Asianet Suvarna News Asianet Suvarna News

ಕೊಡಗು: ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಮದ್ಯ ಮಾರಾಟವಿಲ್ಲ

ರಾಮ ಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಎಲ್ಲಾ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.

section 144 in madikeri ban on liquor sale
Author
Bangalore, First Published Nov 9, 2019, 7:42 AM IST

ಕೊಡಗು(ನ.09): ರಾಮ ಜನ್ಮ ಭೂಮಿ ಹಾಗೂ ಬಾಬರಿ ಮಸೀದಿ ವಿವಾದದ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ತೀರ್ಪು ಪ್ರಕಟವಾಗಲಿರುವುದರಿಂದ, 09.11.2019 ರ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ, ಕೊಡಗು ಜಿಲ್ಲೆಯಾದ್ಯಂತ ಕಲಂ 144 ಸಿ. ಆರ್. ಪಿ.ಸಿ ನ್ನು ಜಾರಿಗೊಳಿಸಿ ಕೊಡಗು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಆದೇಶ ನೀಡಿದ್ದಾರೆ.

ಬರಲಿದೆ ಅಯೋಧ್ಯೆ ಆದೇಶ: ಸ್ವಪಕ್ಷೀಯರಿಗೆ ಮೋದಿ ಕೊಟ್ಟ ಸಂದೇಶ?

ಅದೇಶದ ಅನ್ವಯ  5 ಕ್ಕಿಂತ ಹೆಚ್ಚು ಮಂದಿ ಗುಂಪು ಸೀರುವಂತಿಲ್ಲ ಹಾಗೂ ಸಭೆ ಸಮಾರಂಭಗಳಿಗೆ ಹಾಗೂ ಮೆರವಣಿಗೆಗೆ ಅವಕಾಶವಿರುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕ್ರಮ ಜುಗಿಸಲಾಗುವುದು ಎಂದು ಕೊಡಗು ಜಿಲ್ಲೆ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

ಮದ್ಯ ಮಾರಾಟವಿಲ್ಲ:

09-11-2019 ರಂದು ಅಯೋಧ್ಯೆ ತೀರ್ಪು ಹೊರ ಬೀಳಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಎಲ್ಲಾ ಮದ್ಯ ಮಾರಾಟ ಅಂಗಡಿಗಳಲ್ಲಿ, ಬಾರ್ & ರೆಸ್ಟೋರೆಂಟ್‌ಗಳಲ್ಲಿ ಮತ್ತು ಹೊಟೇಲ್ ಇತ್ಯಾದಿಗಳಲ್ಲಿ 09-11-2019 ರಂದು ಬೆಳಗ್ಗೆ 6.00 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಮ ಜನ್ಮಭೂಮಿಯಲ್ಲಿ ಭಾರಿ ಕಟ್ಟೆಚ್ಚರ; ಸಂಭ್ರಮಾಚರಣೆ ನಿಷೇಧ

Follow Us:
Download App:
  • android
  • ios