Asianet Suvarna News Asianet Suvarna News

ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕೃಷ್ಣಾ: ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ!

ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಹಿನ್ನೆಲೆ| ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ| ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿರುವ ನದಿ ತೀರದ ತೋಟದ ವಸತಿ ಜನ| ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ

Youth Rescued from drowning in Krishna river in Chikkodi
Author
Bangalore, First Published Aug 1, 2019, 11:57 AM IST

ಚಿಕ್ಕೋಡಿ[ಆ.01]: ನದಿ ಪ್ರವಾಹದ ಸುಳಿಯಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಸ್ಥಳೀಯರ ಸಮಯಪ್ರಜ್ಞೆಯಿಂದ ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

"

ಮಹಾರಾಷ್ಟ್ರದಲ್ಲಿ ಮಳೆ; ಕರ್ನಾಟಕದಲ್ಲಿ ಪ್ರವಾಹ!

2 ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಯ ಒಳ ಹರಿವು ಹೆಚ್ಚಾಗಿದ್ದು, ಕೃಷ್ಣಾ ನದಿ ಪಾತ್ರದ ಜನರಲ್ಲಿ ಆತಂಕ ಹೆಚ್ಚಿದೆ. ಹಲವು ಗ್ರಾಮಗಳಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂಗಳಗಿ ಗ್ರಾಮದಲ್ಲಿ ಪ್ರವಾಹ ಹೆಚ್ಚಿದೆ.

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿ, ಮಗುವನ್ನು ಕಾಪಾಡಿದ 11ರ ಪೋರ!

ಯುವಕನೊಬ್ಬ ನೀರಿನಲ್ಲಿ ಸಿಲುಕಿ ಕೊಚ್ಚಿ ಹೋಗುತ್ತಿದ್ದಾಗ ತಕ್ಷಣವೇ ಸ್ಥಳೀಯರು ಯುವಕನನ್ನು ರಕ್ಷಣೆ ಮಾಡಿದ್ದಾರೆ. ನದಿ ತೀರದ ಜನರ ಕಷ್ಟಕ್ಕೆ ಈ ಭಾಗದ ಯಾವ ಅಧಿಕಾರಿಗಳು ಸ್ಪಂದಿಸದಿರುವುದು ದುರದೃಷ್ಟಕರ.

Follow Us:
Download App:
  • android
  • ios