ಯತೆ, ದೌರ್ಜನ್ಯ ನಡೆಯುತ್ತಿದ್ದು, ಈ ತರಹದ ಅನಿಷ್ಟ ಪದ್ಧತಿಗಳ ವಿರುದ್ಧ ದೊಡ್ಡ ರೀತಿಯಲ್ಲಿ ಚಳವಳಿ ಅವಶ್ಯಕ. ಈ ನಿಟ್ಟಿನಲ್ಲಿ ಯುವ ಜನರು ಮುಂದಾಗಬೇಕು.
-ಲಕ್ಷ್ಮೀ ಹೆಬ್ಳಾಕರ, ಸಚಿವರು

Follow Us:
Download App:
  • android
  • ios