ಶಿವಮೊಗ್ಗ [ಜ.20]: ಯುವತಿ ವಿಚಾರವಾಗಿ ಇಬ್ಬರು ಯುವಕರ ನಡುವಿನ ವೈಷಮ್ಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಪ್ರದೇಶದಲ್ಲಿ ತೋಹಿದ್ ಎಂಬ ಯುವಕ ಯುವತಿಯ ಪ್ರೀತಿ ವಿಚಾರಕ್ಕೆ ಮೊಹಮ್ಮದ್ ಅಲಿ [23] ಎಂಬಾತನನ್ನು ಕೊಲೆಗೈದಿದ್ದಾರೆ. 

ಭಾನುವಾರ ಸಂಜೆ ವೇಳೆ ಹೋಟೆಲ್ ಬಳಿಯಲ್ಲಿ ತಿಂತಿದ್ದ ಮೊಹಮ್ಮದ್ ಅಲಿಗೆ ತೋಹಿದ್ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. 

ಓಮ್ನಿಯಲ್ಲಿ ಕೊಳೆತ ಮಹಿಳೆ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ..

ಈ ವೇಳೆ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮೊಹಮ್ಮದ್ ನನ್ನು ಕೋಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. 

ಮುತ್ತು ಕೊಡಲು ಹೋದವನಿಗೆ ಕಚ್ಚಿ ಹರಿದ ಹಾವು...

ದೊಡ್ಡಪೇಟೆ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲಿಸಿದ್ದಾರೆ. 

ಜನವರಿ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ