ದೇಶದಲ್ಲಿ ಜಾರಿಯಲ್ಲಿರುವ 3 ಹಂತದ ಪಂಚಾಯ್ತಿ ವ್ಯವಸ್ಥೆಯಲ್ಲಿ ತಾಪಂ ಅನ್ನು ರದ್ದುಪಡಿಸಿ ಜಿಪಂ, ಗ್ರಾಪಂ ಅನ್ನಷ್ಟೇ ಉಳಿಸಿಕೊಳ್ಳಬೇಕು ಎನ್ನುವ ಬೇಡಿಕೆ ಅಲ್ಲಲ್ಲಿ ಕೇಳಿಬರುತ್ತಿದೆ| ಇದನ್ನು ರಾಜ್ಯ ಸರ್ಕಾರ ತೀರ್ಮಾನ ಮಾಡಲು ಆಗಲ್ಲ| ದೇಶದ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಸಂವಿಧಾನ ಕಾಯ್ದೆ ತಿದ್ದುಪಡಿ ಮಾಡಿ ಕ್ರಮ: ಈಶ್ವರಪ್ಪ|
ರಾಯಚೂರು(ಫೆ.20): ಮುಂಬರುವ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯತಿ ಚುನಾವಣೆ ಘೋಷಣೆಯಾಗಲಿವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಲ್ಲಿ ಜಾರಿಯಲ್ಲಿರುವ 3 ಹಂತದ ಪಂಚಾಯ್ತಿ ವ್ಯವಸ್ಥೆಯಲ್ಲಿ ತಾಪಂ ಅನ್ನು ರದ್ದುಪಡಿಸಿ ಜಿಪಂ, ಗ್ರಾಪಂ ಅನ್ನಷ್ಟೇ ಉಳಿಸಿಕೊಳ್ಳಬೇಕು ಎನ್ನುವ ಬೇಡಿಕೆ ಅಲ್ಲಲ್ಲಿ ಕೇಳಿಬರುತ್ತಿದೆ. ಇದನ್ನು ರಾಜ್ಯ ಸರ್ಕಾರ ತೀರ್ಮಾನ ಮಾಡಲು ಆಗಲ್ಲ ಎಂದು ಹೇಳಿದ್ದಾರೆ.
ಸಿಂಧನೂರು: ಡೆತ್ ನೋಟ್ ಬರೆದಿಟ್ಟು ಗೃಹಿಣಿ ನೇಣಿಗೆ ಶರಣು, ಕಾರಣ..?
ದೇಶದ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಸಂವಿಧಾನ ಕಾಯ್ದೆ ತಿದ್ದುಪಡಿ ಮಾಡಿ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದರು.
