ಕರ್ನಾಟಕದ ಹಲವು ಜಿಲ್ಲೆಗಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕಳೆದ ಕೆಲ ದಿನಗಳಿಂದ ಕೆಲ ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಇದೀಗ ಮಳೆ ಮುಂದುವರಿದ ಕಾರಣ ರಾಜ್ಯದ ಈ ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಕೊಡಗು (ಜೂ.27) ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಇತ್ತ ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕಳೆದ ಕೆಲ ದಿನಗಳಿಂದ ಶಾಲಾ ಕಾಲೇಜಿಗೆ ಕೆಲ ಜಿಲ್ಲೆಗಳಲ್ಲಿ ರಜೆ ನೀಡಲಾಗಿತ್ತು. ಇದೀಗ ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ನಾಳೆ (ಜೂ. 28) ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಜೂನ್ 28ಕ್ಕೆ ರಜೆ ಘೋಷಣೆ
ಕೊಡುಗೆ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಕಾರಣ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಕೊಡುಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ರಜೆ ಘೋಷಿಸಿದ್ದಾರೆ. ಒಂದು ದಿನದ ಮಟ್ಟಿಗೆ ರಜೆ ನೀಡಲಾಗಿದೆ.
ಸೋಮವಾರಪೇಟೆಯಲ್ಲಿ ಭೂಕುಸಿತ
ಕೊಡುಗು ಜಿಲ್ಲೆಯ ಹಲವು ಪ್ರದೇಶಳಗಳಲ್ಲಿ ಬಾರಿ ಮಳೆಯಾಗುತ್ತಿದ್ದು, ನದಿ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಕೆಲ ಪ್ರದೇಶಗಳು ಜಲಾವೃತಗೊಂಡಿದೆ. ಸೋಮವಾರಪೇಟೆ ಪಟ್ಟಣದಲ್ಲಿ ಭಾರಿ ಮಳೆಗೆ ಭೂಕುಸಿತವಾಗಿದೆ. ವಿಶ್ವ ಮಾನವ ವಿದ್ಯಾಸಂಸ್ಥೆಯ ಶಾಲಾ ಆವರಣದ ತಡೆಗೋಡೆ ಕುಸಿತಗೊಂಡಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿ ಕುಸಿದಿದ್ದ ತಡೆ ಗೋಡೆ ಇಂದು ಭಾರಿ ಮಳೆಯಿಂದ ಕುಸಿತಗೊಂಡಿದೆ.
ನಾಪೋಕ್ಲು ಚೆರಿಯಪರಂಬು ರಸ್ತೆ ಸಂಪರ್ಕ ಬಂದ್
ಭಾರಿ ಮಳೆಯಿಂದ ನಿನ್ನೆ ಕೊಡಗಿನ ನಾಪೋಕ್ಲು ಭಾಗದ ಚೆರಿಯಪರಂಬು ರಸ್ತೆ ಸಂಪರ್ಕ ಬಂದ್ ಆಗಿದೆ. ಮಳೆಯಿಂ ರಸ್ತೆ ಜಲಾವೃತಗೊಂಡಿದೆ. ಕೆಲ ಮನೆಗಳಿಗೂ ನೀರು ನುಗ್ಗಿದೆ. ತೆಪ್ಪದ ಮೂಲಕ ಜನರು ಸಾಗಿದ ಘಟನೆ ವರದಿಯಾಗಿದೆ.
ತ್ರೀವೇಣಿ ಸಂಗಮ ಮುಳುಗಡೆ
ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಮುಳುಗಡೆಯಾಗಿದೆ. ತಲಕಾವೇರಿ, ಬ್ರಹ್ಮಗಿರಿ ಬೆಟ್ಟ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದ ತ್ರೀವೇಣಿ ಸಂಗಮ ಮುಳುಗಡೆಯಾಗಿದೆ. ಇದರಿಂದ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
