ಬೆಳಗಾವಿ [ಜೂ.19] : ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಅವರು ಬಂಧನದ ಭೀತಿಯಿಂದಲೇ ಮಂಗಳವಾರ ನಡೆದ ಜಿ.ಪಂ. ಸಾಮಾನ್ಯ ಸಭೆಗೆ ಗೈರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆಶಾ ಗೈರಾದ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದ್ದು, ಕೆಲ ಸದಸ್ಯರು ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ. 

ಅಥಣಿ ಪೊಲೀಸ್ ಠಾಣೆಯಲ್ಲಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮತ್ತು ಅವರ ಪತಿ ವಿರುದ್ಧ ದಾಖಲಾಗಿದ್ದ ಪ್ರಕರಣವೊಂದಕ್ಕೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅಂದಿನಿಂದ ಆಶಾ ಯಾವ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿಲ್ಲ. 

ಅದೇ ರೀತಿ ಮಂಗಳವಾರ ಜಿಪಂ ಸಭಾಭವನದಲ್ಲಿ ನಡೆದ ಜಿಪಂ ಸಾಮಾನ್ಯಸಭೆಗೂ ಅವರು ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಜಿಪಂ  ಉಪಾಧ್ಯಕ್ಷ ಅರುಣ ಕಟಾಂಬಳೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.