Asianet Suvarna News Asianet Suvarna News

ಕೊಡಗಿನಲ್ಲಿ 24ರ ವರೆಗೆ ಆರೆಂಜ್‌ ಅಲರ್ಟ್‌

ಕರಾವಳಿ ಸೇರಿ ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಕೊಡಗಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕೊಡಗಿನಲ್ಲಿ ಅ.20ರಿಂದ 24ರ ವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಮತ್ತೆ ಆರೆಂಜ್‌, ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

orange alert in madikeri to be continued till October 24
Author
Bangalore, First Published Oct 20, 2019, 10:57 AM IST

ಮಡಿಕೇರಿ(ಅ.20): ಅರಬ್ಬಿ ಸಮುದ್ರ, ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಅ.20ರಿಂದ 24ರ ವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲಿ ಮತ್ತೆ ಆರೆಂಜ್‌, ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

115.5 ಮಿ.ಮೀ.ನಿಂದ 204.40 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ. 20 ರಿಂದ 23 ರ ವರೆಗೆ ಆರೆಂಜ್‌ ಅಲರ್ಟ್‌, 64.5 ಮಿ.ಮೀ. ನಿಂದ 115.50 ಮಿ.ಮೀ. ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ 23 ರಿಂದ 24 ರವರೆಗೆ ಎಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಒತ್ತುವರಿಗೊಂಡ ಜಾಗ ತೆರವುಗೊಳಿಸಿ ರಸ್ತೆ ನಿರ್ಮಿಸಿದ ತಹಸೀಲ್ದಾರ್..!

ಕೇಂದ್ರ ಹವಾಮಾನ ಇಲಾಖೆ ವರದಿ ಆಧರಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮನಿ ಜಾಯ ಅಧಿಕೃತ ಸೂಚನೆ ನೀಡಿದ್ದಾರೆ. ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ಹೆಲ್ಪ್‌ಲೈನ್‌ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ. ಸಾರ್ವಜನಿಕರು, ಪ್ರವಾಸಿಗರು ಎಚ್ಚರದಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಎಲ್ಲೆಲ್ಲಿ ಸುತ್ತಿದ್ರೂ ಮಲಗೋದಕ್ಕೆ ಮಾತ್ರ ಕಾಳಿಂಗಕ್ಕೆ ತನ್ನ ಮನೆಯೇ ಬೇಕು..!

Follow Us:
Download App:
  • android
  • ios