ಗ್ರಾಮಸ್ಥರು ಅಸ್ತಮಾ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿದ್ದಾರೆ. ಮಾಲಿನ್ಯ ಹೆಚ್ಚಿರುವ ಗ್ರಾಮಗಳ ಯುವಕರಿಗೆ ಹೆಣ್ಣು ಕೊಡಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ ಹೇಮಲತಾ ನಾಯಕ್‌ 

ವಿಧಾನಪರಿಷತ್ತು(ಫೆ.22): ಕೊಪ್ಪಳ ತಾಲೂಕು ವ್ಯಾಪ್ತಿಯಲ್ಲಿನ ಕಾರ್ಖಾನೆಗಳಿಂದ ಉಂಟಾಗುತ್ತಿರುವ ಮಾಲಿನ್ಯದಿಂದಾಗಿ ಆರೋಗ್ಯ ಸಮಸ್ಯೆ ಸೇರಿದಂತೆ ಗ್ರಾಮದ ಯುವಕರಿಗೆ ಹೆಣ್ಣು ಕೊಡಲೂ ಯಾರೂ ಮುಂದೆ ಬರುತ್ತಿಲ್ಲ, ಇದಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ಬಿಜೆಪಿಯ ಹೇಮಲತಾ ನಾಯಕ್‌ ಆಗ್ರಹಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಶ್ನೋತ್ತರ ವೇಳೆ ಕೊಪ್ಪಳ ತಾಲೂಕಿನಲ್ಲಿ 202ಕ್ಕೂ ಹೆಚ್ಚಿನ ಕಾರ್ಖಾನೆಗಳಿದ್ದು, ಕಲ್ಲಿದ್ದಲಿನಿಂದ ಕಾರ್ಯನಿರ್ವಹಿಸುವ ಕಾರ್ಖಾನೆಗಳು ಹಾರುಬೂದಿಯನ್ನು ಅವೈಜ್ಞಾನಿಕವಾಗಿ ಹೊರಗೆ ವಿಲೇವಾರಿ ಮಾಡುತ್ತಿವೆ. ಇದರಿಂದಾಗಿ ತಾಲೂಕಿನ ಚಿಕ್ಕಬಗನಾಳ, ಹಿರೇಬಗನಾಳ, ಕಾಸನಕಂಡಿ, ಅಲ್ಲನಗರ, ಹಾಲವರ್ತಿ, ಮುಂಡರಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಜನರಿಗೆ ಉಸಿರಾಟದ ತೊಂದರೆ ಉಂಟಾಗುತ್ತಿದೆ. ಈ ಗ್ರಾಮಸ್ಥರು ಅಸ್ತಮಾ ಸೇರಿದಂತೆ ಹಲವು ರೋಗಗಳಿಂದ ಬಳಲುತ್ತಿದ್ದಾರೆ. ಮಾಲಿನ್ಯ ಹೆಚ್ಚಿರುವ ಗ್ರಾಮಗಳ ಯುವಕರಿಗೆ ಹೆಣ್ಣು ಕೊಡಲು ಪಾಲಕರು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ಬಜೆಟ್ ಸಾಮಾನ್ಯ ಅಲ್ಲ, ಐತಿಹಾಸಿಕ ಬಜೆಟ್: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ

ಅದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ಕಾರ್ಖಾನೆಗಳಿಂದ ವಾಯುಮಾಲಿನ್ಯ ತಡೆಗೆ ಕಲ್ಲಿದ್ದಲು ಬಳಕೆ ಕಡಿಮೆ ಮಾಡಲು ಗೇಲ್‌ ಗ್ಯಾಸ್‌ ಸಂಸ್ಥೆಯಿಂದ ಸಿಎನ್‌ಜಿ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಹಾರುಬೂದಿಗೆ ನೀರು ಸಿಂಪಡಿಸಿ ಅದು ಗಾಳಿಯಲ್ಲಿ ಸೇರದಂತೆ ಕ್ರಮ ಕೈಗೊಳ್ಳಲಾಗುವುದು. ಮಾಲಿನ್ಯ ಉಂಟು ಮಾಡಿದ 12 ಕಾರ್ಖಾನೆಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಮಾಲಿನ್ಯ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.