ಕರಾವಳಿಯಲ್ಲಿ ಮಳೆ ಹೆಚ್ಚಾಗಿದ್ದು, ಕೊಡಗಿನಲ್ಲಿಯೂ ಭಾರೀ ಮಳೆಯಾಗಿದೆ. ಶುಕ್ರವಾರ ಬೆಳಗ್ಗಿನಿಂದ ಆರಂಭಿಸಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 

ಮಡಿಕೇರಿ(ಅ.19): ವಾಯುಭಾರ ಕುಸಿತದ ಪರಿಣಾಮ ಕೊಡಗಿನ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗಿದೆ. ಬೆಳಗ್ಗೆಯಿಂದ ಬಿಟ್ಟು ಬಿಡದೆ ಭಾಗಮಂಡಲ, ತಲಕಾವೇರಿ ಭಾಗದಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಜನ ಜೀವನ ಅಸ್ಯವ್ಯಸ್ತಗೊಂಡಿದೆ.

ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಮಡಿಕೇರಿ ನಗರ ಮತ್ತು ಸುತ್ತಮುತ್ತ ಮಧ್ಯಾಹ್ನದ ನಂತರ ಭಾರಿ ಮಳೆ ಸುರಿದ ಪರಿಣಾಮ ರಸ್ತೆಯಲ್ಲಿ ಹೆಚ್ಚಿನ ನೀರು ಹರಿದು ಸಂಚಾರಕ್ಕೆ ಅಡಚಣೆಯುಂಟಾಯಿತು.

ಮತ್ತೊಮ್ಮೆ ಜೆಡಿಎಸ್ ಅಧಿಕಾರಕ್ಕೆ : ರೇವಣ್ಣಗೆ ಸಿಕ್ತಾ ಹಾಸನಾಂಬ ಆಶೀರ್ವಾದ?

ದಕ್ಷಿಣ ಕೊಡಗಿನ ವಿರಾಜಪೇಟೆಯ ಗೋಣಿಕೊಪ್ಪ, ಸಿದ್ದಾಪುರ, ಅಮ್ಮತ್ತಿ, ಪಾಲಿಬೆಟ್ಟಸೇರಿದಂತೆ ಬ್ರಹ್ಮಗಿರಿ, ನಾಪೋಕ್ಲು, ಭಾಗಮಂಡಲ ಹಾಗೂ ತಲಕಾವೇರಿ ಭಾಗದಲ್ಲಿ ಗುರುವಾರ ರಾತ್ರಿಯೂ ಉತ್ತಮ ಮಳೆಯಾಗಿದ್ದು, ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಸ್ಥಳೀಯರಲ್ಲಿ ಆತಂಕವನ್ನೂ ಸೃಷ್ಟಿಸಿದೆ.

ಗುಡುಗು ಮಿಂಚಿನಿಂದಾಗಿ ವಿದ್ಯುತ್‌ ವ್ಯತ್ಯಯ ಉಂಟಾಯಿತಲ್ಲದೆ ಧಾರಕಾರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತಗೊಂಡಿದೆ. ಜಿಲ್ಲೆಯಲ್ಲಿ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಮನವಿ ಮಾಡಿದ್ದಾರೆ.

ವೈಯಕ್ತಿಕ ವಿಚಾರ ಸಾರ್ವಜನಿಕ ಆಗಬಾರದು: ಸೋಮಣ್ಣ...